ಕೋವಿಡ್-19 ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಗೆ ಜನತೆಯ ಸಹಕಾರವಿರಲಿ

Source: sonews | By Staff Correspondent | Published on 24th March 2020, 6:43 PM | Coastal News | Don't Miss |

ಕಾರವಾರ :  ಇಡೀ ವಿಶ್ವವನ್ನ ತಲ್ಲಣಗೊಳಿಸಿದ ಕೊವೀಡ್-19 ವೈರಾಣುವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ, ವಿವಿಧ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮ, ಸೇರಿದಂತೆ ಆಕಾಶವಾಣಿಯಲ್ಲೂ ಕೂಡಾ ಮಾಹಿತಿಯನ್ನು ಹಂಚಿಕೊಳ್ಳಲಿದೆ. ಸಾರ್ವಜನಿಕರು ಮನೆಯಲ್ಲಿದ್ದು, ಜಾಗರೂಕರಾಗಿ ಸುಳ್ಳು ಸುದ್ದಿಗಳಿಗೆ ಗಮನ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಡಾ.ಕೆ ಹರೀಶಕುಮಾರ್ ಅವರು ಜನತೆಯಲ್ಲಿ ಮನವಿ ಮಾಡಿಕೊಂಡರು.
    
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿನ ಜನತೆ ಜಿವನಾವಶ್ಯಕ ಚಟುವಟಿಕೆ ಹೊರತು ಪಡಿಸಿ ಇನ್ನುಳಿದ ಅನಗತ್ಯ ಚಟುವಟಿಕೆಗಳಿಗೆ ಭಾಗಿಯಾಗದೇ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. 
    
ಕೋವಿಡ್-19 ವೈರಾಣು ಪತ್ತೆಯಾದ ಮನೆಯನ್ನು ಸಂಪೂರ್ಣ ಬಂದ್ ಮಾಡಿ ಆ ಮನೆಯ ಮುಂದೆ ಪೋಸ್ಟರ್ ಹಾಕಲಾಗುವುದು. ಅದರ ಜೊತೆಗೆ ಆ ಮನೆಯ ಎಲ್ಲಾ ಸದಸ್ಯರ ಕೈಗೆ ಮುದ್ರೆಯನ್ನು ಹಾಕಲಾಗುವುದು ಎಂದು ತಿಳಿಸಿಸದರು. ಈ ರೀತಿ ಮಾಡುವುದರಿಂದ ಅವರು ಇತರರ ಸಂಪರ್ಕಕ್ಕೆ ಬರದಂತೆ ನೋಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಸಾಧ್ಯವಾದಷ್ಟರ ಮಟ್ಟಿಗೆ ಜನರು ಮನೆಯಲ್ಲಿಯೇ ಇರುವುದು ಉತ್ತಮ. ದಿನ ನಿತ್ಯದ ಸಾಮಾಗ್ರಿಗಳಿಗೆ ಅಂಗಡಿಗಳ ಮುಂದೆ ಗುಂಪುಗುಂಪಾಗಿ ಜನ ಸೇರಿಕೊಳ್ಳಬಾರದೆಂದು ಮನವಿ ಮಾಡಿದರು.
    
ಜಿಲ್ಲಾ ಪೂಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಅವರು ಮಾತನಾಡಿ ರಾಜ್ಯ ಸೇರಿದಂತೆ ಜಿಲ್ಲೆಯಲ್ಲಿ ಕೂಡಾ ಸೆಕ್ಷನ್ 144 ಜಾರಿಯಲ್ಲಿರುತ್ತದೆ. ಇದು ಸಾರ್ವಜನಿಕರ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯಿಂದ ಜಾರಿ ಮಾಡಲಾಗಿದ್ದು, ಜನತೆ ಇದನ್ನು ಅರಿತುಕೊಂಡು ಸ್ವಯಂಪ್ರೇರಣೆಯಿಂದ ಅನುಸರಿಸತಕ್ಕದ್ದು, ಮತ್ತು ತಮ್ಮ ರಕ್ಷಣೆಯ ಜೊತೆಗೆ ಇತರರ ರಕ್ಷಣೆಯನ್ನು ಕೂಡಾ ಮಾಡಬೇಕಾಗುತ್ತದೆ ಎಂದರು.
    
ಅನಾವಶ್ಯಕವಾಗಿ ಹೊರಗಡೆ ಅಲೆದಾಡುವುದು, ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗುಂಪಾಗಿ ಕಾಣಿಸಿಕೊಂಡವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದೆಂಬ ಮುನ್ನೆಚ್ಚರಿಕೆ ನೀಡಿದರು.


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...