ಗೋವಾದಲ್ಲಿ ರಾಜ್ಯದ ಮೀನು ತಪಾಸಣೆ; ಮಾಹಿತಿ ಇಲ್ಲ ಎಂದ ಸಚಿವ

Source: sonews | By Staff Correspondent | Published on 31st October 2018, 5:47 PM | Coastal News | State News | Don't Miss |

ಭಟ್ಕಳ: ರಾಜ್ಯದ ಮೀನುಗಳಿಗೆ ಗೊವಾದಲ್ಲಿ ನಿರ್ಬಂಧ ಹೇರಿದ್ದ ಕುರಿತು ಸರ್ಕಾರಕ್ಕೆ ಯಾವುದೇ ಅಧಿಕೃತ ಮಾಹಿತಿಯಿಲ್ಲ ಎಂದು ರಾಜ್ಯ ಪಶುಸಂಗೋಪನ ಹಾಗೂ ಮೀನುಗಾರಿಕಾ ಇಲಾಖೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು. 

ಅವರು ಭಟ್ಕಳದ ಕೋಸ್ಟಲ್ ಕಿಂಗ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. 

ರಾಜ್ಯದ ಕರಾವಳಿಯ ಮೀನುಗಳಲ್ಲಿ ಫಾರ್ಮಲಿನ್ ಅಂಶ ಬೆರೆತಿರುವ ಕುರಿತಂತೆ ಕೆಲ ಆರೋಪಗಳು ಕೇಳಿ ಬಂದಿದ್ದು ಅದನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗಿದ್ದು ಅಂತಹ ಯಾವುದೇ ಅಂಶವು ದೃಡಪಟ್ಟಿರುವುದಿಲ್ಲ. ಮತ್ತೀಗ ಅಂತಹದ್ದೇ ಆರೋಪಗಳು ಕೇಳಿ ಬರುತ್ತಿವೆ. ಗೋವಾದಲ್ಲಿ ಕರ್ನಾಟಕದ ಮೀನುಗಳಿಗೆ ನಿರ್ಬಂಧ ಹೇರಿರುವ ಕುರಿತು ಸ್ಪಷ್ಟ ಕಾರಣಗಳನ್ನು ತಿಳಿದುಕೊಂಡು ಸರ್ಕಾರ ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವರು ತಿಳಿಸಿದರು. ರಾಜ್ಯದಲ್ಲಿ ಲೈಟ್ ಫಿಶಿಂಗ್ ನಿಷೇಧವಿದ್ದು ಈಗ ಎಲ್ಲಿಯೂ ಲೈಟ್ ಫಿಶಿಂಗ್ ನಡೆಯುತ್ತಿಲ್ಲ ಎಂದು ತಿಳಿಸಿದ ಸಚಿವರು, ಉಪಚುನಾವಣೆಗೆ ಸಂಬಂಧಿಸಿ ಕೇಳಲಾದ ಪ್ರಶ್ನೆಗೆ ಎಲ್ಲ ಐದು ಕ್ಷೇತ್ರಗಳಲ್ಲೂ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳೇ ಜಯಸಾಧಿಸಲಿವೆ ಎಂದರು. 
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...