ಕೋಲಾರ: ಮಹಿಳಾ ಜಾಗೃತಿ ಸಮಾವೇಶ

Source: Shabbir Ahmed | By S O News | Published on 3rd August 2021, 11:35 PM | State News |

ಕೋಲಾರ: ಮಹಿಳೆಯರು ಸರ್ಕಾರದ ಸೌಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅದರಲ್ಲೂ ಹಳ್ಳಿಯ ಮಹಿಳಯರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸರ್ಕಾರ ಮಹಿಳೆಯರಿಗಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಅಭಿಪ್ರಾಯಪಟ್ಟರು.

ಪ್ರಜಾ ಸೇವಾ ಸಮಿತಿ ಸಹಯೋಗದಲ್ಲಿ ಅಂಗನವಾಡಿ, ಅಕ್ಷರ ದಾಸೋಹ, ಆಶಾ, ವಿ.ಆರ್.ಡಬ್ಲೂ. ಎಂ.ಆರ್.ಡಬ್ಲೂ. ಕ್ಷೇಮಾಭಿವೃದ್ಧಿ ಸಮಿತಿಗಳು ಹಾಗೂ ಕಾರ್ಯಕ್ರಮವನ್ನು ಬೆಂಬಲಿಸಿ ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಹಯೋಗದಲ್ಲಿ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಟ್ಟಕಡೆಯ ಮಹಿಳೆಯರನ್ನು ಗುರ್ತಿಸಿ ಪ್ರಜಾರತ್ನ ಪ್ರಶಸ್ತಿ ನೀಡಲಾಗಿದೆ ಇವರೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಕ್ಷೇತ್ರ ಸಲ್ಲಸಿದ ವ್ಯಕ್ತಿಗಳನ್ನು ಗುರ್ತಿಸಿ 150 ಮಂದಿಗೆ ಪ್ರಜಾರತ್ನ ಪ್ರಶಸ್ತಿಯನ್ನು ನೀಡಲಾಯಿತು. ಹಾಗೂ ಸಮಾವೇಶದಲ್ಲಿ ಪಾಲ್ಗೊಂಡ ಗಣ್ಯರಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿಕೋಲಾರ ಜಿಲ್ಲಾಧಿಕಾರಿ ಡಾ|| ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕಾ ಕಿಶೋರ್ ಬಾಬು, ಕೋಲಾರ ಚಿಕ್ಕಬಳ್ಳಾಪುರ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾದ ಆಂಜನೇಯರೆಡ್ಡಿ, ಸಮಿತಿಗಳ ಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ.ಶಿವಣ್ಣ, ನರಸಾಪುರ ಎಸ್.ನಾರಾಯಣಸ್ವಾಮಿ ಮುಂತಾದವರು ಹಾಜರಿದ್ದರು.

Read These Next

ರಸ್ತೆ,ರೈಲು, ವಾಯು ಮಾರ್ಗ- ಸಮಗ್ರ ಅಭಿವೃದ್ದಿ. ಶಿಕ್ಷಣದಿಂದ ಬದಲಾವಣೆ - ಕೈಗಾರಿಕೆಯಿಂದ ಅಭಿವೃದ್ದಿ ಸಾಧನೆ ಆಗಬೇಕು : ಬಿ‌ ವೈ ರಾಘವೇಂದ್ರ.

ಶಿವಮೊಗ್ಗ : ಶಿಕ್ಷಣದಿಂದ ಬದಲಾವಣೆ ಮತ್ತು ಕೈಗಾರಿಕೆಯಿಂದ ಅಭಿವೃದ್ದಿಯನ್ನು ಸಾಧಿಸುವ ನಿಟ್ಟಿನಲ್ಲಿ ಸರ್ಕಾರ ಹೊಸ ಶಿಕ್ಷಣ ನೀತಿ ...

ನಾಗಿರೆಡ್ಡಿ ಗ್ರಾಮದ ಬಳಿ ತ್ವರಿತವಾಗಿ ಗೋಶಾಲೆ ಆರಂಭಿಸಿ: ಜಿಲ್ಲಾಧಿಕಾರಿ ಆರ್ ಲತಾ

ಚಿಕ್ಕಬಳ್ಳಾಪುರ : ಸರ್ಕಾರಿ ಗೋಶಾಲೆ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆಯಾಗಿರುವ ಜಿಲ್ಲೆಯ ನಾಗಿರೆಡ್ಡಿ ಗ್ರಾಮದ ಬಳಿ ಪ್ರಸ್ತುತ ...

ಈ ಬಾರಿ ಅರ್ಥಪೂರ್ಣ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಿರ್ಧಾರ: ಡಾ. ಕೆ.ಸಿ ನಾರಾಯಣಗೌಡ

ಮಂಡ್ಯ : ಅಕ್ಟೋಬರ್ 9, 10 ಮತ್ತು 11 ರಂದು ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ನಡೆಸಲು ನಿರ್ಧರಿಸಲಾಗಿದ್ದು, ಅರ್ಥಪೂರ್ಣ ದಸರಾ ಆಚರಣೆಗೆ ...