ಮಣಿಪಾಲ ಆರೋಗ್ಯಕಾರ್ಡ್ 2023 ರ ನೋಂದಾವಣೆಯನ್ನು 30ನೇ ನವೆಂಬರ್ 2023 ರವರೆಗೆ ವಿಸ್ತರಣೆ

Source: Press release | By I.G. Bhatkali | Published on 16th November 2023, 10:25 PM | Coastal News |

ಭಟ್ಕಳ: ಸಾರ್ವಜನಿಕ ಬೇಡಿಕೆಯ ಮೇರೆಗೆ ಮಣಿಪಾಲ ಆರೋಗ್ಯಕಾರ್ಡ್ 2023 ರ ನೋಂದಾವಣೆಯನ್ನು 30ನೇ ನವೆಂಬರ್ 2023 ರವರೆಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. "ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ" ಎಂಬುದು ಮಣಿಪಾಲ್ ಆರೋಗ್ಯ ಕಾರ್ಡ್ ನ ದ್ಯೇಯ ವಾಕ್ಯ.

ಮಣಿಪಾಲ್ ಆರೋಗ್ಯ ಕಾರ್ಡ್ 2023ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 300 / -, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 600/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 750/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 500/-, ಕುಟುಂಬಕ್ಕೆ ₹ 800/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 950/- ಆಗಿರುತ್ತದೆ.

ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಈ ಕೆಳಗಿನ ರಿಯಾಯಿತಿ ಸೌಲಭ್ಯ ಪಡೆಯಬಹುದು,

ಹೊರ ರೋಗಿ ವಿಭಾಗದಲ್ಲಿ ಒಳ ರೋಗಿ ವಿಭಾಗದಲ್ಲಿ

• ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆ ಯಲ್ಲಿ ಶೇಕಡಾ 50 ರಿಯಾಯಿತಿ

• ಪ್ರಯೋಗಾಲಯ ಪರೀಕ್ಷೆ ಯಲ್ಲಿ ಶೇಕಡಾ 30 ರಿಯಾಯಿತಿ

• ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್ ಗಳಲ್ಲಿ ಶೇಕಡಾ 20 ರಿಯಾಯಿತಿ

• ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20 ರಿಯಾಯಿತಿ

• ಔಷಧಾಲಯಗಳಲ್ಲಿ ಶೇಕಡಾ 12ರವರೆಗೆ ರಿಯಾಯಿತಿ • ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯಿತಿ

ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. ಕಾರ್ಡ್ ನೋಂದಾಯಿಸಿದ ಮೊಬೈಲ್ ಸಂಖ್ಯೆಯಿಂದ 8867579797 ಗೆ ಮಿಸ್ ಕಾಲ್ ಕೊಡುವುದರ ಮೂಲಕ ನೋಂದಣಿ ಮಾಡಿದ ಆರೋಗ್ಯ ಕಾರ್ಡ್ ನ ಮಾಹಿತಿ ಪಡೆಯಬಹುದು. ಕಳೆದ 22 ವರ್ಷಗಳಲ್ಲಿ, ಸಾಮಾಜಿಕ ಕಾಳಜಿಯೊಂದಿಗೆ ನಾವು ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ರಿಯಾಯಿತಿ ದರದಲ್ಲಿ ಒದಗಿಸುತ್ತಿದ್ದೇವೆ. ಇತರ ಆಸ್ಪತ್ರೆಗಳ ರಿಯಾಯಿತಿ ಮಾದರಿಗಳನ್ನು ತಿಳಿಯಲು ಮತ್ತು ಹೆಚ್ಚಿನ ವಿವರಗಳನ್ನು www.manipalhealthcard.com ಗೆ ಲಾಗ್ ಇನ್ ಆಗುವುದರ ಮೂಲಕ ತಿಳಿದುಕೊಳ್ಳಬಹುದು . ಸಾರ್ವಜನಿಕರು ಮಣಿಪಾಲ್ ಆರೋಗ್ಯಕಾರ್ಡ್ ಅನ್ನು ಎಲ್ಲಾ ಅಧಿಕೃತ ಪ್ರತಿನಿಧಿಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ. 9980854700/ 08202923748 ಗೆ ಸಂಪರ್ಕಿಸಬಹುದು.

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವ್ಯವಸ್ಥಾಪಕರಾದ ಶ್ರೀ ಮೋಹನ್ ಶೆಟ್ಟಿ ಹಾಗೂ ಮಾರುಕಟ್ಟೆ ವಿಭಾಗದ ಪ್ರತಿನಿಧಿಯಾದ ಶ್ರೀ ಚೇತನ್ ಇವರೆಲ್ಲರೂ ಉಪಸ್ಥಿತರಿದ್ದರು.

2023ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:

• ಸೈಂಟ್ ಮಿಲಾಗ್ರೆಸ್ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್ ಭಟ್ಕಳ ಮತ್ತು ಅದರ ಎಲ್ಲಾ ಶಾಖೆಗಳು –9538894590

• ರಾಧಾಕೃಷ್ಣ ಭಟ್, ಕಸ್ತೂರ್ಬಾ ಆಸ್ಪತ್ರೆ ಮಾಹಿತಿ ಕೇಂದ್ರ, ಭಟ್ಕಳ - 9448221117

• ಚಂದ್ರು ನಾಯಕ್ - 8147282867.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...