ಅನುದಾನ ಸಕಾಲದಲ್ಲಿ ಸಮರ್ಪಕವಾಗಿ ಸದ್ಬಳಕೆಯಾಗಲಿ: ಜಿಲ್ಲಾಧಿಕಾರಿ ಎಸ್.ಅಶ್ವತಿ

Source: SO News | By Laxmi Tanaya | Published on 28th September 2021, 9:57 PM | State News | Don't Miss |

ಮಂಡ್ಯ : ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗೆ ಜಿಲ್ಲೆಗೆ ಬಿಡುಗಡೆಯಾಗಿರುವ ಅನುದಾನ ನಷ್ಟವಾಗದಂತೆ ಸಂಪೂರ್ಣವಾಗಿ ಸದ್ಬಳಕೆಯಾಗಬೇಕು. ಅನುದಾನ ನಷ್ಟವಾಗದಂತೆ  ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿರವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂ ಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಬುಡಕಟ್ಟು ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ಜಿಲ್ಲಾ ವಲಯದಲ್ಲಿ ಕಾರ್ಯಕ್ರಮ ಅನುಷ್ಠಾನಗೊಳ್ಳುತ್ತಿರುವ ಎಲ್ಲ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಕೆಲವು ಇಲಾಖೆಗಳು ಎಸ್‌ಸಿಪಿ ಯೋಜನೆ, ಟಿ ಎಸ್ ಪಿ ಯೋಜನೆಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡಿರುವುದಕ್ಕೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು.   

ಕೆಲವು ಇಲಾಖೆಗಳು ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. ಅನುದಾನ  ಸರಿಯಾಗಿ ಸದ್ಬಳಕೆಯಾಗಬೇಕು. ಇಲಾಖೆಗಳು ನಿಗದಿಪಡಿಸಿಕೊಂಡಿರುವ ಗುರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಬೇಕು, ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಸೌಲಭ್ಯ ತಲುಪಿಸಲು ಇಲಾಖೆಯ ಅಧಿಕಾರಿಗಳು ಹೆಚ್ಚಿನ ಆಸಕ್ತಿಯಿಂದ ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದರು.

ಸಭೆಯಲ್ಲಿ ಜಿ.ಪಂ ಸಿ.ಇ.ಒ ದಿವ್ಯಪ್ರಭು, ಜಿಲ್ಲಾ ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಂಗೇಗೌಡ, ಜಂಟಿ ಕೃಷಿ ನಿರ್ದೇಶಕರಾದ ಚಂದ್ರಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ  ಸೋಮಶೇಖರ್  ಹಾಗೂ  ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...