ಆತ್ಮಹತ್ಯೆಗೆ ಶರಣಾದ ವಿವಾಹಿತ ಮಹಿಳೆ

Source: sonews | By Staff Correspondent | Published on 10th October 2019, 6:31 PM | Coastal News | Don't Miss |

ಭಟ್ಕಳ: ತವರು ಮನೆಗೆಂದು ಬಂದಿದ್ದ ವಿವಾಹಿತ ಮಹಿಳೆಯೊಬ್ಬರು ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ರಾತ್ರಿ ತಾಲೂಕಿ ಶಿರಾಲಿ ಪಂಚಾಯತ್ ವ್ಯಾಪ್ತಿಯ ತಟ್ಟಿಹಕ್ಕಲ ಎಂಬ ಪ್ರದೇಶದಲ್ಲಿ ಜರಗಿದೆ. 

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಆಶಾ ರಾಜೇಶ್ ನಾಯ್ಕ(28) ಎಂದು ಗುರುತಿಸಲಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಭಟ್ಕಳದ ಮನಕುಳಿ ನಿವಾಸಿ ರಾಜೇಶ ನಾಯ್ಕ ಎಂಬುವರೊಂದಿಗೆ ಇವರ ವಿವಾಹವಾಗಿತ್ತು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಯಾವುದೇ ಕಾರಣ ಸ್ಪಷ್ಟವಾಗಿಲ್ಲ ಎಂದು ಹೇಳಲಾಗುತ್ತಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 


 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...