ಪ್ಯಾರಾಮೋಟಾರ್ ರೈಡ್ ವೇಳೆ ಅವಘಢ. ಸಮುದ್ರಕ್ಕೆ ಬಿದ್ದು ಪ್ರವಾಸಿಗ ದುರ್ಮರಣ. ಪೈಲೆಟ್ ಪಾರು.

Source: SO News | By Laxmi Tanaya | Published on 2nd October 2020, 10:06 PM | Coastal News |

ಕಾರವಾರ : ಕಾರವಾರ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೋರ್ವ  ಹಾರುತ್ತಿರುವ ಪ್ಯಾರಾಮೋಟರನಿಂದ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ನಡೆದಿದೆ.

ಆಂದ್ರ ಮೂಲದ ಮಧುಸೂದನ ರೆಡ್ಡಿ(56) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕದಂಬ ನೌಕಾನೆಲೆ ಕಮಾಂಡೆಂಟ್ ಆಗಿದ್ದ ಆಂಧ್ರ ಮೂಲದ ಮಧುಸೂದನ ಶುಕ್ರವಾರ ಸಂಜೆ ಬೆಂಗಳೂರಿನಿಂದ ಬಂದಿದ್ದ ತನ್ನ ಸ್ನೇಹಿತರೊಂದಿಗೆ ಬಂದಿದ್ದರು. ಕಡಲತೀರದಲ್ಲಿ ಆಕರ್ಷಣೆಯಾಗಿದ್ದ ಪ್ಯಾರಾಮೋಟರ್ ಏರಲು ಮನಸ್ಸಾಗಿದ್ದರಿಂದ ಸ್ನೇಹಿತರು ಮೂವರು ಆಗಸದಲ್ಲಿ ರೈಡ್ ಮಾಡಿ ವಾಪಾಸ್ಸಾಗಿದ್ದರು. ಕೊನೆಯದಾಗಿ ಮಧುಸೂದನ್ ರೈಡ್ ಮಾಡುತ್ತಿದ್ದ ವೇಳೆ ಗಾಳಿಯ ವೆಡಗ ಹೆಚ್ಚಾಗಿದ್ದರಿಂದ ಮೋಟಾರ್ನಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಹೀಗಾಗಿ ಸಮುದ್ರದಲ್ಲಿ ಪೈಲೆಟ್ ಮತ್ತು ಮಧುಸೂದನ್ ಬಿದ್ದಿದ್ದಾರೆ.

ಘಟನೆಯಲ್ಲಿ ಪೈಲಟ್ ವಿದ್ಯಾಧರ ವೈದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ಯಾರಾ ಮೋಟಾರ್ ಬಿದ್ದಾಕ್ಷಣ ಸ್ಥಳೀಯ ಮೀನುಗಾರರು ಮತ್ತು ಲೈಪ್ವಗಾರ್ಡ್ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಮಾಡಿದರಾದರೂ ಪ್ರಯೋಜನವಾಗಲಿಲ್ಲ.
ಕಾರವಾರ ನಗರಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...