ಮಂಗಳೂರು: ಗಾಂಜಾ ಮಾರಾಟ ಜಾಲ ಪತ್ತೆ; ಇಬ್ಬರು ವೈದ್ಯರು, 7 ವೈದ್ಯ ವಿದ್ಯಾರ್ಥಿಗಳ ಸಹಿತ 10 ಮಂದಿಯ ಬಂಧನ;

Source: Vb | By I.G. Bhatkali | Published on 12th January 2023, 7:54 AM | Coastal News | State News |

ಮಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿ ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ಇಬ್ಬರು 7 ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ.

ಈ ಬಗ್ಗೆ ತನ್ನ ಕಚೇರಿಯಲ್ಲಿಂದು ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಪ್ರಮುಖ ಆರೋಪಿ ಯು.ಕೆ. ಮೂಲದ ಸಾಗರೋತ್ತರ ಭಾರತೀಯ ಪ್ರಜೆ ಗಾಂಜಾ ಪೆಡ್ಲರ್ ನೀಲ್ ಕಿಶೋರಿ ಲಾಲ್ ರಾಮ್ ಜೀ ಶಾ(38), ವೈದ್ಯರಾದ ಕೇರಳದ ಡಾ.ಸಮೀ‌ (32) ಮತ್ತು ತಮಿಳುನಾಡಿನ ಡಾ.ಮಣಿಮಾರನ್ ಮುತ್ತು(28), ವೈದ್ಯಕೀಯ ವಿದ್ಯಾರ್ಥಿನಿಯರಾದ ಕೇರಳದ ಡಾ.ನಾದಿಯಾ ಸಿರಾಜ್ (24), ಆಂಧ್ರ ಪ್ರದೇಶದ ಡಾ.ವರ್ಷಿಣಿ ಪ್ರಾಥಿ(26), ಮಹಾರಾಷ್ಟ್ರ ಪುಣೆಯ ಡಾ.ಇರಾ ಬಾಸಿನ್ (23), ಪಂಜಾಬ್ ಚಂಡಿಗಡದ ಡಾ.ರಿಯಾ ಚಡ್ಡಾ(22), ವೈದ್ಯ ವಿದ್ಯಾರ್ಥಿಗಳಾದ ಚಂಡಿಗಡದ ಡಾ.ಭಾನು ಧಹಿಯಾ(27), ದಿಲ್ಲಿಯ ಡಾ.ಕ್ಷಿತಿಜ್ ಗುಪ್ತಾ(25) ಮತ್ತು ಬಂಟ್ವಾಳ ತಾಲೂಕಿನ ಮಾರಿಪಳ್ಳದ ಮುಹಮ್ಮದ್ ರವೂಫ್ ಅಲಿಯಾಸ್ ಗೌಸ್ (34) ಬಂಧಿತ ಆರೋಪಿಗಳೆಂದು ತಿಳಿಸಿದ್ದಾರೆ.

ಬಂಧಿತರ ಪೈಕಿ ಡಾ.ಸಮೀರ್ ನಗರದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ಮೆಡಿಕಲ್ ಆಫೀಸರ್ ಆಗಿದ್ದರೆ, ಡಾ.ಮಣಿಮಾರನ್ ಮುತ್ತು ಮಣಿಪಾಲದ ಮೆಡಿಕಲ್ ಕಾಲೇಜು ಆಸ್ಪತ್ರೆಯೊಂದರಲ್ಲಿ ಮೆಡಿಕಲ್ ಸರ್ಜನ್ ಆಗಿದ್ದ ಎಂದು ಕಮಿಶನರ್ ಮಾಹಿತಿ ನೀಡಿದ್ದಾರೆ.

ನಗರದ ಬಂಟ್ಸ್ ಹಾಸ್ಟೆಲ್ ರಸ್ತೆ ಬಳಿಯ ಫ್ಲ್ಯಾಟ್‌ವೊಂದರಲ್ಲಿ ಗಾಂಜಾ ಮಾರಾಟ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಇನ್‌ಸ್ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ. ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಬಿಡಿಎಸ್ ವಿದ್ಯಾರ್ಥಿಯಾಗಿರುವ ನೀಲ್ ಕಿಶೋರಿ ಲಾಲ್ ರಾಮ್ ಜೀ ಶಾನನ್ನು ಜ.7ರಂದು ವಶಕ್ಕೆ ಪಡೆಯಲಾಗಿತ್ತು. ಈತನನ್ನು ವಿಚಾರಣೆಗೆ ಒಳಪಡಿಸಿದಾಗ ನಗರದಲ್ಲಿ ಈತ ಹಲವು ವರ್ಷಗಳಿಂದ ನಡೆಸುತ್ತಿದ್ದ ಗಾಂಜಾ ಮಾರಾಟ ಪ್ರಕರಣ ಬೆಳಕಿಗೆ ಬಂತು ಎಂದರು.

ಈತನಿಂದ 50 ಸಾವಿರ ರೂ. ಮೌಲ್ಯದ 2 ಕೆ.ಜಿ. ಗಾಂಜಾ, 2 ಮೊಬೈಲ್ ಫೋನ್, 7 ಸಾವಿರ ರೂ. ನಗದು, ಡಿಜಿಟಲ್ ತೂಕ ಮಾಪನ, ಆಟಿಕೆ ಪಿಸ್ತೂಲ್‌ನ್ನು ಮರಪಡಿಸಿಕೊಳ್ಳಲಾಗಿತ್ತು. ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಮಾರಾಟ ಜಾಲದಲ್ಲಿ ಭಾಗಿಯಾಗಿರುವ ವೈದ್ಯರ ಮತ್ತು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಮಾಹಿತಿ ನೀಡಿದ ಎಂದು ಪೊಲೀಸ್ ಆಯುಕ್ತರು ವಿವರಿಸಿದರು.

ಕಿಶೋರಿ ಲಾಲ್ ನೀಡಿರುವ ಸುಳಿವಿನ ಆಧಾರದಲ್ಲಿ ನಗರದ ವಿವಿಧ ಹಾಸ್ಟೆಲ್, ಪಿಜಿ, ಖಾಸಗಿ ನಿವಾಸಗಳಿಗೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು. ಇವರಿಂದಲೂ ಗಾಂಜಾ ಮತ್ತು 9 ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ

ಇವರೆಲ್ಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ವಿವರಿಸಿದರು. ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಈತನ ಗಾಂಜಾ ವಹಿವಾಟಿನಲ್ಲಿ ಯಾವ ರೀತಿ ಭಾಗಿಯಾಗಿದ್ದರು ಎನ್ನುವುದು ತನಿಖೆಯಿಂದ ತಿಳಿದುಬರಲಿದೆ ಎಂದವರು ತಿಳಿಸಿದರು.

ಗಾಂಜಾ ಜೊತೆಗೆ ಎಂಡಿಎಂಎ ಸೇವನೆ:
ಬಂಧಿತ ಆರೋಪಿಗಳ ಪೈಕಿ ಕೆಲವು ಮಂದಿ ಆರೋಪಿಗಳು ಪೆಡ್ಲರ್ ನೀಲ್ ಕಿಶೋರಿ ಲಾಲ್‌ನ ನಿಕಟ ಸಂಪರ್ಕ ಹೊಂದಿದ್ದು, ಪಾರ್ಟಿ ಮಾಡುವಾಗ ಡ್ರಗ್ಸ್ ಸೇವಿಸುತ್ತಿದ್ದರು ಎಂಬ ಮಾಹಿತಿ ಲಭಿಸಿದೆ. ಅವರು ಗಾಂಜಾ ಜೊತೆಗೆ ಎಂಡಿಎಂಎ ಮತ್ತು ಇತರ ಸಿಂಥೆಟಿಕ್ ಡ್ರಗ್ಸ್ ಸೇವಿಸುವ ಚಟ ಹೊಂದಿದ್ದಾರೆ ಎಂಬ ಅಂಶ ಪ್ರಾಥಮಿಕ ತನಿಖೆಯಿಂದ ಬಹಿರಂಗಗೊಂಡಿದೆ ಎ೦ದು ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

15 ವರ್ಷಗಳಿಂದ ಮಂಗಳೂರಿನಲ್ಲಿರುವ ನೀಲ್ ಕಿಶೋರಿಲಾಲ್:
ಕಿಶೋರಿಲಾಲ್ ಯು.ಕೆ ಪ್ರಜೆಯಾಗಿದ್ದು, ಎನ್‌ಆರ್‌ಐ ಕೋಟಾದಲ್ಲಿ ಡೆಂಟಲ್ ಕಾಲೇಜಿ ನಲ್ಲಿ ಸೀಟ್ ಪಡೆದಿದ್ದನು. ಕಳೆದ 15 ವರ್ಷಗಳಿಂದಲೂ ಇಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದರೂ, ಈತನಿಗೆ ಶಿಕ್ಷಣ ಪೂರ್ಣಗೊಳಿಸಲು ಇನ್ನೂ ಸಾಧ್ಯವಾಗಿಲ್ಲ. ಗಾಂಜಾ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಆಯುಕ್ತರು ಹೇಳಿದರು. ಕುಕ್ಕರ್ ಬಾಂಬ್ ಬ್ಲಾಸ್ಟ್ ಘಟನೆಯ ನಂತರ ಪಿಜಿ ನಿಯಮಗಳನ್ನು ಕಠಿಣಗೊಳಿಸಲಾಗಿತ್ತು. ಜನರಿಗೆ ಯಾವುದೇ ಅನುಮಾನಗಳಿದ್ದಲ್ಲಿ ಪೊಲೀಸರಿಗೆ ತಿಳಿಸುವಂತೆ ಸೂಚಿಸಲಾಗಿತ್ತು. ಇದರ ಫಲವಾಗಿ ಗಾಂಜಾ ಮಾರಾಟ ಜಾಲವನ್ನು ಪತ್ತೆ ಹಚ್ಚಲು ಸಾಧ್ಯವಾಗಿದೆ ಎಂದು ಕಮಿಶನರ್ ತಿಳಿಸಿದ್ದಾರೆ.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...