ಮಂಡ್ಯ : ಸಮಗ್ರ ಕುಡಿಯುವ ನೀರು ಯೋಜನೆಗೆ ಕ್ರಮವಹಿಸಿ: ಭೈರತಿ ಬಸವರಾಜ್

Source: SO News | By Laxmi Tanaya | Published on 20th January 2022, 10:13 PM | State News | Don't Miss |

ಮಂಡ್ಯ : ನಗರದಾದ್ಯಂತ ವಿಶೇಷವಾಗಿ ವಿವೇಕಾನಂದ ಬಡಾವಣೆ ಹಾಗೂ ಹೌಸಿಂಗ್ ಬೋರ್ಡ್ ವ್ಯಾಪ್ತಿಯಲ್ಲಿ  ಕುಡಿಯುವ ನೀರಿನ ಕಾಮಗಾರಿಯನ್ನು ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಿ 24×7 ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರಾಭಿವೃದ್ಧಿ ಖಾತೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ  ಭೈರತಿ ಬಸವರಾಜ್ ಅವರು ತಿಳಿಸಿದರು.

 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂದಿನ ಒಂದು ತಿಂಗಳೊಳಗಾಗಿ ನಗರದಾದ್ಯಂತ ಅತ್ಯುತ್ತಮ ಗುಣಮಟ್ಟದ ಕುಡಿಯುವ ನೀರು ಪೂರೈಸುವಲ್ಲಿ ಶೀಘ್ರವೇ ಕ್ರಮವಹಿಸುವಂತೆ ನಗರಾಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಮಂಡ್ಯ ನಗರದಲ್ಲಿ ಸಾರ್ವಜನಿಕರಿಗೆ  ಮೂಲಭೂತ ಸೌಕರ್ಯಗಳಲ್ಲಿ ಯಾವುದೇ ತೊಂದರೆಯಾಗದಂತೆ ನಿಗಾವಹಿಸಿ. ರಾಜ್ಯ ಸರ್ಕಾರವು ಮಂಡ್ಯ ನಗರಸಭೆಗೆ 40 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿದ್ದು, ನಗರದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸುವಂತೆ ಹಾಗೂ ನಗರದಲ್ಲಿ ಒಳಚರಂಡಿ ಸೇರಿದಂತೆ ಎಲ್ಲಾ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಹೊಸ ಬಡಾವಣೆಗಳನ್ನು ನಿರ್ಮಿಸುವಂತೆ ಹಾಗೂ ಹಾಳಾಗಿರುವ ಬಡಾವಣೆಗಳ ಕಾಮಗಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದರು.
ಸಭೆಯಲ್ಲಿ ಶಾಸಕರಾದ ಸಿ.ಎಸ್ ಪುಟ್ಟರಾಜು, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ ಶ್ರೀಕಂಠೇಗೌಡ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಅಪರ ಜಿಲ್ಲಾಧಿಕಾರಿ ವಿ.ಆರ್ ಶೈಲಜಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿವ್ಯಪ್ರಭು,  ಉಪವಿಭಾಗಾಧಿಕಾರಿ ಐಶ್ವರ್ಯ, ನಗರಸಭೆ ಆಯುಕ್ತರು ಎಸ್. ಲೋಕೇಶ್, ನಗರಸಭೆ ಅಧ್ಯಕ್ಷ ಹೆಚ್.ಎಸ್ ಮಂಜು, ಮುಡಾ ಅಧ್ಯಕ್ಷರಾದ ದೊರೆಸ್ವಾಮಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...