ಮಂಗಳೂರು: ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ ಕ್ರಮ: ಸಿಎಂv

Source: Vb | By I.G. Bhatkali | Published on 3rd August 2023, 10:28 AM | State News |

ಮಂಗಳೂರು: ಅನೈತಿಕ ಪೊಲೀಸ್‌ಗಿರಿ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಯಾರೇ ಮಾಡಿದರೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದ.ಕ. ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಮಂಗಳವಾರ ಬಜ್ಜೆ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸುದ್ದಿಗಾರರನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಉಡುಪಿ ಕಾಲೇಜೊಂದರ ಶೌಚಾಲಯದಲ್ಲಿ ನಡೆದಿದೆ ಎನ್ನಲಾದ ವಿದ್ಯಾರ್ಥಿನಿಯ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದು ಎಫ್‌ಐಆರ್ ದಾಖಲಾಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್‌ಐಟಿಗೆ ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಕೇಂದ್ರ ಮಹಿಳಾ ಆಯೋಗದ ಸದಸ್ಯೆ ಉಡುಪಿಗೆ ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಯಾವುದೇ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ಪ್ರಕರಣದ ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಳಾಟಿಕೆ ಎಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಮಕ್ಕಳಾಟಿಕೆ ಎಂದು ಬಿಟ್ಟಿದ್ದರೆ ಪ್ರಕರಣ ದಾಖಲಾಗುತ್ತಿತ್ತೆಂದು ಪ್ರಶ್ನಿಸಿದರು. ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು ಎಂದು ಹೇಳಿದರು.

'ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ': ಸಾಮಾಜಿಕ ಜಾಲತಾಣಗಳಲ್ಲಿ ಸರಕಾರದ ಅಥವಾ ವ್ಯಕ್ತಿಗಳ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ವೇಳೆ ಸರಕಾರವನ್ನು ಟೀಕೆ ಮಾಡಿದರೂ ಕ್ರಮ ಕೈಗೊಳ್ಳುತ್ತಿದ್ದೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಟೀಕಿಸಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

'ಪರಿಸರ ಸಂರಕ್ಷಣೆಯಲ್ಲಿ ಸರಕಾರ ಹಿಂದೆ ಬೀಳುವುದಿಲ್ಲ' ಕಸ್ತೂರಿ ರಂಗನ್ ವರದಿ ಬಗ್ಗೆ ಕೇಂದ್ರ ಸರಕಾರ ತೀರ್ಮಾನ ಕೈಗೊಳ್ಳಬೇಕಿದೆ. ಪರಿಸರ ಸಂರಕ್ಷಣೆಯ ವಿಚಾರದಲ್ಲಿ ರಾಜ್ಯ ಸರಕಾರ ಹಿಂದೆ ಬೀಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಟ್ ಕಾಯಿನ್ ಎಸ್‌ಐಟಿ ತನಿಖೆ
ಬಿಟ್ ಕಾಯಿನ್ ವಿಚಾರದಲ್ಲಿ ಎಸ್‌ಐಟಿ ವತಿಯಿಂದ ಇನ್ನೂ ಯಾರಿಗೂ ನೋಟಿಸ್ ಹೋಗದಿರುವ ಬಗ್ಗೆ ಮಾತನಾಡಿ ಎಸ್‌ಐಟಿ ಕ್ರಮವನ್ನು ವಹಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Read These Next

ಸಿಎಂ ಸಿದ್ದರಾಮಯ್ಯರಿಂದ ಪ್ರಧಾನಿ ಮೋದಿ ಭೇಟಿ; ನೀರಾವರಿ ಯೋಜನೆಗಳಿಗೆ ನೆರವು ಕೋರಿ ಮನವಿ; ನಬಾರ್ಡ್ ಸಾಲದ ಪ್ರಮಾಣ ಕಡಿತಕ್ಕೆ ಆಕ್ಷೇಪ

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಭದ್ರಾ ಮೇಲ್ದಂಡೆ, ಮಹಾದಾಯಿ, ಮೇಕೆದಾಟು ನೀರಾವರಿ ...

ರಾಜ್ಯದ ಮೂರೂ ಕ್ಷೇತ್ರಗಳು ಕೈವಶ; ಉಪಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ ಎನ್‌ಡಿಎ

ರಾಜ್ಯದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆಗೆ ಕಾರಣವಾಗಿದ್ದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ...

ನ.21 ರಿಂದ ಮುರ್ಡೇಶ್ವರದಲ್ಲಿ ಮತ್ಸ ಮೇಳ; ಪ್ರಥಮ ಬಾರಿಗೆ ಉತ್ತರಕನ್ನಡದಲ್ಲಿ ಆಯೋಜನೆ; ಮೂರು ದಿನಗಳ ಕಾಲ ಮೀನು ಖಾದ್ಯ ಪ್ರಿಯರಿಗೆ ಹಬ್ಬ

ಉತ್ತರಕನ್ನಡ ಜಿಲ್ಲೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ವಿಶ್ವ ಮೀನುಗಾರಿಕಾ ದಿನಾಚರಣೆಯ ಅಂಗವಾಗಿ ನ.21ರಿಂದ ನ.23ರವರೆಗೆ ...

ಶಿಗ್ಗಾಂವಿ: ಬ್ಯಾಲೆಟ್ ಬಾಕ್ಸ್‌ ಗಳು ಚರಂಡಿಯಲ್ಲಿ ಪತ್ತೆ; ಉಪಚುನಾವಣೆ ಮುಗಿದ ಮರುದಿನವೇ ನಡೆದ ಘಟನೆ

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಜಿಲ್ಲೆಯ ಯತ್ತಿನಹಳ್ಳಿ ಗ್ರಾಮದ ಬಳಿಯ ...