ತನ್ನನ್ನು ಕಸಬ್ ಎಂದ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡ ವಿದ್ಯಾರ್ಥಿ! ಮಣಿಪಾಲ ಎಂಐಟಿಯಲ್ಲಿ ಘಟನೆ / ಸಹಾಯಕ ಪ್ರಾಧ್ಯಾಪಕನಿಗೆ ತರಗತಿಗೆ ಹಾಜರಾಗದಂತೆ ಸೂಚನೆ

Source: Vb | By I.G. Bhatkali | Published on 29th November 2022, 7:47 AM | Coastal News | State News |

ಉಡುಪಿ: ತರಗತಿಯಲ್ಲಿ ತನ್ನನ್ನು ಭಯೋತ್ಪಾದಕನಿಗೆ ಹೋಲಿಸಿ ಕಸಬ್ ಎಂಬುದಾಗಿ ಕರೆದ ಪ್ರಾಧ್ಯಾಪಕರ ಮಾತಿಗೆ ವಿದ್ಯಾರ್ಥಿಯೋರ್ವ ತೀವ್ರ ಆಕ್ಷೇಪ ವ್ಯಕ್ತಪಡಿಸುವ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಾಧ್ಯಾಪಕರ ಈ ನಡವಳಿಕೆಗೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆ ಮಣಿಪಾಲ ಮಾಹೆಯ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಇಂಜಿನಿಯರಿಂಗ್ ವಿಭಾಗದ ತರಗತಿಯಲ್ಲಿ ಮೂರು ನಾಲ್ಕು ದಿನಗಳ ಹಿಂದೆ ನಡೆದಿರುವುದಾಗಿ ತಿಳಿದುಬಂದಿದೆ. ಪ್ರಥಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಹಂಝಾ ತನ್ನನ್ನು ಭಯೋತ್ಪಾದಕ ಎಂದು ಕರೆದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಅವರನ್ನು ಪ್ರಶ್ನಿಸುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ.

ವೀಡಿಯೊದಲ್ಲಿ ವಿದ್ಯಾರ್ಥಿ, ಪ್ರಾಧ್ಯಾಪಕರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿ, ನೀವು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ ಎಂದು ಪ್ರಶ್ನಿಸಿದ್ದಾರೆ. ನಾನು ಹಾಸ್ಯದ ದಾಟಿಯಲ್ಲಿ ಇದನ್ನು ಹೇಳಿದ್ದೇನೆ ಎಂದ ಪ್ರಾಧ್ಯಾಪಕರಿಗೆ, 26/11 ಘಟನೆ ಹಾಸ್ಯ ಅಲ್ಲ ಮತ್ತು ಮುಸ್ಲಿಮನಾಗಿ ಈ ರೀತಿಯ ವರ್ತನೆಯನ್ನು ಪ್ರತಿನಿತ್ಯ ಅನುಭವಿಸುತ್ತಿದ್ದೇವೆ ಎಂದು ವಿದ್ಯಾರ್ಥಿ ತಿಳಿಸಿದ್ದಾರೆ.

ಇದೇ ವೇಳೆ ವಿದ್ಯಾರ್ಥಿಯ ಕ್ಷಮೆಯಾಚಿಸಿದ ಪ್ರಾಧ್ಯಾಪಕರು, ನೀನು ನನ್ನ ಮಗನ ಸಮಾನ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿ, ನೀವು ನಿಮ್ಮ ಮಗನನ್ನು ಕೂಡ ಹಾಗೆ ನಡೆಸಿ ಕೊಳ್ಳುತ್ತೀರಾ ಎಂದು ಪ್ರಶ್ನಿಸಿದ್ದಾರೆ. ನೀವು ಕ್ಷಮಿಸಿದ ಮಾತ್ರಕ್ಕೆ ನಿಮ್ಮ ಆಲೋಚನೆ ಬದಲಾಗಲು ಸಾಧ್ಯವೇ ಎಂದು ವಿದ್ಯಾರ್ಥಿ ಕೇಳಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರ ವರ್ತನೆಗೆ ವ್ಯಾಪಕ ಆಕ್ರೋಶ ಮತ್ತು ಆಕ್ಷೇಪ ವ್ಯಕ್ತವಾಗುತ್ತಿವೆ.

ಈ ವಿವಾದದ ಬಳಿಕ ಹೇಳಿಕೆ ನೀಡಿರುವ ವಿದ್ಯಾರ್ಥಿ ಹಂಝಾ, ಜನಾಂಗೀಯ ಟೀಕೆ ಎಂದಿಗೂ ಒಪ್ಪುವಂತದಲ್ಲ. ನಾನು ನನ್ನ ಪ್ರಾಧ್ಯಾಪಕರನ್ನು ಪ್ರಶ್ನಿಸುವ ವೀಡಿಯೊ ವೈರಲ್ ಆಗಿದೆ. ಈ ದೇಶ ಕಂಡ ದೊಡ್ಡ ಭಯೋತ್ಪಾದಕರಲ್ಲಿ ಒಬ್ಬನಾದ ಕಸಬ್ ಎಂಬ ಸ್ವೀಕಾರಾರ್ಹವಲ್ಲದ ಹೆಸರಿನಿಂದ ಅವರು ನನ್ನನ್ನು ಕರೆದಿರುವುದೇ ನನ್ನ ಆಕ್ಷೇಪಕ್ಕೆ ಕಾರಣ. ಬಳಿಕ ನಾನು ಪ್ರಾಧ್ಯಾಪಕರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ಕ್ಷಮೆಯಾಚಿಸಿದ್ದಾರೆ. ಪ್ರಾಧ್ಯಾಪಕ ರಿಂದ ತಪ್ಪಾಗಿದೆ. ಅದೂ ಕೂಡ ನಾನು ಮೆಚ್ಚುವ ವ್ಯಕ್ತಿ. ಹೀಗೆ ಮಾಡಿರುವುದು ಬೇಸರ ತಂದಿದೆ. ಆದರೆ ಒಂದು ಬಾರಿ ಇದನ್ನು ಕ್ಷಮಿಸಿ ಇಲ್ಲಿಗೇ ಬಿಟ್ಟು ಬಿಡಬೇಕು ಎಂದು ತಿಳಿಸಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...