ಕಾವೇರಿದ ಬಂದ್‌; ಬೆಂಗಳೂರು, ಮೈಸೂರು ಭಾಗದ ಹುತೇಕ ಜಿಲ್ಲೆಗಳು ಸ್ತಬ್ಧ

Source: Vb | By I.G. Bhatkali | Published on 30th September 2023, 7:47 AM | State News |

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕನ್ನಡ ಒಕ್ಕೂಟ ಶುಕ್ರವಾರ ಕರೆ ನೀಡಿದ್ದ ಕರ್ನಾಟಕ ಬಂದ್ ಹೋರಟವು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ.

ಮಂಗಳವಾರವಷ್ಟೇ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್‌ಗೆ ಕರೆ ಕೊಟ್ಟಾಗ ವಿವಿಧ ಸಂಘಟನೆಗಳ ಮುಖಂಡರಿಗೆ, ರಾಜಕೀಯ ಪಕ್ಷಗಳ ಮುಖಂಡರಿಗೆ, ಸಾರ್ವಜನಿಕರಿಗೆ ಅಖಂಡ ಕರ್ನಾಟಕ ಬಂದ್‌ ಯಶಸ್ವಿಯಾಗುವ ವಿಶ್ವಾಸ ಇರಲಿಲ್ಲ. ಆದರೆ, ಕಡಿಮೆ ಅವದಿಯಲ್ಲಿ ಆಯೋಜನೆಗೊಂಡ ಶುಕ್ರವಾರದ ಬಂದ್‌ಗೆ ರಾಜಧಾನಿ ಬೆಂಗಳೂರು ಒಳಗೊಂಡಂತೆ ಬಹುತೇಕ ಜಿಲ್ಲೆಗಳಲ್ಲೂ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು.

ವರ್ತಕರು, ಸಂಘಟನೆಗಳು, ಆಟೊ, ಖಾಸಗಿ ಬಸ್ ಚಾಲಕರು, ವಕೀಲರು, ವಿದ್ಯಾರ್ಥಿಗಳು ತೋರಿದ ಪ್ರತಿಕ್ರಿಯೆ ರೈತ ಹಿತರಕ್ಷಣಾ ಸಮಿತಿಯ ನಿರೀಕ್ಷೆಯನ್ನೂ ಮೀರಿಸಿತ್ತು. ಬಂದ್‌ನಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರಕಾರ ದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಯಿತು.

ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ಕೆಲ ಭಾಗ, ಅಂತರ್‌ರಾಜ್ಯ ಮಾರ್ಗದ ಸರಕಾರಿ ಬಸ್ ಸಂಚಾರ ಇಲ್ಲದೆ ಪ್ರಯಾಣಿಕರು ಪರದಾಡಿದರು. ನಗರದ ಬಸ್ ನಿಲ್ದಾಣದಿಂದ ಬೆಳಗ್ಗೆ ಸಂಚಾರ ಆರಂಭಿಸಿದ್ದವು. ಆದರೆ ಹೋರಾಟದ ತೀವ್ರತೆ ಹೆಚ್ಚಾದಾಗ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದವು. ಸಾರಿಗೆ ಬಸ್ ನಿಲ್ದಾಣಕ್ಕೆ ಬಸ್‌ಗಳು ಬಾರದ ಹಿನ್ನೆಲೆಯಲ್ಲಿ ನಿಲ್ದಾಣ ಬಿಕೋ ಎನ್ನುತ್ತಿತ್ತು. ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರದಿಂದ ಇತರ ಪಟ್ಟಣ, ಗ್ರಾಮೀಣ ಪ್ರದೇಶಕ್ಕೆ ತೆರಳಬೇಕಾದ ಪ್ರಯಾಣಿಕರು ಬಸ್ ಗಾಗಿ ಕಾದು ಪರದಾಡಿದರು.

ಅದರಲ್ಲೂ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ತುಮಕೂರು, ಹಾಸನ, ಚಿತ್ರದುರ್ಗ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿಯೂ ಬಂದ್ ಬಿಸಿ ಜನರಿಗೆ ತಟ್ಟಿದ್ದು, ಇಲ್ಲಿನ ಯಾದಗಿರಿ ಜಿಲ್ಲೆ ಶಹಾಪುರದ ಬಸವೇಶ್ವರ ವೃತ್ತದಲ್ಲಿ ಉರುಳು ಸೇವೆ ಮಾಡುವ ಮೂಲಕ ಕನ್ನಡಪರ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಹಾಗೇ, ರಾಮನಗರದಲ್ಲಿ ಕೆಂಪೇಗೌಡ ಸರ್ಕಲ್‌ನಿಂದ ಐಜೂರು ವೃತ್ತದವರೆಗೆ ಎಮ್ಮೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭಾವಚಿತ್ರ ಅಂಟಿಸಿ ಮೆರವಣಿಗೆ ನಡೆಸಲಾಯಿತು. ಚಾಮರಾಜನಗರದ ಸಿದ್ದಾರ್ಥ ಚಿತ್ರಮಂದಿರದಲ್ಲಿ ನಿನ್ನೆ ತೆರೆ ಕಂಡಿದ್ದ ತಮಿಳು ಚಿತ್ರ ಚಂದ್ರಮುಖಿ-2 ಚಿತ್ರದ ಪೋಸ್ಟರ್ ಹರಿದು ಕನ್ನಡಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಬಿಎಂಟಿಸಿ ಬಸ್ಸಿಗೆ ಹಾನಿ: ಕರ್ನಾಟಕ ಬಂದ್ ಹಿನ್ನೆಲೆ, ನಗರದ ಪುರಭವನ (ಟೌನ್ ಹಾಲ್) ಎದುರು ಜಮಾಯಿಸಿ ಮೆರವಣಿಗೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ಬಿಎಂಟಿಸಿ ಮೂಲಕ ಫ್ರೀಡಂ ಪಾರ್ಕ್‌ವರೆಗೆ ಕರೆದೊಯ್ಯುವ ವೇಳೆಯಲ್ಲಿ ಸಿಟ್ಟಿಗೆದ್ದ ಕೆಲ ಪ್ರತಿಭಟನಾಕಾರರು ಕಲ್ಲಿನಲ್ಲಿ ಬಸ್ಸಿನ ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ವರದಿಯಾಗಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...