ಬೆಂಗಳೂರು: ಪಟಾಕಿ ತಂದ ಆಪತ್ತು; ಬೆಂಗಳೂರಿನಲ್ಲಿ 80ಕ್ಕೂ ಅಧಿಕ ಪಟಾಕಿ ಅವಘಡ ಪ್ರಕರಣ

Source: Vb News | By I.G. Bhatkali | Published on 14th November 2023, 1:37 PM | State News |

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ, ಅಗತ್ಯವಾದ ಸುರಕ್ಷತೆಯ ನಡುವೆಯೂ ನಗರದಲ್ಲಿ 80ಕ್ಕೂ ಹೆಚ್ಚು ಪಟಾಕಿ ಅವಘಡ ಪ್ರಕರಣಗಳು ವರದಿಯಾಗಿವೆ.

ನ.12ರ ರಾತ್ರಿಯಿಂದ ಈವರೆಗೆ ನಗರದಾದ್ಯಂತ ಸುಮಾರು 80ಕ್ಕೂ ಹೆಚ್ಚು ಪಟಾಕಿ ಅವಘಡದಿಂದ ಹಾನಿಗೊಳಗಾದವರು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆಗೆ ಪಡೆಯುತ್ತಿದ್ದು, ಅದೃಷ್ಟವಶಾತ್ ಅವಘಡಗಳಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆರೋಗ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ

ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಸುಮಾರು ಏಳಕ್ಕೂ ಹೆಚ್ಚು ಜನರು ಪಟಾಕಿ ಸಂಬಂಧಿತ ಗಾಯಗಳ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇಬ್ಬರು ಗಾಯಾಳುಗಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಐವರಿಗೆ ಒಪಿಡಿಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇವರಲ್ಲಿ 10 ವರ್ಷದ ಬಾಲಕಿ ಮತ್ತು 18 ವರ್ಷದ ಯುವಕನಿಗೆ ಗಂಭೀರ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ನಾರಾಯಣ ನೇತ್ರಾಲಯದಲ್ಲಿ ಪಟಾಕಿ ಅವಘಡದಿಂದ 16ಕ್ಕೂ ಹೆಚ್ಚಿನ ಗಂಭೀರವಾಗಿ ಗಾಯಗೊಂಡವರು ಚಿಕಿತ್ಸೆಗೆ ದಾಖಲಾಗಿದ್ದಾರೆ. ಇದರಲ್ಲಿ ಬೇರೆಯವರು ಸಿಡಿಸಿದ ಪಟಾಕಿಯಿಂದ ಗಾಯಗೊಂಡವರೇ ಹೆಚ್ಚಾಗಿದ್ದಾರೆ. ಇವರಲ್ಲಿ ಟೈಲರ್ ಒಬ್ಬರು ಮತ್ತು 19 ವರ್ಷದ ಯುವಕನಿಗೆ ಗಂಭೀರ ಗಾಯಗಳಾಗಿವೆ. ಉಳಿದ ಗಾಯಾಳುಗಳಿಗೆ ಸಣ್ಣಪುಟ್ಟ ಚಿಕಿತ್ಸೆಯ ಅಗತ್ಯವಿದ್ದು, ನೀಡಲಾಗುತ್ತಿದೆ. ಮುಂದಿನ
48 ಗಂಟೆಗಳ ಕಾಲ ಗಾಯಾಳುಗಳ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಅವಘಡದಲ್ಲಿ ಪಾದಚಾರಿಗಳು, ಅಂಗಡಿಗಳಲ್ಲಿ ಕೆಲಸ ಮಾಡುತ್ತಿರುವವರೂ ಗಾಯಗೊಂಡಿದ್ದಾರೆ. ಇತ್ತೀಚೆಗೆ ಪಟಾಕಿ ಸಿಡಿಸುವವರು ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ಆದರೆ, ದೂರ ನಿಂತು ಅದನ್ನು ವೀಕ್ಷಿಸುವವರು ಗಾಯಗೊಳ್ಳುತ್ತಿದ್ದಾರೆ. ಕಣ್ಣು ಸೂಕ್ಷ್ಮವಾಗಿದ್ದರಿಂದ ಸಣ್ಣ ಕಿಡಿಯೂ ದೊಡ್ಡ ಹಾನಿ ಮಾಡುತ್ತದೆ. ಪಟಾಕಿ ಅವಘಡಕ್ಕೆ ಒಳಗಾದವರಿಗೆ ಚಿಕಿತ್ಸೆ ನೀಡಲು ಆರು ವೈದ್ಯರು ಹಾಗೂ 18ರಿಂದ 20 ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿ, ದಿನದ 24 ಗಂಟೆಗಳೂ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ರೋಹಿತ್ ಶೆಟ್ಟಿ ತಿಳಿಸಿದ್ದಾರೆ.

ಶಂಕರ ನೇತ್ರಾಲಯದಲ್ಲಿ ಎರಡು ಪಟಾಕಿ ಗಾಯದ ಪ್ರಕರಣ ವರದಿಯಾಗಿದೆ. ಇದರಲ್ಲಿ ಆರು ಮತ್ತು ಏಳು ವರ್ಷದ ಮಕ್ಕಳು ಪಟಾಕಿಯಿಂದ ಗಾಯಗೊಂಡಿದ್ದಾರೆ. ಪಟಾಕಿ ಹಚ್ಚುವುದನ್ನು ನೋಡುತ್ತಿದ್ದಾಗ ಏಳು ವರ್ಷದ ಬಾಲಕನಿಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Read These Next

ಶಿರೂರು ಗುಡ್ಡ ಕುಸಿತ; ಗಂಗಾವಳಿ ನದಿಯಲ್ಲಿ ಟ್ರಕ್ಕೊಂದು ಮುಳುಗಿರುವುದನ್ನಖಚಿತ ಪಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಅಂಕೋಲಾದ ಶಿರೂರಿನಲ್ಲಿ ಜುಲೈ 16ರಂದು ಸಂಭವಿಸಿದ ಭೂಕುಸಿತದಲ್ಲಿ ತಮ್ಮ ಟ್ರಕ್‌ನೊಂದಿಗೆ ನಾಪತ್ತೆಯಾಗಿದ್ದ ...

ಅಂಕೋಲಾ ಗುಡ್ಡ ಕುಸಿದು ಮೃತಪಟ್ಟ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ; ಸರ್ಕಾರದಿಂದ ಘೋಷಣೆ

ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5ಲಕ್ಷ ರೂ.ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ...