ದಸರಾ ದರ್ಶಿನಿಗೆ ಶಾಸಕ ವೇದವ್ಯಾಸ ಕಾಮತ್ ರಿಂದ ಚಾಲನೆ

Source: SO News | By Laxmi Tanaya | Published on 27th September 2022, 6:52 PM | Coastal News | Don't Miss |

ಮಂಗಳೂರು : ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು.

ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8-9ಗಂಟೆಗೆ ಹೊರಟು ಮಂಗಳಾದೇವಿ ದೇವಸ್ಥಾನ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನ, ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಸಸಿಹಿತ್ಲು ಭಗವತಿ ದೇವಸ್ಥಾನ ಹಾಗೂ ಬೀಚ್, ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ, ಉರ್ವಾ ಮಾರಿಯಮ್ಮ ದೇವಸ್ಥಾನ ಹಾಗೂ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವದುರ್ಗ ದರ್ಶನ ಮೂಲಕ ಮಂಗಳೂರು ಬಸ್ ನಿಲ್ದಾಣಕ್ಕೆ ವಾಪಸ್ ಆಗುವ ಈ ಸೇವೆಯ ಮೂರು ಬಸ್‍ಗಳಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ವಿಶೇಷವಾದ ಹಾಗೂ ವಿನೂತನವಾದ ಮಂಗಳೂರು ದಸರಾ ದರ್ಶನ  ಯಾತ್ರೆಯ ಬಸ್ ಆರಂಭಿಸಿ, ಉತ್ತಮ ಪ್ರಯತ್ನ ಮಾಡಿದ್ದಾರೆ, ದಸರಾ ದರ್ಶನ ಮೂರು ಬಸ್ಸುಗಳು   ಯಾತ್ರಿಕರನ್ನು ಮಂಗಳೂರಿಗೆ ಹತ್ತಿರದಲ್ಲಿರುವ ದೇವಿಯ ಪ್ರಮುಖ ದೇವಸ್ಥಾನಗಳಿಗೆ ಕರೆದೊಯ್ಯಲಿವೆ, ಬಸ್ಸಿನಲ್ಲಿರುವ ಯಾತ್ರಿಕರು ಹಿರಿಯ ವಯಸ್ಸಿನವರು ಅವರು ಪೊಳಲಿ, ಕಟೀಲು, ಮಂಗಳದೇವಿ, ಬಪ್ಪನಾಡು ಹೀಗೆ ಎಲ್ಲಾ ದೇವಸ್ಥಾನಗಳಲ್ಲಿ ಮುಕ್ತವಾಗಿ ದರ್ಶನ ಮಾಡಬಹುದಾಗಿದೆ, ಅದಕ್ಕಾಗಿ ಇತರರನ್ನು ಅವಲಂಭಿಸುವಂತಿಲ್ಲ ಎಂದರು. 

9 ದಿನಗಳ ಈ ಒಂದು ಪ್ರಯತ್ನ ನಿಜಕ್ಕೂ ಮಂಗಳೂರಿನ ಜನತೆಗೆ ಸಂತೋಷ ತರಲಿದೆ, ಈ ದಸರಾ ದರ್ಶನದಲ್ಲಿ ಮಂಗಳೂರಿನ ಸಾರ್ವಜನಿಕರು, ಹಿರಿಯರು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬೇಕು. ದೇವಸ್ಥಾನದಲ್ಲಿ ಬಸ್ಸನ್ನು ಹತ್ತಿದ ನಂತರ ಪ್ರಯಾಣಿಕರೆಲ್ಲರೂ ಇರುವ ಬಗ್ಗೆ ಕಂಡಕ್ಟರ್ ಖಾತ್ರಿ ಪಡಿಸಿಕೊಳ್ಳಬೇಕು.

 ಸೆ.26 ರಿಂದ ಅ.5ರ ವರೆಗೆ ನಡೆಯಲಿರುವ ಈ ಪ್ಯಾಕೇಜ್‍ಗೆ ಹಿರಿಯರ ದರ 300ರೂ. ಹಾಗೂ ಮಕ್ಕಳಿಗೆ 200ರೂ. ಗಳನ್ನು ನಿಗದಿ ಮಾಡಲಾಗಿದೆ. ಪ್ರಯಾಣಿಕರು ಹೆಚ್ಚಾದಲ್ಲಿ ಹೆಚ್ಚುವರಿಯಾಗಿ ಪುನಃ 2 ಬಸ್ಸನ್ನು ನಿಯೋಜಿಸಲಾಗುವುದು ಎಂದು ಕೆ.ಎಸ್.ಆರ್.ಟಿ ಸಿ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮೂರು ಬಸ್ಸುಗಳ 90ಕ್ಕೂ ಹೆಚ್ಚು ಪ್ರಯಾಣಿಕರು, ಕೆಎಸ್‍ಆರ್‍ಟಿಸಿ ಮಂಗಳೂರು ವಿಭಾಗದ ವಿಭಾಗಿಯ ನಿಯಂತ್ರಣ ಅಧಿಕಾರಿ ರಾಜೇಶ್ ಶೆಟ್ಟಿ, ಡಿ.ಟಿ.ಓ. ಮರಿಗೌಡ, ಎ.ಟಿ.ಓ ನಿರ್ಮಲಾ, ಡಿಪೋ ಮ್ಯಾನೇಜರ್ ಲವೀನಾ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಸಿಬ್ಬಂದಿಗಳು, ಚಾಲಕರು ಹಾಗೂ ನಿರ್ವಾಹಕರು, ಭಕ್ತಾದಿಗಳು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...