ಮಂಡ್ಯ ತ್ರೈಮಾಸಿಕ ಸಭೆ ಧೂಮಪಾನ ಮುಕ್ತ ಸೂಚನ ಫಲಕ ಅಳವಡಿಸಲು ಜಿಲ್ಲಾಧಿಕಾರಿ ಸೂಚನೆ

Source: S.O. News Service | By MV Bhatkal | Published on 3rd July 2019, 3:37 PM | State News | Don't Miss |

ಮಂಡ್ಯ: ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಪ್ರವಾಸಿ ಸ್ಥಳಗಳಲ್ಲಿ ಕಾನೂನು ಉಲ್ಲಂಘಿಸಿದವರ ಅಂಗಡಿಗಳನ್ನು ತೆರವುಗೊಳಿಸಬೇಕೆಂದು ಎಂದು ಅಪರ ಜಿಲ್ಲಾಧಿಕಾರಿಗಳಾದ ಟಿ.ಯೊಗೇಶ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಮೊದನೇ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾರ್ವಜನಿಕರ ಸ್ಥಳಗಳಲ್ಲಿ ತಂಬಾಕು ಸೇವನೆ ಮಾಡಿದರೇ ದಂಡ ಹಾಗೂ ಕಾನೂನು ಉಲ್ಲಂಘಿಸಿದವರಿಗೆ ಕೇಸು ದಾಖಲಿಸಿ ತಂಬಾಕು ಸಾಮಾಗ್ರಿ ವಶಪಡಿಸಿಕೊಳ್ಳಬೇಕು ಎಂದು ಅವರು ಕಾನೂನು ರೀತಿ ಅಗತ್ಯ ಕ್ರಮವಹಿಸಲು ಎಲ್ಲಾ ತಾಲ್ಲೂಕುಗಳ ಅಧಿಕಾರಿಗಳಿಗೆ ಮುಂದಾಗಬೇಕು ಹಾಗೂ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿಯೂ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು. 
ವಿವಿಧ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಸಾರ್ವಜನಿಕ ಧೂಮಪಾನ ಮುಕ್ತ ಗ್ರಾಮ ನಾಮಫಲಕವನ್ನು ಅಳವಡಿಸಬೇಕು. ನಗರ ಸಭೆ ವತಿಯಿಂದ ನಗರ ಪ್ರದೇಶಗಳಲ್ಲಿ ಕೋಟ್ಟಾ ಕಾಯ್ದೆಯ ಬಗ್ಗೆ ನಿರಂತರವಾಗಿ ಮುಂಜಾನೆ ಕಸವಿಲೇವಾರಿ ಮಾಡುವ ವಾಹನಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡಿಸಲು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು. 
ಅಂಗಡಿಗಳು ನಿಯಮಗಳಿಗೆ ಸಂಬಂಧಿಸಿದ ಸೆಕ್ಷನ್ 4 ಮತ್ತು 6ಎ ಗಳ ಸೂಚನಾ ಫಲಕಗಳನ್ನು ಸಂಬಂಧಪಟ್ಟ ಎಲ್ಲ ಅಂಗಡಿಗಳ ಮುಂದೆ ತಪ್ಪದೆ ಅಳವಡಿಸಬೇಕು. ಈ ಸಂಬಂಧ ಸಾರ್ವಜನಿಕರಿಗೆ ಅರಿವು ಮೂಡಿಸಲು ಹೆಚ್ಚು ಪ್ರಚಾರ ಕಾರ್ಯ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಮಂಚೇಗೌಡ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...