ರಸ್ತೆ ಸುರಕ್ಷತಾ ಜಾಗೃತಿ ವಾಹನಕ್ಕೆ ಸಚಿವ ಬಿ. ಶ್ರೀರಾಮುಲು ಅವರಿಂದ ಚಾಲನೆ

Source: SO News | By Laxmi Tanaya | Published on 28th November 2022, 9:54 PM | State News | Don't Miss |

ಬಳ್ಳಾರಿ : ಕರ್ನಾಟಕ ರಾಜ್ಯ ರಸ್ತೆ ಪ್ರಾಧಿಕಾರದ ವತಿಯಿಂದ ವಾಹನಗಳನ್ನು ಚಾಲನೆ ಮಾಡುವ ವೇಳೆ ಸಂಭವಿಸಬಹುದಾದ ಅವಘಡಗಳನ್ನು ತಪ್ಪಿಸಲು ರಸ್ತೆ ಬಳಕೆದಾರರಲ್ಲಿ ರಸ್ತೆ ಸುರಕ್ಷತೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಕ್ಕೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಸೋಮವಾರ ತಮ್ಮ ನಿವಾಸದ ಗೃಹ ಕಚೇರಿಯಿಂದ ಚಾಲನೆ ನೀಡಿದರು.

ಜಿಲ್ಲೆಯಾದ್ಯಂತ 15 ದಿನಗಳ ಕಾಲ ಎಲ್ಲಾ ತಾಲೂಕಿನ ಹೋಬಳಿ ಮಟ್ಟದಲ್ಲಿ ಸಂಚರಿಸಲಿದ್ದು, ವಾಹನ ಸವಾರರು ಕಡ್ಡಾಯವಾಗಿ ಸೀಟ್ ಬೆಲ್ಟ್‍ಗಳನ್ನು ಧರಿಸುವುದು ಸೇರಿದಂತೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಅಭಿಯಾನ ನಡೆಸಲಿದೆ.

ಈ ಸಂದರ್ಭದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಗಿರೀಶ್ ಸೇರಿದಂತೆ ಇನ್ನೀತರರು ಇದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...