ಪಾಲಕರ ಕಣ್ತಪ್ಪಿಸಿ ಮುಂಬೈಗೆ ತೆರಳುಲು ಸಜ್ಜಾದ ಅಪ್ರಾಪ್ತ ಜೋಡಿ

Source: so news | By MV Bhatkal | Published on 28th June 2020, 11:59 PM | Coastal News | Don't Miss |

ಭಟ್ಕಳ: ಪಾಲಕರ ಕಣ್ತಪ್ಪಿಸಿ ಮುಂಬೈಗೆ ತೆರಳುಲು ಸಜ್ಜಾದ ಅಪ್ರಾಪ್ತ ಜೋಡಿಯೊಂದು ರೈಲ್ವೆ ಪೊಲೀಸರ ಸಮಯಪ್ರಜ್ಞೆಯಿಂದ ಮನೆಗೆ ಮರಳುವಂತಾದ ಘಟನೆ ಶನಿವಾರ ತಡರಾತ್ರಿ ಭಟ್ಕಳ ರೈಲ್ವೆ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ. 
ತಾಲೂಕಿನ ಬೈಲೂರಿನ 16 ವರ್ಷದ ಬಾಲಕ, ಮುರ್ಡೇಶ್ವರದ 15ವರ್ಷದ ಬಾಲಕಿ ಮುಂಬೈಗೆ ತೆರಳಲು ಸಜ್ಜಾಗಿದ್ದರು. ಈ ಹಿನ್ನಲೆಯಲ್ಲಿ ಶುಕ್ರವಾರ ರಾತ್ರಿ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು. ಬಳಿಕ ಬಾಲಕ ಅವರ ಮನೆಯಿಂದ ನಾಪತ್ತೆಯಾಗಿದ್ದಾನೆ. ಶನಿವಾರ ಸಂಜೆ ಅಪ್ರಾಪ್ತರು ಭಟ್ಕಳ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಾರೆ. ಮುಂಬೈನ ರೈಲಿನ ಕುರಿತು ಮಾಹಿತಿ ಪಡೆದಿದ್ದಾರೆ ಈ ಅಪ್ರಾಪ್ತರ ಚಟುವಟಿಕೆಗಳನ್ನು ಗಮನಿಸುತ್ತಿದ್ದ ರೈಲ್ವೆ ಪೊಲೀಸರಿಗೆ ಹಾಗೂ ಅಲ್ಲಿಯೆ ಕರ್ತವ್ಯದಲ್ಲಿದ್ದ ಕಂದಾಯ ಇಲಾಖೆಯ ಅಧಿಕಾರಿಗಳಿಗೂ ಇವರ ಮೇಲೆ ಅನುಮಾನ ಬಂದಿದೆ. ನಂತರ ಬಾಲಕಿಯ ಬಳಿ ತೆರಳಿ ವಿಚಾರಿಸಿದ್ದಾರೆ. ಮೊದಲು ಬಾಲಕ ನಿನಗೆ ಎನಾಗಬೇಕು ಎಂದಾಗ ಅಣ್ಣನಾಗಬೇಕು ಎಂದು ತೊದಲುತ್ತಾ ಉತ್ತರಿಸಿದ್ದಳು. ಸಂಶಯಗೊಂಡ ಪೊಲೀಸರು ಪುನಃ ಕೇಳಿದಾಗ ತಾನು ಆತನನ್ನು ಪ್ರೇಮಿಸುತ್ತಿದ್ದು ಮನೆ ಬಿಟ್ಟು ಆತನ ಜೊತೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದಾಗಿ ಒಪ್ಪಿಕೊಂಡಿದ್ದಾಳೆ. ನಂತರ ರೈಲ್ವೆ ಪೊಲೀಸ್ ಅಧಿಕಾರಿ ಭಟ್ಕಳ ಶಹರಠಾಣೆಗೆ ಮಾಹಿತಿ ನೀಡಿ ಅಪ್ರಾಪ್ತರ ಪಾಲಕರನ್ನು ಸ್ಥಳಕ್ಕೆ ಕರೆಯಿಸಿದ್ದಾರೆ. ಪಾಲಕರ ಸಮ್ಮುಖದಲ್ಲಿ ಇಬ್ಬರಿಗೂ ಬುದ್ದಿವಾದ ಹೇಳಿ ಅವರವರ ಪಾಲಕರಿಗೆ ಒಪ್ಪಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಬಂದಿದ್ದರು ತಾಲೂಕಿನ ಯಾವುದೆ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...