ಕರಾವಾರ: ಜಿಪಂ ಸಿಇಒ ಈಶ್ವರಕುಮಾರ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Source: S O News | By I.G. Bhatkali | Published on 18th January 2024, 7:22 PM | Coastal News |

ಕರಾವಾರ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ ರವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕು ಪಂಚಾಯತ್‍ನ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರನ್ನೊಳಗೊಂಡು ವಿವಿಧ ಯೋಜನೆಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಇಂದು ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ನರೇಗಾ, ಎಸ್.ಬಿ.ಎಂ, ಆರ್ಥಿಕ ಶಾಖೆ, ಸಕಾಲ, ಎನ್.ಆರ್.ಎಲ್.ಎಂ. ಯೋಜನೆ, ಗ್ರಾಮ ಪಂಚಾಯತಿ ತೆರಿಗೆ, ಹೆಸ್ಕಾಂ ಬಿಲ್ ಪಾವತಿ, ಗ್ರಂಥಾಲಯ, ವಸತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಯಿತು. 

ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ, ಅಪೂರ್ಣಗೊಂಡ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಜಿಲ್ಲೆಯ ವಿವಿಧ ಯೋಜನೆಗಳಲ್ಲಿ ನಿಗಧಿತ ಪ್ರಗತಿ ಕುಂಠಿತಗೊಂಡಿರುವುದನ್ನು ಉಲ್ಲೇಖಿಸಿ, ತ್ವರಿತವಾಗಿ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ್‍ನ ಆಡಳಿತ ಹಾಗೂ ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ, ಎನ್.ಜಿ.ನಾಯಕ್, ಮುಖ್ಯ ಲೆಕ್ಕಾಧಿಕಾರಿ ಡಾ. ಆನಂದಸಾ ಹಬೀಬ, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ, ಯೋಜನಾ ನಿರ್ದೇಶಕರು(ಡಿಆರ್‍ಡಿಎ) ಕರೀಂ ಅಸದಿ, ಸಹಾಯಕ ಕಾರ್ಯದರ್ಶಿÀ ಜಿ.ಆರ್. ಭಟ್, ಸುನೀಲ ನಾಯ್ಕ್, ಸಹಾಯಕ ಯೋಜನಾಧಿಕಾರಿ ಸುರೇಶ ನಾಯ್ಕ, ಎಲ್ಲ ತಾಲ್ಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್ ರಾಜ್ ಹಾಗೂ ನರೇಗಾ ಸಹಾಯಕ ನಿರ್ದೇಶಕರುಗಳು, ಜಿಲ್ಲಾ ಪಂಚಾಯತ್‍ನ ಎಲ್ಲ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read These Next