ಭಯೋತ್ಪಾದಕರು ಮತ್ತು ನಕ್ಸಲೀಯರಿಗೆ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್

Source: S.O. News Service | By MV Bhatkal | Published on 21st October 2018, 7:29 PM | National News | Don't Miss |

ನವದೆಹಲಿ: ದೇಶದಲ್ಲಿ ಅಭದ್ರತೆ, ಅಶಾಂತಿ ಮತ್ತು ಆತಂಕ ಸೃಷ್ಟಿಸುವ ಶಕ್ತಿಗಳಿಗೆ ಅಂಕುಶ ಹಾಕುವುದಾಗಿ ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಘೋಷಿಸುವ ಮೂಲಕ ಭಯೋತ್ಪಾದಕರು ಮತ್ತು ನಕ್ಸಲೀಯರಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ನೆಲೆಸಬೇಕಾದರೆ ಪೊಲೀಸ್ ಸೇವೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅಭದ್ರತೆ ಮತ್ತು ಆತಂಕ ಸೃಷ್ಟಿಸುವಂತಹ ಪ್ರಯತ್ನಗಳಿಗೆ ಕಡಿವಾಣ ಹಾಕುವಲ್ಲಿ ಪೊಲೀಸರ ಕಾರ್ಯ ಶ್ಲಾಘನೀಯ ಎಂದು ಪ್ರಧಾನಿ ಪ್ರಶಂಸಿಸಿದರು.
ಇಂದು ರಾಷ್ಟ್ರೀಯ ಪೊಲೀಸ್ ಸಂಸ್ಮರಣಾ ದಿನಾಚರಣೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ನವದೆಹಲಿಯಲ್ಲಿ ರಾಷ್ಟ್ರೀಯ ಪೊಲೀಸ್ ಸ್ಮಾರಕ ಹಾಗೂ ಖಾಕಿ ಪಡೆಗಳಿಗಾಗಿ ಹೊಸದಾಗಿ ನಿರ್ಮಾಣವಾಗಿರುವ ಮ್ಯೂಸಿಯಂಅನ್ನು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ, ಕಾನೂನು-ಸುವ್ಯವಸ್ಥೆ ನಿರ್ವಹಣೆ ಹಾಗೂ ಉಗ್ರರ ವಿರುದ್ಧದ ಹೋರಾಟದಲ್ಲಿ ಪೊಲೀಸರ ಸೇವೆ ಮಹತ್ವದ್ದು. ಈ ಸಮರದಲ್ಲಿ ಹುತಾತ್ಮರಾದ ಪೊಲೀಸರು ಮತ್ತು ಯೋಧರನ್ನು ಸ್ಮರಿಸುವ ದಿನ ಇದಾಗಿದೆ ಎಂದು ಮೋದಿ ಹೇಳಿದರು.
ನಕ್ಸಲರ ಹಾವಳಿ ಇರುವ ಪ್ರದೇಶಗಳಲ್ಲಿ ಪೊಲೀಸರ ದಿಟ್ಟ ಮತ್ತು ಸಾಹಸ ಕಾರ್ಯಗಳು ಪ್ರಶಂಸನೀಯ. ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಇವರ ಸೇವೆ ಮಹತ್ವದ್ದು ಎಂದು ಗುಣಗಾನ ಮಾಡಿದ್ದಾರೆ.ನಕ್ಸಲ್ ಬಾಧಿತ ಜಿಲ್ಲೆಗಳಲ್ಲಿನ ಯುವಕರು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಅವರು ಕರೆ ನೀಡಿದರು. ಇದಕ್ಕೂ ಮುನ್ನ ಹುತಾತ್ಮರಾದ ಪೊಲೀಸರಿಗೆ ಗೌರವ ಸೂಚಿಸುವ 30 ಅಡಿ ಎತ್ತರ ಮತ್ತು 238 ಟನ್‍ಗಳಷ್ಟು ಭಾರೀ ತೂದಕ ಕಪ್ಪು ಶಿಲೆಯ ಬೃಹತ್ ಸ್ಮಾರಕ ಕಲಾಕೃತಿ ಹಾಗೂ 34,800ಕ್ಕೂ ಹೆಚ್ಚು ಹುತಾತ್ಮ ಪೊಲೀಸರ ಹೆಸರುಗಳನ್ನು ಕೆತ್ತಲಾಗಿರುವ ಭವ್ಯ ಗೋಡೆಯನ್ನು ಮೋದಿ ಈ ಸಂದರ್ಭದಲ್ಲಿ ಅನಾವರಣಗೊಳಿಸಿದರು. ದೆಹಲಿಯ ಹೃದಯ ಭಾಗದಲ್ಲಿರುವ ಚಾಣಕ್ಯಪುರಿ ಪ್ರದೇಶದ 12 ಎಕರೆ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಈ ಭವ್ಯ ಸ್ಮಾರಕ ಸ್ಥಳಕ್ಕೆ ಪ್ರಧಾನಿ ಆಗಮಿಸುತ್ತಿದ್ದಂತೆ, ಅವರಿಗೆ ಸಂಪ್ರದಾಯಿಕ ಪೊಲೀಸ್ ರಕ್ಷೆಯ ಗೌರವ ನೀಡಲಾಯಿತು. ನಂತರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಸ್ವಾಗತಿಸಿ ಸ್ಮಾರಕದ ಬಳಿ ಕರೆದೊಯ್ದರು.
ಕರ್ತವ್ಯದ ವೇಳೆ ಪ್ರಾಣಾರ್ಪಣೆ ಮಾಡಿ ಹುತಾತ್ಮರಾದ ಯೋಧರು ಮತ್ತು ಪೊಲೀಸರ ಸ್ಮಾರಕಕ್ಕೆ ಮೋದಿ ಪುಷ್ಪಗುಚ್ಛ ಇರಿಸಿ ಗೌರವ ವಂದನೆ ಸಲ್ಲಿಸಿದ ಸಂದರ್ಭದಲ್ಲಿ ಮೋದಿ ಅವರ ಕಣ್ಣುಗಳಲ್ಲಿ ನೀರು ತುಂಬಿತ್ತು.  ಗೃಹ ಖಾತೆ ರಾಜ್ಯ ಸಚಿವರಾದ ಕಿರಣ್ ರಿಜಿಜು ಮತ್ತು ಹಂಸರಾಮ್ ಜಿ ಆಹಿರ್, ಬಿಜೆಪಿ ಧುರೀಣ ಮತ್ತು ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ, ರಾಷ್ಟ್ರೀಯ ಭದ್ರತೆ ಸಲಹೆಗಾರ (ಎನ್‍ಎಎಸ್‍ಎ) ಅಜಿತ್ ದೊವಲ್, ಉನ್ನತಾಧಿಕಾರಿಗಳು. ವಿವಿಧ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು(ಸಿಎಪಿಎಫ್‍ಗಳು) ಹಾಗೂ ರಾಜ್ಯ ಪೊಲೀಸ್ ಪಡೆಗಳ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದಾಗಿನಿಂದ ಕರ್ತವ್ಯಕ್ಕಾಗಿ 24,844 ಪೊಲೀಸ್ ಸಿಬ್ಬಂದಿ ಪ್ರಾಣಾರ್ಪಣೆ ಮಾಡಿದ್ದಾರೆ. ಕಳೆದ ವರ್ಷ 414 ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ಗುಪ್ತಚರ ದಳದ ನಿರ್ದೇಶಕ ರಾಜೀವ್ ಜೈನ್ ತಿಳಿಸಿದ್ದಾರೆ. 1959ರಲ್ಲಿ ಲಡಾಕ್‍ನಲ್ಲಿ ಚೀನಾ ಸೇನಾಪಡೆಗಳಿಂದ ಹುತಾತ್ಮರಾದ ಪೊಲೀಸರನ್ನು ಸ್ಮರಿಸುವ ದಿನವನ್ನಾಗಿ ಪ್ರತಿ ವರ್ಷ ಅ.21ರಂದು ರಾಷ್ಟ್ರೀಯ ಪೊಲೀಸ್ ಸಂಸ್ಮರಣಾ ದಿನಾಚರಣೆ ಆಚರಿಸಲಾಗುತ್ತದೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...