ಕಿರುಚಿತ್ರ ನಟ-ನಟಿಯ ಮೇಲೆ ಪೊಲೀಸ್ ದೌರ್ಜನ್ಯ ಆರೋಪ; ಇಬ್ಬರು ಪೊಲೀಸರ ಅಮಾನತ್ತು

Source: sonews | By Staff Correspondent | Published on 2nd January 2018, 11:09 PM | Coastal News | State News | Special Report | Incidents | Don't Miss |

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಿತ್ರ ನಟ ಮತ್ತು ನಟಿಯನ್ನು ವಶಕ್ಕೆ ತೆಗೆದುಕೊಂಡು ಠಾಣೆಯಲ್ಲಿ ಕೂಡಿಹಾಕಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದಡಿ ಸುಬ್ರಹ್ಮಣ್ಯ ಠಾಣೆಯ ಕಾನ್‌ಸ್ಟೆಬಲ್‌ಗಳಾದ ಪ್ರಶಾಂತ್‌ಕುಮಾರ್ ಮತ್ತು ಸಂಧ್ಯಾಮಣಿ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಮೈಸೂರು ಮೂಲದ ಚಿತ್ರನಟಿಯೊಬ್ಬರು ಇತ್ತೀಚೆಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪೂಜೆಗಾಗಿ ಬಂದು ತನ್ನ ಸ್ನೇಹಿತ ಕಿರುಚಿತ್ರ ನಟ ಬೆಳ್ಳಾರೆ ಕಲ್ಲೋಣಿಯ ಫರ್ವೇಝ್‌ನನ್ನು ಮಾತನಾಡಲು ಬರುವಂತೆ ಸೂಚಿಸಿದ್ದರು. ಅದರಂತೆ ಫರ್ವೇಝ್ ಚಿತ್ರನಟಿಯನ್ನು ಸುಬ್ರಹ್ಮಣ್ಯದಲ್ಲಿ ಭೇಟಿಯಾಗಿದ್ದರು. ಬಳಿಕ ಫರ್ವೇಝ್ ತನ್ನ ಮನೆಗೆ ಮರಳಿದರೂ ಕೂಡ ಸಂಘ ಪರಿವಾರದ ಕಾರ್ಯಕರ್ತರು ಮತ್ತು ಪೊಲೀಸರು ಜೊತೆಗೂಡಿ ನಟಿಯನ್ನು ಠಾಣೆಗೆ ಕರೆದೊಯ್ದರಲ್ಲದೆ ಬೆಳ್ಳಾರೆಯಲ್ಲಿದ್ದ ಫರ್ವೇಝ್‌ರಿಗೆ ನಟಿಯ ಮೊಬೈಲ್‌ನಿಂದ ಕರೆ ಮಾಡಿಸಿ ಕರೆಸಿಕೊಂಡಿದ್ದರು. ತದನಂತರ ಠಾಣೆಯಲ್ಲಿ ಅಕ್ರಮವಾಗಿ ಕೂಡಿ ಹಾಕಿ ಚಿತ್ರನಟನಿಗೆ ಕಾಲಿನಿಂದ ಒದ್ದು ಧರ್ಮ ನಿಂದನೆ ಮಾಡಿದ್ದರು ಎಂಬ ಆರೋಪ ವ್ಯಕ್ತವಾಗಿತ್ತು.

ಇದರ ದೃಶ್ಯಾವಳಿ ಮತ್ತು ಚಿತ್ರನಟ-ನಟಿಯ ಹೇಳಿಕೆ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮ ಜರಗಿಸಬೇಕು ಎಂಬ ಆಗ್ರಹ ಕೇಳಿ ಬಂದಿತ್ತು.

ಅದರಂತೆ ಆಂತರಿಕ ತನಿಖೆ ನಡೆಸಿದ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...