ಗಾಂಜಾ ಮಾರಾಟ ಜಾಲ ಪ್ರಕರಣ; ವೈದ್ಯ ವಿದ್ಯಾರ್ಥಿ ಸಹಿತ ಮತ್ತೆ ಮೂವರ ಬಂಧನ; 13ಕೆ ಏರಿದ ಬಂಧಿತರ ಸಂಖ್ಯೆ

Source: Vb | By I.G. Bhatkali | Published on 13th January 2023, 10:29 AM | Coastal News | State News |

ಮಂಗಳೂರು: ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಮಂಗಳೂರು ನಗರ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ.

ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಪೆಥಾಲಜಿ ಎಂಡಿ ವ್ಯಾಸಂಗ ಮಾಡುತ್ತಿರುವ ತುಮಕೂರು ಮೂಲದ ಡಾ.ಹರ್ಷ ಕುಮಾರ್, ಖಾಸಗಿ ಕಾಲೇಜಿ ನಲ್ಲಿ ಅಂತಿಮ ವರ್ಷದ ಡಿ ಫಾರ್ಮಾ ಕಲಿ ಯುತ್ತಿರುವ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಮಂಗಳೂರು ಕಸಬ ಬೆಂಗ್ರೆ ನಿವಾಸಿ, ಹಣ್ಣುಹಂಪಲು ಮಾರಾಟ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮುಹಮ್ಮದ್ ಅಫ್ರಾರ್ (23) ಬಂಧಿತ ಆರೋಪಿಗಳೆಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಬಂಧಿತ ಮೂವರು ಆರೋಪಿಗಳನ್ನು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿ ರುವ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಜಾಲವೊಂದನ್ನು ಭೇದಿಸಿರುವ ಮಂಗಳೂರು ನಗರ ಪೊಲೀಸರು ನಗರದ ಪ್ರತಿಷ್ಠಿತ 2 ವೈದ್ಯಕೀಯ ಕಾಲೇಜುಗಳ ವೈದ್ಯರು, ವೈದ್ಯಕೀಯ ಮತ್ತು ದಂತ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 10 ಮಂದಿ ಆರೋಪಿಗಳನ್ನು ಜ.11ರಂದು ಬಂಧಿಸಿದ್ದರು. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದರು. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಒಟ್ಟು ಸಂಖ್ಯೆ 13ಕ್ಕೇರಿದೆ.

ಮಂಗಳೂರಿನಲ್ಲಿ ಕಳೆದ 15 ವರ್ಷಗಳಿಂದ ನೆಲೆಸಿರುವ ಬ್ರಿಟನ್ ಪ್ರಜೆ ನೀಲ್ ಕಿಶೋರಿ ಲಾಲ್ ರಾಮ್‌ಜಿ ಶಾ ಎಂಬಾತನನ್ನು ಮರಕ್ಕೆ ಪಡೆಯುವುದರೊಂದಿಗೆ ಪ್ರಕರಣ ಬೆಳಕಿಗೆ ಬಂದಿತ್ತು.

ಆತ ನೀಡಿದ ಮಾಹಿತಿಯನ್ನು ಆಧರಿಸಿ ವೈದ್ಯರಾದ ಕೇರಳ ಮೂಲದ ಡಾ.ಸಮೀರ್ (32) ಮತ್ತು ತಮಿಳುನಾಡಿನ ಡಾ.ಮಣಿಮಾರನ್ ಮುತ್ತು (28), ವೈದ್ಯಕೀಯ ವಿದ್ಯಾರ್ಥಿನಿಯರಾದ ಕೇರಳದ ಡಾ.ನಾದಿಯಾ ಸಿರಾಜ್ (24), ಆಂಧ್ರ ಪ್ರದೇಶದ ಡಾ.ವರ್ಷಿಣಿ ಪ್ರಾಥಿ (26), ಮಹಾರಾಷ್ಟ್ರ ಪುಣೆಯ ಡಾ.ಇರಾ ಬಾಸಿನ್ (23), ಪಂಜಾಬ್ ಚಂಡಿಗಡದ ಡಾ.ರಿಯಾ ಚಡ್ಡಾ (22), ವೈದ್ಯ ವಿದ್ಯಾರ್ಥಿಗಳಾದ ಚಂಡಿಗಡದ ಡಾ.ಭಾನು ಧಹಿಯಾ(27), ದಿಲ್ಲಿಯ ಡಾ.ಕ್ಷಿತಿಜ್ ಗುಪ್ತಾ (25) ಮತ್ತು ಬಂಟ್ವಾಳ ತಾಲೂಕಿನ ಮಾರಿಪಳ್ಳದ ಮುಹಮ್ಮದ್ ರವೂಫ್ ಗೌಸ್ (34) ಎಂಬವರನ್ನು ಬಂಧಿಸಿದ್ದಾರೆ.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...