ಉ.ಪ್ರ. ಗೋಶಾಲೆಯಲ್ಲಿ 50ಕ್ಕೂ ಅಧಿಕ ಗೋವುಗಳ ಸಾವು

Source: Vb | By I.G. Bhatkali | Published on 6th August 2022, 3:46 PM | National News |

ಅಮ್ರೋಹಾ: ಉತ್ತರಪ್ರದೇಶದ ಅಮ್ರೋಹಾ  ಜಿಲ್ಲೆಯ ಹಸನ್‌ಪುರ ಪ್ರದೇಶದಲ್ಲಿರುವ ಗೋಶಾಲೆ ಯೊಂದರಲ್ಲಿ 50ಕ್ಕೂ ಅಧಿಕ ಜಾನುವಾರುಗಳು ಮೃತಪಟ್ಟಿರುವುದಾಗಿ ವರದಿಯಾಗಿದೆ.

50ಕ್ಕೂ ಅಧಿಕ ಗೋವುಗಳು ಗುರುವಾರ ಸಾವನ್ನಪ್ಪಿದ್ದು, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಹಾಗೂ ಪಶುಸಂಗೋಪನಾ ಸಚಿವ ಧರಂ ಪಾಲ್ ಸಿಂಗ್ ಅವರು ಅಮ್ರೋಹಾ  ಜಿಲ್ಲೆಗೆ ತೆರಳುವಂತೆ ಸೂಚಿಸಿದ್ದಾರೆ.

ದನಗಳು ಸಂಜೆ ಹೊತ್ತು ಮೇವನ್ನು ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದವು ಎಂದು ಅಮ್ರೋಹಾ ಜಿಲ್ಲಾಧಿಕಾರಿ ಬಿ.ಕೆ. ತ್ರಿಪಾಠಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಹಾಗೂ ಪಶುವೈದ್ಯರು ಘಟನಾ ಸ್ಥಳಕ್ಕೆ ಧಾವಿಸಿದ್ದು ಅಸ್ವಸ್ಥ ಗೋವುಗಳಿಗೆ ಚಿಕಿತ್ಸೆ ನೀಡು ತಿದ್ದಾರೆಂದು ಮೂಲಗಳು ತಿಳಿಸಿವೆ. ಗೋಶಾಲೆಯಲ್ಲಿ 50ಕ್ಕೂ ಅಧಿಕ ದನಗಳು ಮೃತಪಟ್ಟಿರುವುದನ್ನು ಪೊಲೀಸ್ ಅಧೀಕ್ಷಕ ಆದಿತ್ಯ ಲಾಂಗೆಹ್ ಅವರು ದೃಢಪಡಿಸಿದ್ದಾರೆ.

ಪಶುಗಳಿಗೆ ಬೇಕಾದ ಮೇವನ್ನು ಗೋಶಾಲೆಯ ಆಡಳಿತವು ತಾಹಿರ್ ಎಂಬಾತನಿಂದ ಖರೀದಿಸಿದ್ದಾಗಿ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತಾಹಿರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಹಾಗೂ ಆತನ ಬಂಧನಕ್ಕೆ ಪ್ರಯತ್ನಗಳು ನಡೆಯುತ್ತಿವೆ'' ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ. ಗೋಶಾಲೆಯ ಉಸ್ತುವಾರಿಯಾಗಿದ್ದ ಗ್ರಾಮಾಭಿವೃದ್ಧಿ ಅಧಿಕಾರಿ ಯನ್ನು ಅಮಾನತು ಗೊಳಿಸಲಾಗಿದೆ ಎಂದವರು ತಿಳಿಸಿದರು.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...