ಅರ್ಥಪೂರ್ಣವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಿ: ಜಿಲ್ಲಾಧಿಕಾರಿ

Source: S.O. News Service | Published on 1st October 2019, 8:13 PM | State News | Don't Miss |


ಹಾಸನ: ಶಾಂತಿಯುತವಾಗಿ ಮತ್ತು ಅರ್ಥಪೂರ್ಣವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಸಬೇಕೆಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಸಲಹೆ ನೀಡಿದರು.
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು .13 ರ ವಾಲ್ಮೀಕಿ ಜಯಂತಿಯ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಯಂತಿಗೆ ಸಂಬಂಧಿಸಿದಂತೆ ನಡೆಯುವ ಉಪಯುಕ್ತ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತದಿಂದ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ನಗರದ ಕಲಾಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಡೆಸಲು ಜಿಲ್ಲಾಧಿಕಾರಿ ಅವರ ತಿರ್ಮಾನಕ್ಕೆ ಜನಾಂಗದ ಮುಖಂಡರುಗಳು ಸಹಮತ ವ್ಯಕ್ತಪಡಿಸಿದರು. 
ಕಾರ್ಯಕ್ರಮಕ್ಕೆ ಉತ್ತಮರಾದ ಸಂಪನ್ಮೂಲ ವ್ಯಕ್ತಿಯನ್ನ ಆಯ್ಕೆ ಮಾಡುವಂತೆ ಹಾಗೂ ಯಾವುದೇ ವಿವಾದಗಳಿಲ್ಲದಂತೆ ಆಯ್ದ ಅರ್ಹ ಸಾಧಕರಿಗೆ ಸನ್ಮಾನ ಮಾಡುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಸಲಹೆ ನೀಡಿದರು. 
ಕಾರ್ಯಕ್ರಮದ ದಿನ ಸರ್ಕಾರದಿಂದ ವಾಲ್ಮೀಕಿ ನಾಯಕ ಜನಾಂಗಕ್ಕಿರುವ ವಿವಿಧ ಯೋಜನೆಗಳ ಕುರಿತಾಗಿ ಕರಪತ್ರಗಳನ್ನು ಮುದ್ರಿಸಿ ಹಂಚುವ ಮೂಲಕ ಮಾಹಿತಿ ನೀಡಿ, ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಸಮಾಜ ಕಲ್ಯಾಣ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಎರಡು ಕಲಾ ತಂಡಗಳನ್ನು ನೀಡುವಂತೆ ಅವರು ಹೇಳಿದರು.
ಜಯಂತಿಯಂದು ಮೆರವಣಿಗೆ ಜಿಲ್ಲಾಧಿಕಾರಿಯವರ ಕಚೇರಿಯಿಂದ ಆರಂಭವಾಗಿ ಕಲಾಭವನ ತಲುಪುವುದೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಎಸ್ ಕುಂಬಾರ್ ತಿಳಿಸಿದರು.
ಇದೇ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಜನಾಂಗಕ್ಕೆ ಹಾಸನ ನಗರದ ಪ್ರದೇಶದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ಖಾಲಿ ನಿವೇಶನವನ್ನು ಮಂಜೂರು ಮಾಡುವಂತೆ ಜನಾಂಗದ ಮುಖಂಡರೆಲ್ಲ ಸೇರಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಸಭೆಯ ನಂತರ ವಾಲ್ಮೀಕಿ ಸಂಘದ ವತಿಯಿಂದ ಜಿಲ್ಲಾಧಿಕಾರಿ ಅವರಿಗೆ ಸನ್ಮಾನ ಮಾಡಲಾಯಿತು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀಧರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಜೆ ಸೋಮನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಬಲರಾಮ್, ವಾಲ್ಮೀಕಿ ಸಂಘದ ಅಧ್ಯಕ್ಷರುಗಳಾದ ಶೇಖರಪ್ಪ ಮತ್ತು ರಾಜಶೇಖರ್, ಕಾರ್ಯದರ್ಶಿ ಧರ್ಮಪ್ಪ ನಾಯಕ್, ಸಂಘಟನಾ ಕಾರ್ಯದರ್ಶಿ ಲಕ್ಷಣ ನಾಯಕ್, ಸಾಮಾಜಿಕ ನ್ಯಾಯ ಒಕ್ಕೂಟದ ರಾಜ್ಯಾಧ್ಯಕ್ಷೆ ಶಿವಮ್ಮಸಾಲಿ ಸೇರಿದಂತೆ ವಿವಿಧ ಸಂಘಗಳ ಮುಖಂಡರುಗಳು ಹಾಜರಿದ್ದರು.

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...