*ಮಾಸ್ಕ್, ಸ್ಯಾನಿಟೈಸರ್ ಕೊರತೆ ವಿವಿಧ ಔಷಧ ಅಂಗಡಿಗಳ ಮೇಲೆ ದಾಳಿ*

Source: so news | Published on 22nd March 2020, 12:19 AM | State News | Don't Miss |


ಹುಬ್ಬಳ್ಳಿ:ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾರ್ವಜನಿಕರ ಬೇಡಿಕೆಗನುಗುಣವಾಗಿ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳನ್ನು ಪೂರೈಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿತ್ತೂರು ಚನ್ನಮ್ಮ ವೃತ್ತದ ಬಳಿ ಇರುವ ಕರ್ನಾಟಕ ಮೆಡಿಕಲ್ ಶಾಪ್, ಕಾಮಧೇನು ಮೆಡಿಕಲ್ ಸ್ಟೋರ್ ಸೇರಿದಂತೆ ವಿವಿಧ ಔಷಧ ಅಂಗಡಿಗಳ ಮೇಲೆ ಇಂದು ದಾಳಿ ಮಾಡಿ, ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು , ನಿಗದಿತ ಎಂ.ಆರ್.ಪಿ.ದರದಲ್ಲಿ ಪೂರೈಸಬೇಕು ಎಂದು ಸೂಚಿಸಲಾಯಿತು. ಬೇಡಿಕೆ ಆಧರಿಸಿ ಸಾಮಗ್ರಿಗಳ ದಾಸ್ತಾನು ಸಂಗ್ರಹ ಇಟ್ಟುಕೊಳ್ಳಲು ನಿರ್ದೇಶನ ನೀಡಲಾಯಿತು.

ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ ದಾಳಿಯ ನೇತೃತ್ವ ವಹಿಸಿದ್ದರು. ಸಹಾಯಕ ನಿರ್ದೇಶಕ ಮಂಜುನಾಥ ರೇವಣಕರ್, ಸಹಾಯಕ ಔಷಧ ನಿಯಂತ್ರಕ ಮಲ್ಲಿಕಾರ್ಜುನ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕ ಎಸ್.ಬಿ.ಪೂಜಾರ ಮತ್ತಿತರರು ತಂಡದಲ್ಲಿ ಇದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...