ಮಂಗಳೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ನಡೆದ ಕಸರತ್ತು.

Source: SO News | By Laxmi Tanaya | Published on 27th February 2021, 12:23 PM | Coastal News | Don't Miss |

ಮಂಗಳೂರು :  ಮಹಾನಗರ ಪಾಲಿಕೆಯ ಮುಂದಿನ ಅವಧಿಯ ಮೇಯರ್ ಉಪ ಮೇಯರ್ ಅಭ್ಯರ್ಥಿ ಹೆಸರು 2ದಿನಗಳಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ  . ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಸಹಿತ ಮಂಗಳೂರು ದಕ್ಷಿಣ ಮತ್ತು ಉತ್ತರ ಶಾಸಕರ ಸಮಕ್ಷಮದಲ್ಲಿ ಶನಿವಾರ ಮಹತ್ವದ ಸಭೆ ನಡೆಯುವ ಸಾಧ್ಯತೆಯಿದೆ. 

ಸಭೆಯಲ್ಲಿ ಮೇಯರ್ ಮತ್ತು ಉಪಮೇಯರ್ ಅಭ್ಯರ್ಥಿ ಅಂತಿಮಗೊಳ್ಳುವ ನಿರೀಕ್ಷೆ ಇದೆ . ಹಾಲಿ ಮೇಯರ್ ದಿವಾಕರ್ ಪಾಂಡೇಶ್ವರ ಅವರ ಅಧಿಕಾರ ಅವಧಿ ಫೆಬ್ರವರಿ 28ರಂದು ಕೊನೆಗೊಳ್ಳಲಿದ್ದು ನೂತನ ಮೇಯರ್ ಉಪಮೇಯರ್ ಆಯ್ಕೆ ಮಾರ್ಚ್ 2ರಂದು ಚುನಾವಣೆ ನಡೆಯಲಿದೆ  . 

ಪಾಲಿಕೆಯಲ್ಲಿ ಮೂರನೇ ಅವಧಿಯ ಮೇಯರ್ ಉಪ ಮೇಯರ್ ಸ್ಥಾನಕ್ಕೆ ಮೀಸಲಾತಿ ಈಗಾಗಲೇ ಪ್ರಕಟಗೊಂಡಿದ್ದು ಮೇಯರ್ ಸಾಮಾನ್ಯ ಮತ್ತು ಉಪ ಮೇಯರ್ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದೆ  . ಈ ಬಾರಿ ಮೇಯರ್ ಸ್ಥಾನ ಮಂಗಳೂರು ದಕ್ಷಿಣ ಕ್ಷೇತ್ರದ ಪಾಲಾಗುವ ಸಾಧ್ಯತೆ ಇದ್ದು ಪಾಲಿಕೆಯ ಹಿರಿಯ ಸದಸ್ಯರಾದ ಪ್ರೇಮಾನಂದ ಶೆಟ್ಟಿ ಸುಧೀರ್ ಶೆಟ್ಟಿ ಕಣ್ಣೂರು ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಆದರೆ ಪಕ್ಷದ ತೀರ್ಮಾನ ಏನೆಂಬುದು ಕೆಲದಿನಗಳಲ್ಲಿಯೇ ಹೊರಬೀಳಲಿದೆ  .

 ಹಾಲಿ ಮೇಯರ್ ದಿವಾಕರ್ ಪಾಂಡೇಶ್ವರ ಅವರ ಅಧಿಕಾರ ಅವಧಿ ಫೆಬ್ರವರಿ 28ರಂದು ಪೂರ್ಣಗೊಳ್ಳಲಿದೆ  , ಆದರೆ ಮಾರ್ಚ್ 2ರಂದು ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ನಿಯಮದ ಪ್ರಕಾರ ಮಾರ್ಚ್ ಎರಡರವರೆಗೆ ಹಾಲಿ ಮೇಯರ್ ದಿವಾಕರ ಪಾಂಡೇಶ್ವರ ಮತ್ತು ಉಪಮೇಯರ್ ವೇದಾವತಿ ಅವರ ಅಧಿಕಾರ ಅವಧಿ ವಿಸ್ತರಣೆ ಗೊಳ್ಳಲಿದೆ ಎಂದು ಪಾಲಿಕೆ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ .

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...