ಗೃಹಲಕ್ಷ್ಮಿ ಯೋಜನೆಯಡಿ ಸುಮಾರು 1.3 ಕೋಟಿ ಗೂ ಹೆಚ್ಚು ಅರ್ಜಿಗಳು ಬರುವ ನಿರೀಕ್ಷೆ - ಕಂದಾಯ ಸಚಿವ ಕೃಷ್ಣ ಬೈರೇಗೌಡ

Source: SOnews | By Staff Correspondent | Published on 9th June 2023, 6:52 PM | State News |

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಾರಿಗೊಳಿಸಲಾಗುತ್ತಿದ್ದು, ಇಂತಹ ಬೃಹತ್ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಆ ಇಲಾಖೆಗಿರುವ ಇತಿ-ಮಿತಿಗಳನ್ನು ಗಮನಿಸಿ ಕಂದಾಯ ಇಲಾಖೆಯ ಸಹಕಾರದೊಂದಿಗೆ ಜಾರಿಗೊಳಿಸಲು ಯೋಜಿಸಿದ್ದು, ಇಂದು ಈ ಕುರಿತಂತೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಇಂದು ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಅತ್ಯಂತ ದೊಡ್ಡ ಪಿಂಚಣಿ ಯೋಜನೆಯಾಗಿದ್ದು, ಮಹಿಳಾ ಮತ್ತು ಮಕ್ಕಳ ಇಲಾಖೆ ಅಷ್ಟೊಂದು ಅಧಿಕಾರಿ/ಸಿಬ್ಬಂದಿಗಳನ್ನು ಹೊಂದಿರದ ಕಾರಣಕ್ಕೆ ಕಂದಾಯ ಇಲಾಖೆ ವತಿಯಿಂದ ಸಹಕಾರ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಕಂದಾಯ ಇಲಾಖೆ ಅಡಿ ಬರುವ ಪಿಂಚಣಿಗಳ ಹಿರಿಯ ಅಧಿಕಾರಿಗಳೊಂದಿಗೆ ಇಂದು ಸಭೆ ಮಾಡಿದ್ದೇನೆ, ರಾಜ್ಯದಲ್ಲಿ ಈಗಾಗಲೇ ಸುಮಾರು 78 ಲಕ್ಷ ಜನ ವಿವಿಧ ರೀತಿಯ ಪಿಂಚಣಿ ಫಲಾನುಭವಿಗಳಿದ್ದಾರೆ. ವಿಧವೆಯರು, ಅಂಗವಿಕಲರು, ತೃತಿಯ ಲಿಂಗಿಗಳು ಸೇರಿದಂತೆ ಸುಮಾರು 78 ಲಕ್ಷ ಜನರಿಗೆ ಪ್ರತಿವಷರ್À ಪಿಂಚಣಿ ಲಭಿಸುತ್ತಿದೆ ಮತ್ತು 10,411 ಕೋಟಿ ರೂ. ಹಣ ಇಂತಹ ವಿವಿಧ ಪಿಂಚಣಿಗಳಿಗೆ ವೆಚ್ಚವಾಗುತ್ತಿದೆ.

ಕೆಲವರು ಗೊಂದಲ ಸೃಷ್ಟಿ ಮಾಡ್ತಿದ್ದಾರೆ, ಸಾಮಾಜಿಕ ಜಾಲತಾಣ ಹಾಗೂ ವಾಟ್ಸಾಪ್ ಸೇರಿದಂತೆ ಹಲವೆಡೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರು ಅನುಮಾನ ಮೂಡಿ ಕೆಲವು ಪ್ರಶ್ನೆಗಳನ್ನು ಕೇಳ್ತಿದ್ದಾರೆ, ಈವರೆಗೆ ಯಾವುದೇ ಪಿಂಚಣಿಗಳನ್ನು ಪಡೆಯುತ್ತಿದ್ದರೂ ಸಹ ಗೃಹÀಲಕ್ಷ್ಮಿಯಲ್ಲಿ ಯಾರು ಅರ್ಹರಾಗ್ತಾರೋ ಅವರಿಗೂ ಪಿಂಚಣಿ ನೀಡಲಾಗುತ್ತದೆ, ಗೃಹ ಲಕ್ಷ್ಮಿ ಯೋಜನೆ ಲಾಭ ಪಡೆದವರಿಗೆ ಪಿಂಚಣಿ ಕಟ್ ಮಾಡುವುದಿಲ್ಲ, ವೃದ್ಯಾಪ್ಯ, ಸಂಧ್ಯಾಸುರಕ್ಷಾ, ವಿಧವಾ ವೇತನ ಸೇರಿ ಯಾವುದನ್ನೂ ಮೊಟಕು ಮಾಡುವುದಿಲ್ಲ, ಇದರ ಜೊತೆಗೆ ಹೆಚ್ಚುವರಿಯಾಗಿ ಗೃಹ ಲಕ್ಷ್ಮಿ ಯೋಜನೆ ಲಭಿಸುತ್ತದೆ. ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡಬಾರದು ಎಂದು ಮನವಿ ಮಾಡಿದರು.

ಗೃಹ ಲಕ್ಷ್ಮಿ ಯೋಜನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆ ಆಗಿರುತ್ತದೆ, ಹಣಕಾಸಿನ ವ್ಯವಸ್ಥೆ ಅದೇ ಇಲಾಖೆ ಮಾಡಿಕೊಳ್ಳಲಿದೆ, ಪಿಂಚಣಿಗಳ ವಿಷಯದಲ್ಲಿ ಕಂದಾಯ ಇಲಾಖೆಗೆ ಸಾಕಷ್ಟು ಅನುಭವ ಇರುತ್ತದೆ. ಹೀಗಾಗಿ ಕಂದಾಯ ಇಲಾಖೆ ಮಹಿಳಾ ಕಲ್ಯಾಣ ಇಲಾಖೆಗೆ ಸಹಕಾರ ನೀಡಲು ಸಿಎಂ ಸೂಚನೆ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ಸುಮಾರು 1.3 ಕೋಟಿಗೂ ಹೆಚ್ಚು ಅರ್ಜಿಗಳು ಬರುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ, ಇಷ್ಟು ಅರ್ಜಿ ಸ್ವೀಕಾರ ಮಾಡಲು ಬಹಳ ದೊಡ್ಡ ಸವಾಲಿನ ಕೆಲಸ. ಇಲಾಖೆಯಲ್ಲಿ ಇಡೀ ವಷರ್À ಸೇರಿ ಇಷ್ಟು ದೊಡ್ಡ ಪ್ರಮಾಣದ ಅರ್ಜಿಗಳು ಬರುತ್ತಿದ್ದವು. ಆದರೆ, ಈ ಯೋಜನೆಯನ್ನು ತ್ವರಿತವಾಗಿ ಜಾರಿ ಮಾಡುತ್ತಿರುವ ಕಾರಣಕ್ಕೆ ಬರುವ ಎರಡು ತಿಂಗಳ ಒಳಗೆ ಇಷ್ಟು ದೊಡ್ಡ ಪ್ರಮಾಣದ ಅರ್ಜಿ ಸ್ವೀಕಾರ ಮಾಡಬೇಕಿದೆ.

ರಾಜ್ಯದ 898 ನಾಡ ಕಚೇರಿಗಳು ಸೇರಿದಂತೆ ಬಾಪೂಜಿ ಸೇವಾ ಕೇಂದ್ರ, ಗ್ರಾಮ 1, ಬೆಂಗಳೂರು 1 ನೇರವಾಗಿ ಮತ್ತು ಸೇವಾ ಸಿಂಧು ಹಾಗೂ ಇದಕ್ಕಾಗಿ ಅಭಿವೃದ್ಧಿಪಡಿಸಲಾಗುತ್ತಿರುವ ಆಪ್ ನ ಮೂಲಕ ಆನ್ ಲೈನ್‍ನಲ್ಲಿ ಸಹ ಅರ್ಜಿ ಸಲ್ಲಿಸಬಹುದು. ಬಹುತೇಕ ಮನೆ ಬಾಗಿಲಿಗೆ ಹೋಗಿ ಆನ್ ಲೈನ್ ಮೂಲಕ ಅರ್ಜಿ ಪಡಯುವ ವ್ಯವಸ್ಥೆಯನ್ನು ಜಾರಿಗೆ ತರಲು ಯೋಜಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯ, ಅಟಲ್ ಜನಸ್ನೇಹಿ ನಿರ್ದೇಶಕರಾದ ಕರಿಗೌಡ ಅವರು ಉಪಸ್ಥಿತರಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...