ಸೆ. 30 ರಂದು ಕುಮಟಾ ತಾಲೂಕಾ ನ್ಯಾಯ್ಯಾಲಯದಲ್ಲಿ ಬೃಹತ್ ಲೋಕ್ ಅದಾಲತ್

Source: S O News service | By I.G. Bhatkali | Published on 19th September 2021, 8:35 PM | Coastal News | Don't Miss |

ಕಾರವಾರ: ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದ ನಿದೇರ್ಶನದಂತೆ ಸೆ. 30 ರಂದು ಕುಮಟಾ ತಾಲೂಕಾ ನ್ಯಾಯ್ಯಾಲಯದಲ್ಲಿ ಬೃಹತ್ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ.  
  
ಈ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಕಾನೂನಿನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಎಂ.ಎಂ.ಆರ್.ಡಿ ಪ್ರಕರಣಗಳು ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಕೊರಿರುವ ಪ್ರಕರಣಗಳು, ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ದ ದಾಖಲಾದ ಪ್ರಕರಣ, ಬ್ಯಾಂಕಗಳಿಗೆ ಸಂಬಂಧಿಸಿದ ಪ್ರಕರಣ, ವೈವಾಹಿಕ ಅಥವಾ ಜೀವನಾಂಶ ಪ್ರಕರಣ, ಆಸ್ತಿಯಲ್ಲಿ ವಿಭಾಗ ಕೊರಿರುವ ದಾವೆಗಳು, ಇತರೆ ಸಿವಿಲ್ ವ್ಯಾಜ್ಯಗಳು ಹಾಗೂ ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳ ಬಹುದಾಗಿದ್ದು, ಬ್ಯಾಂಕ್, ನೀರು ಮತ್ತು ವಿದ್ಯುತ್‍ಗೆ ಸಂಬಂಧಿಸಿದ ವ್ಯಾಜ್ಯ ಪೂರ್ವ ಪ್ರಕಗಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿದೆ.

ವಕೀಲರು, ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕುಮಟಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...