2.80 ಕೋಟಿ ರೂ.ವೆಚ್ಚದ ಎಪಿಎಂಸಿ ನೂತನ ಪೊಲೀಸ್ ಠಾಣೆ ಕಟ್ಟಡ ಉದ್ಘಾಟಿಸಿದ ಸಚಿವ ಬಿ.ನಾಗೇಂದ್ರ

Source: SO News | By Laxmi Tanaya | Published on 15th August 2023, 8:19 PM | State News |

ಬಳ್ಳಾರಿ : ನಗರದ ಎಪಿಎಂಸಿ ಬಳಿಯ 2.80 ಕೋಟಿ ರೂ. ವೆಚ್ಚದ ನೂತನ ಪೊಲೀಸ್ ಠಾಣೆ ಕಟ್ಟಡವನ್ನು ಯುವಜನ ಸಬಲೀಕರಣ, ಕ್ರೀಡಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಂಗಳವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯು ಒಂದು ವಿಶೇಷ ಇಲಾಖೆಯಾಗಿದ್ದು, ಮಹತ್ವದ ಜವಾಬ್ದಾರಿ ನಿರ್ವಹಿಸುವ ಮೂಲಕ ತನ್ನದೇ ಆದ ವಿಶೇಷ ಗೌರವ ಹೊಂದಿದೆ. ಪೊಲೀಸ್ ಮತ್ತು ಸಾರ್ವಜನಿಕರು ಸಮಾಜದ ಹಿತಾಶಕ್ತಿ ಕಾಪಾಡುವಲ್ಲಿ ಇಬ್ಬರೂ ಹೊಂದಾಣಿಕೆಯಿಂದ ಇರಬೇಕು ಎಂದು ಹೇಳಿದರು.
ಪೊಲೀಸ್‍ಠಾಣೆಯು ಈ ಭಾಗದ ಜನರ ಬಹುಬೇಡಿಕೆಯಾಗಿದ್ದು, ಅದು ಈಗ ಈಡೇರಿದೆ. ಠಾಣೆಗಳಿಗೆ ಬಂದಂತಹ ಜನಸಾಮಾನ್ಯರಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ಬೇಗನೇ ಸ್ಪಂದಿಸಬೇಕು ಎಂದರು.

ಬಳ್ಳಾರಿ ನಗರ ಶಾಸಕ ನಾರಾ ಭರತ್‍ರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಜಾನಕಿ, ಮಹಾನಗರ ಪಾಲಿಕೆ ಸದಸ್ಯೆ ಪದ್ಮಾರೋಜ, ಪೊಲೀಸ್ ಮಹಾನಿರೀಕ್ಷಕ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‍ಕುಮಾರ್ ಬಂಡಾರು, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಸಹಾಯಕ ಆಯುಕ್ತ ಹೇಮಂತ್‍ಕುಮಾರ್, ಎಡಿಸಿ ಮೊಹಮ್ಮದ್ ಜುಬೇರಾ, ಎಎಸ್ಪಿ ಎಂ.ಎ.ನಟರಾಜ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...