ಕೋವಿಡ್ ವಾರ್ಡಲ್ಲಿ ವೆಂಟಿಲೆಟರ್ ಕೊರತೆ : ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

Source: SO News | By Laxmi Tanaya | Published on 7th September 2020, 10:46 PM | Coastal News |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ರೋಗಿಗಳಿಗೆ ವೆಂಟಿಲೇಟರ್ ಕೊರತೆ ಇದೆ ಎಂದು ಆರೋಪಿಸಿ ಜಿಲ್ಲಾಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು.


ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೊರೊನಾ ರೋಗಿಗಳಿಗೆ ವೆಂಟಿಲೇಟರ್ ವ್ಯವಸ್ಥೆ ಮಾಡದ ಸರಕಾರದ ವಿರುದ್ದ ಕಾಂಗ್ರೆಸ್ ನಾಯಕರು ಘೋಷಣೆ ಕೂಗಿದರು. 


ಕೋವಿಡ್ 19 ನ ರೋಗಿಗಳಿಗೆ ವೆಂಟಿಲೇಟರ್, ಐಸಿಯು ಬೆಡ್, ಆಕ್ಸಿಜನ್ ಬೆಡ್ ಗಳು ಭರ್ತಿಯಾಗಿದೆ ಎಂದು ಜಿಲ್ಲಾಧಿಕಾರಿಗಳು ಪತ್ರಿಕೆಗಳಲ್ಲಿ ಹೇಳಿಕೆ ನೀಡಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದರು. ಕೊರೋನಾ ನಿರ್ವಣೆಯಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಜನ ಪ್ರತಿನಿಧಿಗಳು ರಾಜೀನಾಮೆ ಸಲ್ಲಿಸಬೇಕೆಂದು ಒತ್ತಾಯಿಸಿದರು. 


ಪ್ರತಿಭಟನೆಯಲ್ಲಿ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕರಾದ ಜೆ ಆರ್ ಲೋಬೋ, ಮೊಯ್ದಿನ್ ಬಾವ ಉಪಸ್ಥಿತರಿದ್ದರು

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...