ಆರೋಗ್ಯ ಸಚಿವ ಡಾ. ಸುಧಾಕರ್ ವಿಡಿಯೋ ಸಂವಾದ. ಆಕ್ಟೋಬರ್ ಅಂತ್ಯಕ್ಕೆ ಲಸಿಕೆ ಗುರಿ ತಲುಪಲು ಕ್ರಮ: ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್

Source: SO News | By Laxmi Tanaya | Published on 8th September 2021, 8:44 AM | State News | Don't Miss |

ರಾಯಚೂರು : ಆರೋಗ್ಯ ಕಾರ್ಯಕರ್ತರು, ಕೋವಿಡ್ -೧೯ ಮುಂಚೂಣಿ ಕಾರ್ಯಕರ್ತರು ಸೇರಿದಂತೆ ೧೮ ವರ್ಷ ಮೇಲ್ಪಟ್ಟ ಕೋವಿಡ್ ಲಸಿಕೆ ಫಲಾನುಭವಿಗಳಿಗೆ ಅಕ್ಟೋಬರ್ ಅಂತ್ಯದೊಳಗೆ ಲಸಿಕೆ ಗುರಿ ತಲುಪಲು ಕ್ರಮ ಕೈಗೊಳ್ಳಲಾಗುವುದು ಎಂದು ಡಾ.  ಬಿ.ಸಿ ಸತೀಶ್ ಅವರು ತಿಳಿಸಿದರು.

  ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಸಂವಾದದಲ್ಲಿ  ಆರೋಗ್ಯ ಸಚಿವ ಡಾ. ಸುಧಾಕರ ಅವರೊಂದಿಗೆ ಜಿಲ್ಲೆಯ ಕೋವಿಡ್ ಲಸಿಕೆ ಪ್ರಗತಿ ಮಾಹಿತಿ ನೀಡಿ ಮಾತನಾಡಿದರು.

 ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕರ್ತರ ಲಸಿಕೆ ಪ್ರಮಾಣ ಶೇಕಡಾ ೮೦ರಷ್ಟು ಆಗಿದ್ದು, ಕೋವಿಡ್ ಮುಂಚೂಣಿ ಕಾರ್ಯಕರ್ತರ ಲಸಿಕೆ ಪ್ರಮಾಣ ಶೇಕಡಾ  ೮೨ರಷ್ಟು  ಆಗಿದ್ದು, ಈ  ಆರೋಗ್ಯ ಕ್ಷೇತ್ರದ ಕಾರ್ಯಕರ್ತರ ಲಸಿಕೆ ಪ್ರಮಾಣ ಶೇಕಡಾ ೧೦೦ ರಷ್ಟು ಪ್ರಗತಿ ಸಾಧಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಕೆ. ನಾಗರಾಜ್ ಅವರಿಗೆ ಸೂಚನೆ ನೀಡಿದರು. 

ಜಿಲ್ಲೆಯಲ್ಲಿ ೧೮ ವರ್ಷ ಮೇಲ್ಪಟ್ಟ ಕೋವಿಡ್ ಲಸಿಕೆ ಫಲಾನುಭವಿಳಗೆ ಪ್ರತಿನಿತ್ಯ ೧೨-೧೦ ಸಾವಿರ ಫಲಾನುಭವಿಗೆ ನೀಡಲಾಗುತ್ತಿದ್ದು, ಪ್ರತಿ ಬುಧವಾರ ಮತ್ತು ಶುಕ್ರವಾರ ೩೫ ಸಾವಿರ ಗುರಿ ನೀಡಲಾಗಿದ್ದು, ಆರೋಗ್ಯ ಸಚಿವರ ನಿರ್ದೇಶನದಂತೆ  ಜಿಲ್ಲೆಯಲ್ಲಿ ಪ್ರತಿ ದಿನ ೨೫ ಸಾವಿರ ಮತ್ತು ಮಹಾ ಲಸಿಕಾ ಅಭಿಯಾನ ದಿನಗಳಾದ ಪ್ರತಿ ಬುಧವಾರ ಮತ್ತು ಶುಕ್ರವಾರ ೫೦ ಸಾವಿರ ಫಲಾನುಭವಿಗಳಿಗೆ ಲಸಿಕೆ ನೀಡಲು ಗುರಿ ನಿಗದಿ ಮಾಡಲಾಗಿದೆ.
 
 ಕೋವಿಡ್ -೧೯ ಲಸಿಕೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರಗತಿ ಸಾಧಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಚುನಾಯಿತ ಜನ ಪ್ರತಿನಿಧಿಗಳು, ಟಾಸ್ಕ್ ಪೋರ್ಸ್ ಸಮಿತಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ನಿಗದಿತ ಅವಧಿಯಲ್ಲಿ ಲಸಿಕೆ ಗುರಿ ಸಾಧಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶೇಖ್ ತನ್ವೀರ್ ಆಸೀಪ್ ಅವರಿಗೆ ಸೂಚನೆ ನೀಡಿದರು. 
ರಾಯಚೂರು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಲಸಿಕೆ ಪ್ರಮಾಣ ಹೆಚ್ಚಳಕ್ಕೆ ಧಾರ್ಮಿಕ ಗುರುಗಳು, ಚರ್ಚ್ನ ಫದರ್, ಮಸೀದಿಯ ಮೌಲಿಗಳನ್ನು ಲಸಿಕಾ ಅಭಿಯಾನದ ಜಾಗೃತಿಗೆ ಬಳಕೆ ಮಾಡಿಕೊಳ್ಳಲು ರಾಯಚೂರು ಸಹಾಯ ಆಯುಕ್ತ ಸಂತೋಷ ಕಾಮಗೌಡರಿಗೆ ತಿಳಿಸಿದರು. 

ಈ ವೇಳೆ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಸುರೇಂದ್ರ ಬಾಬು, ಆರ್. ಸಿ. ಹೆಚ್ ಅಧಿಕಾರಿ ಡಾ. ವಿಜಯ ಸೇರಿದಂತೆ ಇತರರು ಇದ್ದರು.

Read These Next

ಬೆಂಗಳೂರು: 2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ - ಸಚಿವ ಬಿ. ಶ್ರೀರಾಮುಲು

2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆರು ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ...

ಬೆಂಗಳೂರು: ಅಕ್ಟೋಬರ್ 24ರಿಂದ ಒಂದು ವಾರಗಳ ಕಾಲ ‘ಕನ್ನಡಕ್ಕಾಗಿ ನಾವು’ ಅಭಿಯಾನ - ಸಚಿವ ಸುನೀಲ್ ಕುಮಾರ್

ರಾಜ್ಯಾದಾದ್ಯಂತ 66ನೆ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ನವೆಂಬರ್ ಒಂದರಂದು ಮಾತ್ರ ...

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ನ್ಯಾಮತಿ ತಾಲ್ಲೂಕು ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ- ಗ್ರಾಮವಾಸ್ತವ್ಯಕ್ಕೆ ಚಾಲನೆ

ದಾವಣಗೆರೆ : ಕೊರೊನಾ ಕಾರಣ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ...

ಬಾಗಲಕೋಟೆಯಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ; ಪಾಪ್ಯುಲರ್ ಫ್ರಂಟ್ ಕಳವಳ

ಬಾಗಲಕೋಟೆಯ ಜಿಲ್ಲೆಯ ಇಳಕಲ್ ನಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸಂಘಪರಿವಾರದ ಹಿನ್ನೆಲೆಯ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...