ಆತ್ಮಹತ್ಯೆ ತಡೆಗಟ್ಟಲು ಮಾನಸಿಕ ಸದೃಢತೆ ಅಗತ್ಯ : ನ್ಯಾ|| ಬಸವರಾಜ್

Source: so news | Published on 13th September 2019, 12:08 AM | State News | Don't Miss |

 

ಹಾಸನ:ಮಾನಸಿಕವಾಗಿ ಸದೃಡರಾದಾಗ ಮಾತ್ರ ಆತ್ಮಹತ್ಯೆ ಪ್ರಕರಣವನ್ನು ತಡೆಗಟ್ಟಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಕೆ.ಬಸವರಾಜ್ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿಂದು ಏರ್ಪಡಿಸಲಾಗಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಜಾಗತಿಕ ಪ್ರಪಂಚದಲ್ಲಿ ಯಾವುದೇ ರೀತಿಯ ನಕರಾತ್ಮಕ ಆಲೋಚನೆಗಳಿಗೆ ಒಳಗಾಗದೇ ಆತ್ಮಸ್ಥೈರ್ಯವನ್ನು ಹೆಚ್ಚಿಸಿಕೊಳ್ಳಬೇಕು, ಜೀವನದಲ್ಲಿ ನಿರಾಸೆ ಹೊಂದಿದವರಿಗೆ ಧೈರ್ಯ ತುಂಬುವ ಹಾಗೂ ಸಲಹೆ ನೀಡುವಂತಹ ಕೆಲಸ ಮಾಡುತ್ತಾ ಧನಾತ್ಮಕ ಚಿಂತನೆಗಳತ್ತ ಕರೆದೊಯ್ಯಬೇಕು ಎಂದರು. 
ಜಿಲ್ಲೆಯಲ್ಲಿ ಅಪಹರಣ, ಮಾನಸಿಕ ಕಿರುಕುಳಕ್ಕೆ ಒಳಗಾದವರ ಪ್ರಕರಣಗಳು ಹೆಚ್ಚಾಗುತ್ತಿವೆ. ಮಾನಸಿಕ ಖಿನ್ನತೆ ಹೆಚ್ಚಾದಾಗ ಆತ್ಮಹತ್ಯೆಯಂತಹ ಧೃಢ ನಿರ್ಧಾರಕ್ಕೆ ಒಳಗಾಗುವುದು. ಆತ್ಮಹತ್ಯೆಗೆ ಪ್ರಚೋಧಿಸುವುದು ಹಾಗೂ ಪ್ರಯತ್ನಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಂದಿನಿ ಅವರು ಮಾತನಾಡಿ ಆತ್ಮಹತ್ಯೆ ಪ್ರಯತ್ನ ಸಮಾಜದ ಅಭಿವೃದ್ದಿಗೆ ಮಾರಕ ಇಂದಿನ ಯುವ ಸಮುದಾಯ ಮಾನಸಿಕವಾಗಿ ಧೈರ್ಯ ಹೆಚ್ಚಿಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಪೋಷಕರ ಆಕಾಂಕ್ಷೆಗಳನ್ನು ಒತ್ತಡ ಎಂದು ಭಾವಿಸಬಾರದು ಆಧುನೀಕರಣದ ಬಯಕೆಗಳನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಕುಮಾರ್ ಅವರು ಮಾತನಾಡಿ ಇಂದಿನ ಯುವಜನತೆ ಆತ್ಮಹತ್ಯೆಯಂತಹ ಕೆಲಸಗಳಿಗೆ ಮುಂದಾಗುತ್ತಿರುವುದು ಶೋಚನೀಯ ಸಂಗತಿ, ಮಾನಸಿಕ ಒತ್ತಡ, ಮಾನಸಿಕ ಕಾಯಿಲೆ ಇನ್ನಿತರೆ ಕಾರಣಗಳಿಂದ ಇಂತಹ ಧೃಡ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದರು.
ಆತ್ಮಹತ್ಯೆ ತಡೆಯುವಂತಹ ಜಾಗೃತಿ ಕಾರ್ಯಕ್ರಮಗಳು ಸರ್ಕಾರದ ಇಲಾಖೆಗಳಿಂದಲೂ ಹೆಚ್ಚಾಗಿ ನಡೆಯಬೇಕು. ಇದರಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಂಡು ಮತ್ತಷ್ಟು ಹೆಚ್ಚಿನ ಅರಿವು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕು ಎಂದು ಅವರು ಹೇಳಿದರು.
ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ|| ಸಂತೋಷ್ ಅವರು ಮಾತನಾಡಿ ಸಮಾಜದ ಅಭಿವೃದ್ದಿಗೆ ಕಾರಣವಾಗುವಂತಹ ಆಲೋಚನೆಗಳು ವಿದ್ಯಾರ್ಥಿಗಳಲ್ಲಿ ಮೂಡಬೇಕು, ಇತ್ತಿಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ, ಅತಿಯಾದ ಮೊಬೈಲ್ ಬಳಕೆಗಳ ಮೂಲಕವೂ ವಿದ್ಯಾರ್ಥಿಗಳಲ್ಲಿ ಖಿನ್ನತೆ ಕಾಣಿಸುತ್ತಿದೆ ಇದಕ್ಕೆ ಪೋಷಕರ ಪಾತ್ರ ಬಹುಮಖ್ಯ ಎಂದು ಅವರು ತಿಳಿಸಿದರು.
ಈ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಆತ್ಮಹತ್ಯೆ ತಡೆಗಟ್ಟುವಲ್ಲಿ ಯುವಜನತೆಯ ಪಾತ್ರ ಎಂಬ ವಿಷಯ ಕುರಿತು ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಗುರುರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ವಕೀಲರ ಸಂಘದ ಅಧ್ಯಕ್ಷರಾದ ಜೆ.ಪಿ.ಶೇಖರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ|| ಎನ್.ಎನ್.ರಾಜ್‍ಗೋಪಾಲ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ|| ಹೇಮಲತ ಎಂ.ಸಿ., ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಮನೋವೈದ್ಯರಾದ ಡಾ|| ಸುನೀತಾ ಕೆ.ಎಸ್. ಮತ್ತಿತರರು ಹಾಜರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...