ಅಂಗನವಾಡಿ ಕಾರ್ಯಕರ್ತೆ ಮಗನಿಗೆ ವೈದ್ಯಕೀಯ ಸೀಟು : ಜಿಪಂ ಸಿಇಓ ರಿಂದ ಸನ್ಮಾನ

Source: SO News | By Laxmi Tanaya | Published on 15th December 2020, 10:08 PM | State News |

ಧಾರವಾಡ : ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಶೈಲಜಾ ಹೂಗಾರ ಹಾಗೂ ನಿಜಗುಣೇಶ ಹೂಗಾರ ದಂಪತಿಗಳ ಪುತ್ರ ಸಿದ್ಧಲಿಂಗೇಶನಿಗೆ  ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಸೀಟು ದೊರಕಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಅವರು  ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಜವಾಹರ ನವೋದಯ ವಿದ್ಯಾಲಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಹಿರೇಮಲ್ಲೂರು ಈಶ್ವರನ್ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿಯನ್ನು ಶೇ.94.25 ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಈ ವಿದ್ಯಾರ್ಥಿ ನೀಟ್ ಪ್ರವೇಶ ಪರೀಕ್ಷೆಯಲ್ಲಿ 967 ನೇ ರ್ಯಾಂಕ್ ಪಡೆದಿದ್ದರು.

ಕುಂದಗೋಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನ್ನಪೂರ್ಣ ಸಂಗಳದ ಅವರು ಈ ವಿದ್ಯಾರ್ಥಿಗೆ ಮೊದಲ ವರ್ಷದ ಎಂಬಿಬಿಎಸ್ ಪಠ್ಯಪುಸ್ತಕ, ಎಪ್ರಾನ್ , ಸ್ಟೆತೋಸ್ಕೋಪ್ ಕೊಡುಗೆಯಾಗಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಶೆಟ್ಟರ್ ಸೇರಿದಂತೆ ಮಹಿಳಾ ಮೇಲ್ವಿಚಾರಕಿಯರು ಉಪಸ್ಥಿತರಿದ್ದರು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...