ಬೈಂದೂರು ಬಳಿ ಬುಲೆಟ್ ಬೈಕ್ ಡಿಕ್ಕಿಯಾಗಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಮಂಜುನಾಥ ನಾಯ್ಕ ಜಾಲಿ‌ ಸಾವು

Source: SO NEWS | By MV Bhatkal | Published on 24th August 2021, 12:36 AM | Coastal News | Don't Miss |

ಭಟ್ಕಳ:ರಸ್ತೆ ದಾಟುತ್ತಿದ್ದ ಭಟ್ಕಳ ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಜಾಲಿ ನಿವಾಸಿಯಾದ ಮಂಜುನಾಥ ದುರ್ಗಪ್ಪ ನಾಯ್ಕ (44) ಅವರ ಬೈಕ್ ಡಿಕ್ಕಿಯಾಗಿ ದಾರುಣವಾಗಿ ಮೃತಪಟ್ಟಿದ್ದಾರೆ.
ಘಟನೆ ತಾಲೂಕಿನ ಯಡ್ತರೆ ರಾಹುತನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.  ಬೈಕ್ ಸವಾರ ಉಪ್ಪುಂದ ಕರ್ಕಿಕಳಿ ನಿವಾಸಿ ಕಿರಣ್ (21) ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ
ಘಟನೆಯ ವಿವರ:
ಟೆಂಪೋ ಟ್ರ್ಯಾಕ್ಸ್ ಮೂಲಕ ಧರ್ಮಸ್ಥಳಕ್ಕೆ 
ತೆರಳಿ ಊರಿಗೆ ಹಿಂತಿರುಗುತ್ತಿದ್ದ ಭಟ್ಕಳ ಜಾಲಿಯ ತಂಡವೊಂದು ರಾಹುತನಕಟ್ಟೆ ಬಳಿ ವಾಹನ ನಿಲ್ಲಿಸಿದ್ದು,  ಮಂಜುನಾಥ್ ನಾಯ್ಕ್ ಅವರು ರಾಷ್ಟ್ರೀಯ ಹೆದ್ದಾರಿಯ ಎದುರು ಬದಿ ಇದ್ದ ಮೀನಿನ ಅಂಗಡಿಗೆ ತೆರಳುತ್ತಿದ್ದ ಸಂದರ್ಭ ಬೈಂದೂರು ಕಡೆಯಿಂದ ಬುಲೆಟ್ ಬೈಕಿನಲ್ಲಿ ಬಂದ ಯುವಕ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಅಫಘಾತದ ರಭಸಕ್ಕೆ ರಸ್ತೆ ದಾಟುತ್ತಿದ್ದ ವ್ಯಕ್ತಿಯು ಬದಿಗೆ ಎಸೆಯಲ್ಪಟ್ಟು ಅಲ್ಲಿಯೇ ಮೃತಟ್ಟಿದ್ದಾರೆ. ಬುಲೆಟ್ ಬೈಕ್ ಸವಾರ ಡಿವೈಡರ್ ಬದಿಗೆ ಬಿದ್ದಿದ್ದು, ಗಂಭೀರ ಗಾಯಗೊಂಡಿದ್ದ ಆತನನ್ನು ಚಿಕಿತ್ಸೆಗಾಗಿ ಕುಂದಾಪುರಕ್ಕೆ ಕೊಂಡೊಯ್ಯಲಾಗಿದೆ. ಬೈಂದೂರು ಪೊಲೀಸ್ ಪಿಎಸೈ ಪವನ್ ನಾಯಕ್ ಹಾಗೂ ಸಿಬ್ಬಂಧಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದು,ಈ ಬಗ್ಗೆ ಬೈಂದೂರು ಠಾಣೆ ಪ್ರಕರಣ ಆಗಿದೆ.
ಬಿಜೆಪಿ ಮುಖಂಡರಾಗಿದ್ದ ಇವರು ಹಲವು ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. ಅಪಾರ ಜನಬೆಂಬಲ ಹೊಂದಿದ್ದ ಇವರು ಭಟ್ಕಳ ವಿನಾಯಕ ಸೌಹಾರ್ಧ ಬ್ಯಾಂಕಿನ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.. ನಿಧನದ ಸುದ್ದಿ ತಿಳಿಯುತ್ತಿದ್ದಂತಯೇ ಶಾಸಕ ಸುನೀಲ ನಾಯ್ಕ ಸೇರಿದಂತೆ ನೂರಾರು ಜನರು ಬೈಂದೂರು ಅಸ್ಪತ್ರೆಯ ಎದುರು ಜಮಾಯಿಸಿದ್ದರು.ಮೃತರಿಗೆ ಪತ್ನಿ ಹಾಗೂ ಎರಡು ಮಕ್ಕಳಿದ್ದಾರೆ

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...