ರೈತರಿಗೆ ಬೆಳೆಹಾನಿ ಪರಿಹಾರ ತಲುಪಿಸಲು ಕ್ರಮ; ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುಂಜಾಗ್ರತೆ ವಹಿಸಿ- ಜಿ.ಪಂ. ಅಧ್ಯಕ್ಷ ವಿಜಯಲಕ್ಷ್ಮಿ ಪಾಟೀಲ.

Source: SO News | By Laxmi Tanaya | Published on 24th November 2020, 10:53 PM | State News |

ಧಾರವಾಡ : ಅತಿಯಾದ ಮಳೆಯಿಂದಾಗಿ ಮುಂಗಾರು ಹಂಗಾಮಿನ ಬೆಳೆಹಾನಿಯಾಗಿದ್ದು, ರೈತರಿಗೆ ಬೆಳೆ ಪರಿಹಾರ ತಲುಪಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಮತ್ತು ಮುಂಬರುವ ಬೇಸಿಗೆ ಕಾಲದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಸಂಬಂಧಿಸಿದ ಅಧಿಕಾರಿಗಳು ಮುಂಜಾಗೃತೆ ವಹಿಸಬೇಕೆಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ ಸೂಚಿಸಿದರು.

 ಅವರು ಮಂಗಳವಾರ ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ (ಕೆಡಿಪಿ) ಅಕ್ಟೋಬರ್ ಅಂತ್ಯದವರೆಗೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

 ಅತಿಯಾದ ಮಳೆಯಾಗಿದೆ ಎಂದು ಭಾವಿಸಿ ಮುಂಬರುವ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವದಿಲ್ಲವೆಂದು ಉದಾಸೀನ ಮಾಡದೆ ಅದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.

 ಕೃಷಿ ಇಲಾಖೆ ಅಧಿಕಾರಿಗಳು ಹೆಚ್ಚು ಮುತುವರ್ಜಿಯಿಂದ ಕೆಲಸ ಮಾಡಬೇಕು. ಈಗಾಗಲೇ ಮುಂಗಾರು ಬೆಳೆ ಹಾನಿಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಹಿಂಗಾರು ಹಂಗಾಮಿಗೆ ಅಗತ್ಯ ಬೀಜ, ರಸಗೊಬ್ಬರ, ಕಳೆನಾಶಕ ವಿತರಿಸಲು ಕ್ರಮ ಕೈಗೊಳ್ಳಲು ಅಧ್ಯಕ್ಷರು ತಿಳಿಸಿದರು.

 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿಗೆ ಪೂರೈಕೆ ಆಗುತ್ತಿರುವ ಆಹಾರ ಸಾಮಗ್ರಿಗಳ ಗುಣಮಟ್ಟ ಸರಿಯಿಲ್ಲ. ಈ ಕುರಿತು ಸಾಕಷ್ಟು ಸೂಚನೆ ನೀಡಿದರು ಪಾಲಿಸುತ್ತಿಲ್ಲ. ಪಾಲಕರಿಂದ ಈ ಕುರಿತು ಪದೇಪದೇ ದೂರುಗಳು ಬರುತ್ತಿದ್ದು, ಪರಿಶೀಲಿಸಿ ಕ್ರಮಕೈಗೊಳ್ಳಲು ತಿಳಿಸಿದರು.
 
 ಮೀನುಗಾರಿಕೆ ಇಲಾಖೆಯಿಂದ ಇಲಾಖೆ ಯೋಜನೆಗಳನ್ನು ಸಮರ್ಪಕವಾಗಿ ಅನುμÁ್ಠನಕ್ಕೆ ತರುತ್ತಿಲ್ಲ. ಸಾಧಕ ಪಲಾನುಭವಿಗಳ ಕುರಿತು ಹೆಚ್ಚಿನ ಪ್ರಚಾರ ನೀಡಿ, ಬೇರೆ ರೈತರು ಮೀನುಗಾರಿಕೆ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸಬೇಕೆಂದು ಅವರು ಹೇಳಿದರು.
 
 ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಶಿವಾನಂದ ಕರಿಗಾರ ಮಾತನಾಡಿ, ಇಲಾಖೆಗಳು ಜಿಲ್ಲಾ ಪಂಚಾಯತ ಅನುದಾನ ಸೇರಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಪ್ರತಿ ಯೋಜನೆ ಗ್ರಾಮೀಣ ಕುಟುಂಬಗಳಿಗೆ, ರೈತರಿಗೆ ತಲುಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ತಿಳಿಸಿದರು. ತೋಟಗಾರಿಕೆ, ಮೀನುಗಾರಿಕೆ, ರೇμÉ್ಮ ಇಲಾಖೆಗಳು ಇನ್ನಷ್ಟು ರೈತ ಸ್ನೇಹಿಯಾಗಿ ಕೆಲಸ ಮಾಡಬೇಕೆಂದು ಹೇಳಿದರು.

 ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ.ಬಿ. ಮಾತನಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಓದುವ ಬೆಳಕು ಕಾರ್ಯಕ್ರಮವನ್ನು ಪ್ರಸಕ್ತ ಎಸ್.ಎಸ್.ಎಲ್.ಸಿ., ವಿದ್ಯಾರ್ಥಿಗಳನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯಕ್ರಮ ಪರಿಣಾಮಕಾರಿಯಾಗಿ ಜಾರಿಗೊಳಿಸಿ. ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಪಠ್ಯಕ್ರಮ, ಅವರ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಆಧ್ಯತೆ ನೀಡಬೇಕು. ಈ ಕುರಿತು ಓದುವ ಬೆಳಕು ಕಾರ್ಯಕ್ರಮದಲ್ಲಿ ಎಲ್ಲ ತಾಲೂಕಿನ ಕ್ಷೇತ್ರಶಿಕ್ಷಣಾಧಿಕಾರಿಗಳು ಕ್ರಿಯಾಶೀಲವಾಗಿ ತೊಡಗಿಸಿಕೊಂಡು ಉತ್ತಮ ಸಾಧನೆ ಮಾಡಬೇಕೆಂದು  ಅವರು ಸೂಚಿಸಿದರು.

 ಕೃಷಿ, ಕುಡಿಯುವ ನೀರು ಸರಬರಾಜು, ತೋಟಗಾರಿಕೆ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಮೂಲಸೌಕರ್ಯ ಹಾಗೂ ನೇರ ಫಲಾನುಭವಿ ಆಯ್ಕೆ ಯೋಜನೆಗಳಿರುವ ಎಲ್ಲ ಇಲಾಖೆಗಳು ಪ್ರಸಕ್ತ ಸಾಲಿನ ಗುರಿ ಸಾಧನೆಗೆ ಆದ್ಯತೆ ನೀಡಿ, ಕೆಲಸ ಮಾಡಬೇಕೆಂದು ತಿಳಿಸಿದರು.

 ಅಧಿಕಾರಿಗಳು ಸಭೆಗೆ ಪೂರ್ಣ ಮಾಹಿತಿಯೊಂದಿಗೆ ಸಭೆಗೆ ಆಗಮಿಸಬೇಕು. ಅಪೂರ್ಣ ಮಾಹಿತಿ, ತಪ್ಪು ಮಾಹಿತಿ ಸಲ್ಲಿಸಿದರೆ ಸೂಕ್ತ ಕ್ರಮ ಜರುಗಿಸಲಾಗುವುದು. ಯೋಜನೆಗಳ ಅನುಷ್ಠಾನ ಅಧಿಕಾರಿಗಳಿಂದಲೇ ವಿಳಂಬವಾಗಬಾರದು ಎಂದು ಸಿಇಓ ತಿಳಿಸಿದರು.

  ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಐ.ಬಿ. ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 1,79,053 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ. ಹಿಂಗಾರು ಹಂಗಾಮಿನಲ್ಲಿ 1,40,147 ಹೆಕ್ಟೇರ್ ಪ್ರದೇಶದಲ್ಲಿ ಮುಖ್ಯವಾಗಿ ಕಡಲೆ ಮತ್ತು ಜೋಳದ ಬಿತ್ತನೆ ಆಗಿದೆ. ಮೊರಬ ಹಾಗೂ ಅಳ್ನಾವರದ ರೈತ ಸಂಪರ್ಕ ಕೇಂದ್ರದಲ್ಲಿ ಆವರಣ ಗೋಡೆ ಹಾಗೂ ದಾಸ್ತಾನು ಮಳಿಗೆ ನಿರ್ಮಾಣ ಪ್ರಗತಿಯಲ್ಲಿದೆ ಎಂದು ಹೇಳಿದರು.

 ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವೆಂಕಟರಾಂ ಹೆಗಡೆ ಮಾತನಾಡಿ, ಸರಕಾರ ಮತ್ತು ಗ್ರಾಮ ಪಂಚಾಯತಿ ಕೆರೆಗಳಿಗೆ ಮೀನು ಮರಿ ಪೂರೈಸಲಾಗಿದ್ದು, ಉತ್ತಮ ಫಸಲು ಬರುವ ನಿರೀಕ್ಷೆ ಇದೆ ಎಂದರು.

 ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸಭೆ ನಿರ್ವಹಿಸಿದರು.

 ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಎಸ್.ಎಮ್. ಕುಂದೂರ, ಯೋಜನಾ ನಿರ್ದೇಶಕ ಬಿ.ಎಸ್. ಮುಗನೂರಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ, ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಪುರುμÉೂೀತ್ತಮ ಎನ್.ಆರ್., ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಎಸ್.ಬಿ. ಚೌಡನ್ನವರ ಸೇರಿದಂತೆ ವಿವಿಧ ಇಲಾಖೆ, ನಿಗಮ ಮಂಡಳಿಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿ ಇಲಾಖಾವಾರು ಪ್ರಗತಿ ವರದಿ ಸಲ್ಲಿಸಿದರು.

Read These Next

ರಾಜ್ಯದಲ್ಲಿ ಟ್ರ್ಯಾಕ್ಟರ್‌ ಪರೇಡ್‌: ಬೆಳಗಾವಿ ರೈತರಿಗೆ ಆರ್‌ಟಿಒ, ಪೊಲೀಸರಿಂದ ವಾಹನ ಜಪ್ತಿ ಬೆದರಿಕೆ

ಬೆಳಗಾವಿ : ಕೃಷಿ ಕಾಯ್ದೆ ವಿರೋಧಿಸಿ ಜ. 26ರಂದು ದೆಹಲಿಯಲ್ಲಿ ರೈತರು ನಡೆಸುತ್ತಿರುವ ಟ್ರ್ಯಾಕ್ಟರ್‌ ಪರೇಡ್‌ ಬೆಂಬಲಿಸಿ ರಾಜ್ಯದಲ್ಲೂ ...

ಪಿಎಂಜಿಎಸ್ ವೈ ರಸ್ತೆಗಳುದ್ದಕ್ಕೂ ಗುತ್ತಿಗೆದಾರರ ಹೆಸರು ವಿಳಾಸದ ಫಲಕ ಹಾಕಿ ನಿರ್ವಹಣೆ ಕುರಿತು ಜನರಿಗೆ ಮಾಹಿತಿ ನೀಡಿ-ಕೇಂದ್ರ ಸಚಿವ ಪ್ರಲ್ಹಾದ ಜೋಷಿ

ಧಾರವಾಡ : ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಿಸಿದ ಗ್ರಾಮೀಣ ಭಾಗದ ರಸ್ತೆಗಳುದ್ದಕ್ಕೂ ಜನದಟ್ಟಣೆ ಇರುವ 3-4 ಸ್ಥಳಗಳಲ್ಲಿ ...

ಬೆಳೆ ಪರಿಹಾರ ಪಾವತಿ ವಿಳಂಬಕ್ಕೆ ಕಾರಣವಾದ ತಾಂತ್ರಿಕ ಅಂಶಗಳನ್ನು ಸರಿಪಡಿಸಿ ರೈತರ ಖಾತೆಗಳಿಗೆ ಪರಿಹಾರ ಜಮೆ ಮಾಡಲು ಕ್ರಮ ಕೈಗೊಳ್ಳಿ - ಸಚಿವ ಜಗದೀಶ ಶೆಟ್ಟರ್

ಧಾರವಾಡ : ರೈತರ ಹಿತಕಾಯಲು ಸರ್ಕಾರ ಅನುಷ್ಠಾನಕ್ಕೆ ತಂದಿರುವ ಬೆಳೆ ಪರಿಹಾರವನ್ನು ಸಕಾಲದಲ್ಲಿ ರೈತ ಸಮುದಾಯಕ್ಕೆ ತಲುಪಿಸಲು ...

ಮತದಾನ ಪ್ರತಿಯೊಬ್ಬ ವಯಸ್ಕ ನಾಗರಿಕನ ಹಕ್ಕು; ತಪ್ಪದೇ ಮತ ಚಲಾಯಿಸಿ: ಉಪನಿರ್ದೇಶಕ ಚಿದಂಬರ.ಕೆ.

ಧಾರವಾಡ : ಭಾರತದ ಸಂವಿಧಾನವು ರಾಷ್ಟ್ರದ ಪ್ರಜೆಗಳಿಗೆ ಸಕ್ರೀಯವಾಗಿ ಆಡಳಿತದಲ್ಲಿ ಪಾಲ್ಗೋಳ್ಳಲು ಸಹಾಯವಾಗುವಂತೆ ಪ್ರತಿಯೊಬ್ಬ ವಯಸ್ಕ ...