ಚಾಚಾ ನೆಹರು ದಿರಸಿನಲ್ಲಿ ಮೊಂಟೆಸ್ಸರಿ ಮಕ್ಕಳ ಆಕರ್ಷಣೆ

Source: sonews | By Staff Correspondent | Published on 15th November 2018, 12:49 AM | Coastal News | State News | Don't Miss |

ಭಟ್ಕಳ: ಇಲ್ಲಿನ  ಹೆಬಳೆ ಪಂಚಾಯತ್ ವ್ಯಾಪ್ತಿಯ ತರಬಿಯತ್ ಎಜ್ಯುಕೇಶನ್ ಸೂಸೈಟಿಯ  ನ್ಯೂ ಶಮ್ಸ್ ಮೊಂಟೆಸ್ಸರಿ ಶಾಲೆಯ ವಿದ್ಯಾರ್ಥಿಗಳು ಮಕ್ಕಳ ದಿನಾಚರಣೆಯ ಅಂಗವಾಗಿ ಗುರುವಾರ ಚಾಚಾ ನೆಹರು ಅವರ ದಿರಸಿನಲ್ಲಿ ಕಾಣಿಸಿಕೊಂಡು ನೋಡುಗರನ್ನು ಹುಬ್ಬೇರಿಸುವಂತೆ ಮಾಡಿದರು. 

ಚಿಕ್ಕ ಚಿಕ್ಕ ವಿದ್ಯಾರ್ಥಿಗಳ ನೆಹರು ಟೋಪಿ, ನೆಹರು ಕುರ್ತಾ ಧರಿಸಿ ಶಾಲೆಗೆ ಬಂದಿದ್ದು ಎಲ್ಲರನ್ನು ಆಕರ್ಷಿಸಿದರು. 

ಮಕ್ಕಳದಿನಾರಣೆಯನ್ನು ಮಕ್ಕಳ ಹಬ್ಬವನ್ನಾಗಿ ಆಚರಿಸಿದ್ದು ನ್ಯೂ ಶಮ್ಸ್ ಸ್ಕೂಲ್ ನ 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಲಾಗಿತ್ತು. ಇದರಲ್ಲಿ ವಿಶೇಷ ಎಂಬಂತೆ ವಿದ್ಯಾರ್ಥಿಗಳೇ ಸ್ವಂತ ಮನೆಯಲ್ಲಿ ತಯಾರಿಸಿದ ಹ್ಯಾಂಡ್ ಕ್ರಾಫ್ಟ್ ,ಚಿತ್ರಕಲೆ, ಮಡಲ್ಸ್ ಗಳ ಮಾರಾಟ ಮತ್ತು ಪ್ರದರ್ಶನ ಏರ್ಪಡಿಸಿದ್ದು ಪಾಲಕರು ತಮ್ಮ ಮಕ್ಕಳ ಪ್ರತಿಭೆಗಳನ್ನು ನೋಡಿ ಆನಂದಿತರಾದರು. ಅಲ್ಲದೆ ಅವರೆ ಮಾಡಿದ ವಸ್ತುಗಳನ್ನು ಬೆಲೆಕೊಟ್ಟು ಕೊಂಡುಕೊಳ್ಳುವುದರ ಮೂಲಕ ವಿದ್ಯಾರ್ಥಿಗಳನ್ನು ‘ವ್ಯಾಪಾರ’ ಕಲೆಯಲ್ಲಿ ಆಸಕ್ತಿಮೂಡುವಂತೆ ಮಾಡಿದರು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮೌಲಾನ ಅಝೀಝುರ್ರಹ್ಮಾನ್ ರುಕ್ನುದ್ದೀನ್, ವಿದ್ಯಾರ್ಥಿಗಳಿಗೆ ಪಟ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿಯಿದ್ದು ಉತ್ತಮ ಪ್ರದರ್ಶನ ಮಾಡಿದ್ದಾರೆ ಎಂದರು. ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ ಮಾತನಾಡಿ, ಇಂತಹ ಕಾರ್ಯಕ್ರಮಗಳಿಂದಾಗಿ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿಯುಂಟಾಗಿ ಉತ್ತಮ ಅಂಕಗಳಿಕೆಗೆ ಸಾಧ್ಯವಾಗುತ್ತದೆ ಎಂದರು. 

ಈ ಸಂದರ್ಭದಲ್ಲಿ ನ್ಯೂ ಶಮ್ಸ್ ಸ್ಕೂಲ್‍ನ ಪ್ರಾಂಶುಪಾಲೆ ಫಹಮಿದಾ ಮುಲ್ಲಾ,  ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಂ.ಆರ್.ಮಾನ್ವಿ, ಶಿಕ್ಷಕರಾದ ಮಹೇಶ್ ನಾಯ್ಕ, ಅಬ್ದುಸ್ಸುಭಾನ್ ನದ್ವಿ, ಅಬ್ದುಲ್ಲಾ ಖಲಿಫಾ ನದ್ವಿ, ಮಂಜುನಾಥ್ ಹೆಬ್ಬಾರ್ ಶಾಝಿರ್ ಹುಸೇನ್ ಸೇರಿದಂತೆ ವಿದ್ಯಾರ್ಥಿಗಳು ಪಾಲಕರು ಉಪಸ್ಥಿತರಿದ್ದರು. 


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...