ಜಿಲ್ಲಾ ಉಸ್ತುವಾರಿ ಸಚಿವರಿಂದ ಗಣರಾಜ್ಯೋತ್ಸವದ ಸಾಧನೆಯ ಸಂದೇಶ

Source: SO News | By Laxmi Tanaya | Published on 27th January 2021, 11:16 AM | State News | Don't Miss |

ಧಾರವಾಡ : ಸಾವಿರಾರು ಸಂಸ್ಕøತಿ, ಹಲವಾರು ಸಂಪ್ರದಾಯ, ನೂರಾರು ಭಾಷೆಗಳಿಂದ ಕೂಡಿದ ನಮ್ಮ ಭಾರತ ಉಪ ಖಂಡವು, ಅನೇಕತೆಯಲ್ಲಿ ಏಕತೆಯನ್ನು ಸಂವಿಧಾನದ ಮೂಲಕ ಸಾಧಿಸಿದೆ. ಒಕ್ಕೂಟ ಮಾದರಿಯ ಆಡಳಿತ ವ್ಯವಸ್ಥೆಯಡಿ ದೇಶವು ಸರ್ವಾಂಗೀಣವಾಗಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಸಂವಿಧಾನ ಜಾರಿಗೆ ಬಂದ ಈ ದಿನದಂದು ನಾವೆಲ್ಲ ಅದರ ಮೌಲ್ಯಗಳನ್ನು ಪುನರ್‍ಮನನ ಮಾಡಿಕೊಳ್ಳುವ ಕಾರ್ಯ ಮಾಡಬೇಕು. ದೇಶದ ಪ್ರತಿಯೊಬ್ಬ ನಾಗರಿಕರು ಸಂವಿಧಾನವನ್ನು ಅರಿತುಕೊಂಡು ಆ ದಿಶೆಯಲ್ಲಿ ಮುಂದೆ ಸಾಗಿದಾಗ ಗಣರಾಜ್ಯೋತ್ಸವ ಅರ್ಥಪೂರ್ಣವಾಗುತ್ತದೆ. ನಾವೆಲ್ಲ ಈ ನಿಟ್ಟಿನಲ್ಲಿ ಒಟ್ಟಾಗಿ ಹೆಜ್ಜೆ ಹಾಕೋಣ ಎಂದು  ಬೃಹತ್, ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.

 ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಾಧನೆಯ ಮೆಲಕು ಹಾಕಿದರು. 

1947ರ ಅಗಸ್ಟ್ 15 ರಂದು ಭಾರತ ದೇಶವು ಸ್ವಾತಂತ್ರ್ಯ ಪಡೆದ ಬಳಿಕ ಸಂಪೂರ್ಣ ಕಾರ್ಯೋನ್ಮುಖವಾದ ಈ ಸಮಿತಿಯು ಒಟ್ಟು 2 ವರ್ಷ 11 ತಿಂಗಳು 17 ದಿನಗಳ ಕಾಲ ನಿರಂತರ ಶ್ರಮವಹಿಸಿ, ಸಂವಿಧಾನದ ಪ್ರಾಥಮಿಕ ಕರಡು ಪ್ರತಿಯನ್ನು ಸಿದ್ಧಪಡಿಸಿತು. ಸುಮಾರು 114 ದಿನಗಳ ಕಾಲ ಸಂವಿಧಾನದ ಕರಡು ಪ್ರತಿಯ ಬಗ್ಗೆ ಸಂವಿಧಾನ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದು ಅಂತಿಮವಾಗಿ ನವೆಂಬರ್ 26, 1949 ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಜನೆವರಿ 26, 1950 ರಂದು ಸಂವಿಧಾನ ಜಾರಿಗೆ ಬಂದಿತು. ಇದೇ ದಿನವನ್ನು ಪ್ರತಿವರ್ಷ ಗಣರಾಜ್ಯ ದಿನವನ್ನಾಗಿ ಹೆಮ್ಮೆಯಿಂದ ಆಚರಿಸಲಾಗುತ್ತಿದೆ. ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಈ ದಿನವು ವರ್ಷದ ಮೊದಲ ರಾಷ್ಟ್ರೀಯ ಹಬ್ಬವೂ ಹೌದು.
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹಿರಿಮೆ ನಮ್ಮ ಭಾರತ ದೇಶಕ್ಕಿದೆ. ಪ್ರಜಾಪ್ರಭುತ್ವದ ಮೂಲಾಧಾರ ಸಂವಿಧಾನವಾಗಿದೆ. ದೇಶ ಮುನ್ನಡೆಯಲು ಬೆಳಕಾಗಿ ಸಂವಿಧಾನ ನಮಗೆ ದಾರಿ ತೋರುತ್ತಿದೆ. ಈ ದೇಶದ ಎಲ್ಲ ಪ್ರಜೆಗಳು, ವಿದ್ಯಾರ್ಥಿಗಳು, ಯಾವುದೇ ವೃತ್ತಿಯಲ್ಲಿರುವವರು ಸಂವಿಧಾನ ಅರಿತುಕೊಳ್ಳಬೇಕು. ಗಣರಾಜ್ಯೋತ್ಸವದ ಈ ದಿನದ ಸಂದರ್ಭದಲ್ಲಿ ನಾವೆಲ್ಲ ಮತ್ತೊಮ್ಮೆ ನಮ್ಮ ಸಂವಿಧಾನವನ್ನು ಅಧ್ಯಯನ ಮಾಡುವ ಸಂಕಲ್ಪ ಮಾಡೋಣ. 

ಭಾರತ ಸಂವಿಧಾನ ರಚನೆಗೆ ಶ್ರಮಿಸಿದ ಡಾ. ಬಿ.ಆರ್.ಅಂಬೇಡ್ಕರ ಹಾಗೂ ಎಲ್ಲ ಮಹನೀಯರ ಸೇವೆಯನ್ನು ಸ್ಮರಿಸೋಣ ಎಂದು ಸಚಿವರು ತಿಳಿಸಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...