ಜಿಲ್ಲೆಯಲ್ಲಿ ಡಿಸೆಂಬರ್ 2 ರಿಂದ ಮಿಷನ್ ಇಂದ್ರಧನುಷ್ ಕಾರ್ಯಕ್ರಮ

Source: so news | Published on 17th November 2019, 11:49 PM | Coastal News | Don't Miss |


ಉಡುಪಿ: ಜಿಲ್ಲೆಯಲ್ಲಿ ಪ್ರಥಮ ಸುತ್ತಿನ ತೀವೃತರ ಮಿಷನ್ ಇಂದ್ರಧನು  ಕಾರ್ಯಕ್ರಮವು   ಡಿಸೆಂಬರ್ 2 ರಿಂದ 10 ರವರೆಗೆ ಹಾಗೂ ಶಾಲಾ ಲಸಿಕಾ ಕಾರ್ಯಕ್ರಮವು ಡಿಸೆಂಬರ್ 11 ರಿಂದ 31 ರವರೆಗೆ ನಡೆಯಲಿದೆ ಎಂದು ಜಿಲ್ಲಾ ಜಗದೀಶ್ ತಿಳಿಸಿದ್ದಾರೆ.
ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ತೀವೃತರ ಮಿಷನ್ ಇಂದ್ರಧನುμï ಮತ್ತು ಶಾಲಾ ಲಸಿಕಾ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಿಸೆಂಬರ್ 2 ರಿಂದ 10 ರವರೆಗೆ ನಡೆಯುವ ಲಸಿಕಾ ಕಾರ್ಯಕ್ರಮದಲ್ಲಿ 0-2 ವರ್ಷದೊಳಗಿನ 324 ಮಕ್ಕಳು, 67 ಗರ್ಭಿಣಿಯರು , 3753 ಮಕ್ಕಳಿಗೆ ಡಿಪಿಟಿ ಬೂಸ್ಟರ್, 10 ವರ್ಷದೊಳಗಿನ 3994 ಮಕ್ಕಳಿಗೆ ಟಿಡಿ ಲಸಿಕೆ ಮತ್ತು 16 ವರ್ಷದೊಳಗಿನ 3833 ಮಕ್ಕಳಿಗೆ ಟಿಡಿ ಲಸಿಕೆ ನೀಡುವ ಗುರಿ ಹೊಂದಿದ್ದು, ಪ್ರಮುಖವಾಗಿ ವಲಸೆ ಕಾರ್ಮಿಕರನ್ನು ಮತ್ತು ಲಸಿಕೆ ವಂಚಿತರನ್ನು ಗುರುತಿಸಿ ಲಸಿಕೆ ನೀಡುವಂತೆ ಜಿಲ್ಲಾಧಿಕಾ ಜಗದೀಶ್ ಸೂಚಿಸಿದರು.
ಶಾಲಾ ಲಸಿಕಾ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳ 10 ನೇ ತರಗತಿವರೆಗಿನ ಮಕ್ಕಳಿಗೆ ಲಸಿಕೆಯನ್ನು ನೀಡಲಾಗುತ್ತದೆ. ಈ ಕುರಿಂತೆ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಬಗ್ಗೆ ಸೂಕ್ತ ಅರಿವು ಮೂಡಿಸುವಂತೆ ತಿಳಿಸಿದರು.    
ಸಂಬಂದಪಟ್ಟ ಎಲ್ಲಾ ಇಲಾಖೆಗಳು ಕಾರ್ಯಕ್ರಮದ ಯಶಸ್ವಿಗೆ ಅಗತ್ಯ ಸಹಕಾರ ನೀಡಿ, ಪರಸ್ಪರ ಸಮ್ವಯದಿಂದ ಕಾರ್ಯ ನಿರ್ವಹಿಸುವಂತೆ ತಿಳಿಸಿದ ಡಿಸಿ, ಖಾಸಗಿ ಮತ್ತು ಸ್ವಯಂ ಸೇವಾ ಸಂಘಟನೆಗಳು ಅಗತ್ಯ ಸಹಕಾರ ನೀಡುವಂತೆ ಕೋರಿದರು.
ಮಿಷನ್ ಇಂದ್ರಧನುಷ್ ಕಾರ್ಯಕ್ರಮದ ಅನುಷ್ಠಾನ ಕುರಿತಂತೆ ಈಗಾಗಲೇ  ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿಯನ್ನು ನೀಡಿದ್ದು, ಕಾರ್ಯಕ್ರಮಕ್ಕೆ ಔಷಧಗಳ ಅಗತ್ಯ ದಾಸ್ತಾನು ಲಭ್ಯವಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ರಾಮ ರಾವ್ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಡಿ.ಡಿ.ಪಿ.ಐ ಶೇಷಶಯನ ಕಾರಿಂಜ , ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Read These Next

ಕೋವಿಡ್-19 ತಡೆಗಟ್ಟಲು ವರ್ಗಾವಣೆ ಮಾಡಿದರೂ ಪರವಾಗಿಲ್ಲ ಕಠಿಣ ಕ್ರಮ ಕೈಗೊಂಡು ಕೊರೊನ ನಿಯಂತ್ರಿಸಲು ಪ್ರಯತ್ನಿಸುತ್ತೇನೆ : ತಹಶೀಲ್ದಾರ ಮುಂದಲಮನಿ

ಮುಂಡಗೋಡ : ನನ್ನನ್ನು ಇಲ್ಲಿಂದ ವರ್ಗಾವಣೆ ಮಾಡಿದರು ಪರವಾಗಿಲ್ಲ ಕೋವಿಡ್ 19 ನಿಯಂತ್ರಣಕ್ಕೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ. ...