ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ; ಸಿಬಿಐ ತನಿಖೆ ಆರಂಭ

Source: Vb | By I.G. Bhatkali | Published on 30th July 2023, 8:32 AM | National News |

ಇಂಫಾಲ: ಮಣಿಪುರದಲ್ಲಿ ಮೇ 4ರಂದು ಗುಂಪೊಂದು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ಶನಿವಾರ ಕೈಗೆತ್ತಿಕೊಂಡಿದೆ.

ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿರುವುದನ್ನು ದಾಖಲಿಸಲಾದ ವೀಡಿಯೊ ಜುಲೈ 19ರಂದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ವೀಡಿಯೊದಲ್ಲಿ ಗುಂಪೊಂದು ಅಸಹಾಯಕ ಮಹಿಳೆಯರಿಗೆ ಕಿರುಕುಳ ನೀಡುತ್ತಿರುವುದು, ಮಹಿಳೆಯರು ಅಳುತ್ತಾ ತಮ್ಮನ್ನು ಬಿಟ್ಟು ಬಿಡುವಂತೆ ಬೇಡಿಕೊಳ್ಳುತ್ತಿರುವುದು ದಾಖಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಶಿಫಾರಸಿನಂತೆ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಇತರ 6 ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲು ರಾಜ್ಯ ಸರಕಾರ ಈಗಾಗಲೇ ನಿರ್ಧರಿಸಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...