ಮಂಗಳೂರು - ಪೂನಾ: ನಾನ್ ಎಸಿ. ಸ್ಲೀಪರ್ ಬಸ್ ಸೌಲಭ್ಯ

Source: SO News | By Laxmi Tanaya | Published on 27th October 2020, 7:57 PM | Coastal News |

ಮಂಗಳೂರು : ಕೆಎಸ್‍ಆರ್‍ಟಿಸಿ ಮಂಗಳೂರು ವಿಭಾಗದ ಬಸ್ ನಿಲ್ದಾಣದಿಂದ ಪೂನಾಗೆ ಸಾರ್ವಜನಿಕರ ಬೇಡಿಕೆಗನುಗುಣವಾಗಿ ನಾನ್  ಎ.ಸಿ. ಸ್ಲೀಪರ್ ವಾಹನಗಳೊಂದಿಗೆ ಸಾರಿಗೆ ಸೌಲಭ್ಯವನ್ನು ಅಕ್ಟೋಬರ್ 26 ರಿಂದ ಪುನ: ಆರಂಭಿಸಲಾಗಿದೆ.

   ಮಂಗಳೂರಿನಿಂದ ನಾನ್ ಎಸಿ. ಸ್ಲೀಪರ್ ಬಸ್ ಸಂಜೆ 4 ಗಂಟೆಗೆ ಹೊರಟು ಸುರತ್ಕಲ್, ಮೂಲ್ಕಿ, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲಾ, ಬೆಳಗಾವಿ, ಸತಾರ ಮೂಲಕ ಪೂನಾಕ್ಕೆ ಬೆಳಿಗ್ಗೆ 6 ಗಂಟೆಗೆ ತಲುಪಲಿದೆ. ಪೂನಾದಿಂದ ಸಂಜೆ 6.30 ಕ್ಕೆ ಸತಾರ, ಬೆಳಗಾವಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಪಡುಬಿದ್ರಿ, ಮೂಲ್ಕಿ, ಸುರತ್ಕಲ್ ಮೂಲಕ ಮಂಗಳೂರಿಗೆ ಬೆಳಿಗ್ಗೆ 7 ಗಂಟೆಗೆ ತಲುಪಲಿದೆ. ಪ್ರಯಾಣ ದರ ರೂ. 1,500.

       ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್‍ಒಪಿ ನಿರ್ದೇಶನಗಳಂತೆ ಪ್ರಯಾಣಿಸಲು ಅವಕಾಶಗಳನ್ನು ಕಲ್ಪಿಸಲಾಗುತ್ತದೆ. ಮುಂಗಡ  ಟಿಕೇಟು ಬುಕ್ಕಿಂಗ್ ವ್ಯವಸ್ಥೆಗಾಗಿ  ಆನ್‍ಲೈನ್ ನಲ್ಲಿ   ಅಥವಾ ಹತ್ತಿರದ ರಿಸರ್ವೇಶನ್ ಕೌಂಟರನ್ನ ಸಂಪರ್ಕಿಸಬಹುದು ಎಂದು ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...