ಜೈಪುರ: ದಿಲ್ಲಿ ಪ್ರವೇಶಿಸಿ ತಡೆಬೇಲಿಗಳನ್ನು ಮತ್ತೆ ಉಲ್ಲಂಘಿಸಬೇಕಾಗಬಹುದು: ಟಿಕಾಯತ್

Source: VB | By S O News | Published on 25th March 2021, 8:45 PM | National News |

ಜೈಪುರ: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧದ ಚಳವಳಿ ವಿಭಜನೆಯಾಗಲಾರದು. ರೈತರು ಮತ್ತೆ ದಿಲ್ಲಿ ಪ್ರವೇಶಿಸಿ ತಡೆಬೇಲಿಗಳನ್ನು
ಉಲ್ಲಂಘಿಸಬೇಕಾಗಬಹುದು ಎಂದು ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು)ದ ಅಧ್ಯಕ್ಷ ರಾಕೇಶ್ ಟಿಕಾಯತ್ ಮಂಗಳವಾರ ಹೇಳಿದ್ದಾರೆ. ಅವರು (ಕೇಂದ್ರ ಸರಕಾರ) ನಮ್ಮನ್ನು ಜಾತಿ, ಧರ್ಮದ ಆಧಾರದಲ್ಲಿ ವಿಭಜಿಸಲು ಪ್ರಯತ್ನಿಸಿದರು. ಆದರೆ, ಸಫಲರಾಗಲಿಲ್ಲ. ನಾವು ದಿಲ್ಲಿ ಪ್ರವೇಶಿಸಬೇಕಿದೆ ಹಾಗೂ ತಡೆಬೇಲಿಗಳನ್ನು ಉಲ್ಲಂಘಿಸಬೇಕಿದೆ'' ಎಂದು ಜೈಪುರದಲ್ಲಿ ರೈತ ಪ್ರತಿಭಟನಾಕಾರರನ್ನು ಉದ್ದೇಶಿಸಿ ಅವರು ಹೇಳಿದರು.

ಪ್ರಚೋದನಕಾರಿ ಭಾಷಣದ ಆರೋಪ, ಶಿವಮೊಗ್ಗದಲ್ಲಿ ರಾಕೇಶ್ ಟಿಕಾಯತ್ ವಿರುದ್ದ ಸ್ವಯಂಪ್ರೇರಿತ ದೂರು ದಾಖಲಿಸಿದ ಪೊಲೀಸರು

ಶಿವಮೊಗ್ಗ: ಇಲ್ಲಿನ ಬಿ.ಎಚ್. ರಸ್ತೆಯ ಸೈನ್ಸ್ ಮೈದಾನದಲ್ಲಿ ಮಾ.20ರಂದು ನಡೆದ ದಕ್ಷಿಣ ಭಾರತದ ಮೊದಲ ರೈತರ ಮಹಾ ಪಂಚಾಯತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ವಿರುದ್ದ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಖಲಿಸಿದ ಪೊಲೀಸರು

ಹಾವೇರಿಯಲ್ಲೂ ದೂರು ದಾಖಲು

ಹಾವೇರಿ: ಇಲ್ಲಿನ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ರವಿವಾರ ನಡೆದಿದ್ದ ರೈತರ ಮಹಾಪಂಚಾಯತ್ ಸಮಾವೇಶದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಲ್ಲಿ ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ನಗರದ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿ ಸಿವೆ. ಸಮಾವೇಶದಲ್ಲಿ ಮಾತನಾಡುವಾಗ 'ಟ್ರ್ಯಾಕ್ಟರ್‌ಗಳನ್ನೇ ಶಸ್ತ್ರಾಸ್ತ್ರಗಳ ನ್ನಾಗಿ ಬಳಸಿ' ಎಂದು ಟಿಕಾಯತ್ ಹೇಳಿದ್ದಾರೆ ಎಂದು ದೂರಲಾಗಿದೆ.

ಕೇಂದ್ರ ಸರಕಾರ ಜಾರಿಗೆ ತಂದ ಮೂರು ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದ ರೈತರು ಬೆಂಗಳೂರಿಗೆ ದಿಗ್ಟಂಧನ ಹಾಕಬೇಕು. ಟ್ರ್ಯಾಕ್ಟರ್‌ಗಳನ್ನೇ ಅಸ್ತ್ರವಾಗಿ ಬಳಸಬೇಕು ಎಂದು ನೀಡಿದ್ದ ಹೇಳಿಕೆ ಆಧರಿಸಿ ಅವರ ವಿರುದ್ಧ ಐಪಿಸಿ ಕಲಂ 153ರಡಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಿಲ್ಲಿಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರವನ್ನು ಪ್ರೇರೇಪಿಸುವ ಮಾದರಿಯಲ್ಲಿ ರಾಕೇಶ್ ಟಿಕಾಯತ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಈ ಭಾಷಣದಲ್ಲಿ ಸಾರ್ವಜನಿಕರು ಉದ್ರೇಕಗೊಂಡು ದೊಂಬಿ ನಡೆಸುವ ಸಾಧ್ಯತೆ ಇದ್ದು, ಉದ್ದೇಶಪೂರ್ವಕವಾಗಿ ಈ ರೀತಿ ಜನರನ್ನು ಪ್ರಚೋದಿಸಿದ್ದಾರೆ ಎಂದು ಕೋಟೆ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...