ಮಂಗಳೂರು: ಭಟ್ಕಳ ಮೂಲದ ಯುವಕನಿಗೆ ಕೊರೋನಾ ವೈರಸ್ ದೃಢ -ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮಾಹಿತಿ

Source: sonews | By Staff Correspondent | Published on 22nd March 2020, 6:51 PM | Coastal News | Don't Miss |

ಮಂಗಳೂರು: ಭಟ್ಕಳ ಮೂಲದ ವ್ಯಕ್ತಿಯೊಬ್ಬರಲ್ಲಿ (22 ವಯಸ್ಸು) ಕೊರೊನಾವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮಾಹಿತಿ ನೀಡಿದ್ದಾರೆ. ಈ ವ್ಯಕ್ತಿಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕಿತ ವ್ಯಕ್ತಿ ಮಾರ್ಚ್ 19ರಂದು ಸ್ಪೈಸ್ ಜೆಟ್ ವಿಮಾನದ  ಮೂಲಕ ಬೆಳಗ್ಗೆ 5:45ಕ್ಕೆ ದುಬೈಯಿಂದ ಆಗಮಿಸಿದ್ದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಪರೀಕ್ಷೆಗೊಳಪಡಿಸಿದಾಗ ವೈರಸ್ ಲಕ್ಷಣಗಳನ್ನು ಕಾಣಿಸಿಕೊಂಡಿದ್ದು, ನೇರವಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹಾಗಾಗಿ ಇತರ ಜನರು ಅವರ ಸಂಪರ್ಕದಲ್ಲಿರುವ ಸಾಧ್ಯತೆಯಿಲ್ಲ. ಆದರೆ ವಿಮಾನದಲ್ಲಿದ್ದ 165 ಪ್ರಯಾಣಿಕರ ಮೇಲೂ ನಿಗಾ ಇಡಲಾಗುವುದು ಎಂದವರು ಹೇಳಿದರು.

ಕೃಪೆ:vbnewsonlie.in

Read These Next

ಜೆಡಿಎಸ್ ಮತ ಬುಟ್ಟಿಗೆ ’ಕೈ’ ಹಾಕಿದ ಅಂಜಲಿ ತಾಯಿ ; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡರ ಮನೆಗೆ ಭೇಟಿ

ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...