ಕಾರ್ಯನಿರತ ಪತ್ರಕರ್ತರ ಸಂಘ,ದಿಂದ ಫೆ.23 ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Source: so news | Published on 17th February 2020, 7:11 AM | Coastal News | Don't Miss |

ಭಟ್ಕಳ: ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ, ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕಾ ಆಸ್ಪತ್ರೆ ಭಟ್ಕಳ, ಆದರ್ಶ ಆಸ್ಪತ್ರೆ ಉಡುಪಿ, ರಂಜನ್ ಇಂಡೇನ್ ಎಜೆನ್ಸಿ ಭಟ್ಕಳ,ಕಟ್ಟೆವೀರ ಯುವಶಕ್ತಿ
ಮುಟ್ಟಳ್ಳಿ,ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ.೨೩ರಂದು ರವಿವಾರ ತಾಲೂಕಾ ಆಸ್ಪತ್ರೆ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಎರ್ಪಡಿಸಲಾಗಿದೆ ಆದರ್ಶ ಆಸ್ಪತ್ರೆಯ ಡಾ. ಚಂದ್ರಶೇಖರ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆದರ್ಶ ಆಸ್ಪತ್ರೆಯ ತಜ್ಞ ವೈದ್ಯರುಗಳಾದ ಹಿರಿಯ ಡಯಾಲಿಸಿಸ್ ಹಾಗೂ ಹೃದ್ರೋಗ ತಜ್ಞ ಡಾ. ಜಿ.ಎಸ್. ಚಂದ್ರಶೇಖರ, ಹಿರಿಯ ನರರೋಗ ತಜ್ಞ ಡಾ. ಎ. ರಾಜಾ, ಹಿರಿಯ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞ ಡಾ. ಎಂ.ಎಸ್.ಉರಾಳ, ಎಲುಬು ಮತ್ತು ಕೀಲುರೋಗ ತಜ್ಞ ಡಾ. ಮೋಹನ್‌ದಾಸ್ ಶೆಟ್ಟಿ, ಹೃದ್ರೋಗ ತಜ್ಞ ಡಾ. ಶ್ರೀಕಾಂತ್ ಕೆ., ಸರ್ಜನ್ ಡಾ. ಪ್ರಶಾಂತ ಶೆಟ್ಟಿ, ಹಿರಿಯ ವೈದ್ಯಕೀಯ ತಜ್ಞ ಡಾ. ಉದಯಕುಮಾರ ಪ್ರಭು, ಕಿವಿ, ಮೂಗು, ಗಂಟಲು ತಜ್ಞ ಡಾ. ಭಾಸ್ಕರ ಎಂ.ಎಸ್., ನವಜಾತ ಶಿಶುಗಳ ಮತ್ತು ಮಕ್ಕಳ ರೋಗ ತಜ್ಞ ಡಾ. ಗುರುಪ್ರಸಾದ ಶೆಟ್ಟಿ, ಹಿರಿಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ. ದಮಯಂತಿ ಕೃಷ್ಣಮೋಹನ್, ವೈದ್ಯಕೀಯ ತಜ್ಞ ಡಾ. ಸುದೀಪ್ ಶೆಟ್ಟಿ, ದಂತ ವೈದ್ಯರಾದ ಡಾ. ಪ್ರಜ್ವಲ್ ಕೆ. ಶೆಟ್ಟಿ ಶಿಬಿರದಲ್ಲಿ ಭಾಗವಹಿಸುವವರಿದ್ದು ಅಗತ್ಯವಿದ್ದವರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಪಾಸಣೆಗೊಳಗಾಗುವಂತೆ ಸಂಘಟಕರು ಕೋರಿದ್ದಾರೆ.
ಪತ್ರಕರ್ತರಿಗೆ ಆರೋಗ್ಯ ಕಾರ್ಡ: ಆದರ್ಶ ಆಸ್ಪತ್ರೆ ಉಡುಪಿಯ ವತಿಯಿಂದ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಉಚಿತ ತಪಾಸಣೆಗೆ ಉಚಿತ ಆರೋಗ್ಯ ಕಾರ್ಡ ನೀಡಲಾಗುತ್ತಿದ್ದು ಒಂದು ವರ್ಷದ ಅವಧಿಯಲ್ಲಿ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಉಚಿತವಾಗಿ ತಪಾಸಣೆ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಚಿಕಿತ್ಸೆಯ ಅಗತ್ಯವಿದ್ದವರಿಗೆ ಶೇ.೨೦ರಷ್ಟು ರಿಯಾಯಿತಿಯನ್ನು ಸಹ ನೀಡಲಾಗುತ್ತಿದೆ. ಸಂಘದ ಸದಸ್ಯರು ಸಂಘದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿರಬೇಕಿದ್ದು ಸದಸ್ಯರು ಫೆ.೨೩ರಂದು ನಡೆಯಲಿರುವ ಕ್ಯಾಂಪ್‌ನಲ್ಲಿ ಹಾಜರಿದ್ದು ಕಾರ್ಡನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಭಟ್ಕಳ ಅವರು ಕೋರಿದ್ದಾರೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...