ಜಿಲ್ಲಾಸ್ಪತ್ರೆ, ಕೇಂದ್ರ ಕಾರಾಗೃಹ ಮತ್ತು ಶಾಲಾ ಕಾಲೇಜುಗಳಿಗೆ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಭೇಟಿ

Source: SO News | By Laxmi Tanaya | Published on 19th January 2022, 8:49 PM | State News | Don't Miss |

ಧಾರವಾಡ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ,   ಹಿರಿಯ ಸಿವಿಲ್ ನ್ಯಾಯಾಧೀಶೆ ಪುಷ್ಪಲತ ಸಿ.ಎಮ್. ಬುಧವಾರ  ಜಿಲ್ಲಾಸ್ಪತ್ರೆ, ಕೇಂದ್ರಕಾರಾಗೃಹ ಸೇರಿದಂತೆ ವಿವಿಧ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಕೋವಿಡ್ ನಿಯಮಗಳ ಪಾಲನೆ ಕುರಿತು ಪರಿಶೀಲಿಸಿದರು.

 ಧಾರವಾಡ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿರುವ ಕುರಿತು ವಿವಿಧ ಜೈಲ್ ವಾರ್ಡ್ ಗಳಿಗೆ ಭೇಟಿ ನೀಡಿ ತಿಳಿದುಕೊಂಡರು. ಜೈಲು ಅಧೀಕ್ಷಕ ಮರಿಗೌಡ ಅವರು ಮಾಹಿತಿ ನೀಡಿದರು.  ನಂತರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆ ಆವರಣದಲ್ಲಿ ಜನಜಂಗುಳಿ ಸೇರದಂತೆ ಮುಂಜಾಗ್ರತೆ ವಹಿಸಲು ಜಿಲ್ಲಾ ಆಸ್ಪತ್ರೆ ಅಧೀಕ್ಷಕರಿಗೆ ಮತ್ತು ಹಿರಿಯ ವೈದ್ಯರಿಗೆ  ಸೂಚಿಸಿದರು.

  ಕಿಟೆಲ್ ಕಾಲೇಜು ಮತ್ತು ಹೈಸ್ಕೂಲ್‍ಗಳಲ್ಲಿನ ಮಕ್ಕಳ ತರಗತಿ ಕೊಠಡಿಗಳು, ಶಾಲಾ ಆವರಣ ಮತ್ತು ಗ್ರಂಥಾಲಯಗಳಿಗೆ ಭೇಟಿ ನೀಡಿ, ಕೋವಿಡ್ ಮಾರ್ಗಸೂಚಿಗಳ ಪಾಲನೆಗೆ ಶಾಲಾ ಆಡಳಿತ ಮಂಡಳಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ತರಗತಿಗಳಿಗೆ ತೆರಳಿ ಮಾತನಾಡಿ, ಮಕ್ಕಳಿಗೆ ಮಾಸ್ಕ್ ಧರಿಸಲು, ಕಡ್ಡಾಯವಾಗಿ ಲಸಿಕೆ ಪಡೆಯಲು ತಿಳಿಸಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...