ಮಂಗಳೂರು: ವ್ಯಾಪಕ ವಿರೋಧದ ಕಾರಣ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Source: The New Indian Express | By MV Bhatkal | Published on 26th June 2022, 12:13 AM | Coastal News | Don't Miss |

ಮಂಗಳೂರು: ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮವನ್ನು ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ. 

ಜೂ.25 ರಂದು ಶಾಸಕ ವೇದವ್ಯಾಸ ಕಾಮತ್ ಅವರ ಸೇವಾಂಜಲಿ ಟ್ರಸ್ಟ್ ನ ಸಹಯೋಗದಲ್ಲಿ ಚಿಂತನ ಗಂಗಾ ಮಂಗಳೂರಿನ ಕೆನರಾ ಶಾಲೆ ಆವರಣದಲ್ಲಿ ನಾಗರಿಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ಕೆಲವು ಸಂಘಟನೆಗಳು ಸ್ಥಳದಲ್ಲಿ ಘೇರಾವ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಈ ಕಾರ್ಯಕ್ರಮಕ್ಕೆ ಮಂಗಳೂರು ವಿವಿ ಉಪಕುಲಪತಿಗಳಾದ ಪ್ರೊ.ಪಿ.ಎಸ್‌. ಯಡಪಡಿತ್ತಾಯ ಅವರನ್ನು ಅತಿಥಿಗಳನ್ನಾಗಿ ಆಹ್ವಾನಿಸಲಾಗಿತ್ತು.
 
ಕಾಂಗ್ರೆಸ್, ಡಿವೈಎಫ್ಐ, ಜೆಡಿಎಸ್, ಸಿಪಿಐಎಂ ಸೇರಿದಂತೆ ಇತರ ಸಂಘಟನೆಗಳನ್ನೊಳಗೊಂಡ ದೇಶಪ್ರೇಮಿ ಸಂಘಟನೆಗಳ ಒಕ್ಕೂಟ ಸನ್ಮಾನ ಕಾರ್ಯಕ್ರಮವನ್ನು ವಿರೋಧಿಸಿ ನಗರದಲ್ಲಿ ಮೆರವಣಿಗೆ ನಡೆಸಲು ನಿರ್ಧರಿಸಿದ್ದವು. ಅಷ್ಟೇ ಅಲ್ಲದೇ ನಾರಾಯಣಗುರು, ಕುವೆಂಪು, ಅಂಬೇಡ್ಕರ್ ಅವರಿಗೆ ಅಗೌರವ ತೋರಿದ್ದ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಎಂಯು ವಿಸಿ ಗೆ ಒತ್ತಾಯಿಸಿದ್ದರು

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...