ಭಟ್ಕಳದ ಗಡಿ ಭಾಗದಲ್ಲಿರುವ ಟೋಲ್ ಚಲೋಗೆ ಹರಿದು ಬಂದ ಜನಸಾಗರ:ಸ್ಥಳೀಯರಿಗೆ ರಿಯಾಯಿತಿ ನೀಡಬೇಕು ಎಂದು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಆಗ್ರಹ

Source: so news | Published on 30th October 2019, 10:06 PM | Coastal News | Don't Miss |


ಭಟ್ಕಳ: ತಾಲೂಕಿನ ಗಡಿ ಭಾಗದಲ್ಲಿ ನಿರ್ಮಿಸಲಾದ ಟೋಲ್ ಗೇಟ್ ನಲ್ಲಿ 10 ಕಿ.ಮಿ ವರೆಗೆ ಸ್ಥಳೀಯರಿಗೆ ರಿಯಾಯಿತಿ ನೀಡಬೇಕು ಸರ್ವಿಸ್ ರಸ್ತೆ ಪೂರ್ಣಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಹೆದ್ದಾರಿ ಹೋರಾಟ ಸಮಿತಿ ಶಿರೂರು, ಭಟ್ಕಳದ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬುಧವಾರದಂದು ಟೋಲ್ ಚಲೋ ಅಭಿಯಾನ ಪ್ರತಿಭಟನೆ ಯನ್ನು ನಡೆಸಲಾಯಿತು

ಸಾರ್ವಜನಿಕರ ಪರವಾಗಿ ಮನವಿ ನೀಡಿ ಮಾತನಾಡಿದ ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಹೆದ್ದಾರಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿ ಮಾತನಾಡಿ ಬೈಂದೂರು ಕ್ಷೇತ್ರ ಸೇರಿದಂತೆ ಕಾರವಾರದಿಂದ ಕುಂದಾಪುರದವರೆಗೆ  ಐ.ಆರ್.ಬಿ ಕಂಪೆನಿ ಸಂಪೂರ್ಣ ಕಳಪೆ ಕಾಮಗಾರಿ ನಡೆದಿದೆ.ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.ಸಾರ್ವಜನಿಕರ ಬೇಡಿಕೆಗಳಿಗೆ ಸ್ಪಂಧಿಸಿ ಪೂರ್ಣಗೊಳಿಸಿದ ಬಳಿಕ ಟೋಲ್ ಆರಂಭಿಸಬೇಕು.ಇಲ್ಲವಾದರೆ ಯಾವುದೇ ಕಾರಣಕ್ಕೂ ಟೋಲ್ ಆರಂಭ ಮಾಡಲು ಬಿಡುವುದಿಲ್ಲ ಎಂದು ಗುಡುಗಿದರು.
ನಂತರ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದೆ ಮಳೆಗಾಲದಲ್ಲಿ ವಾಹನ ಸವಾರರು ತೀವೃ ಸಮಸ್ಯೆ ಎದುರಿಸಬೇಕಾಗಿದೆ.ನಿಗಧಿಪಡಿಸಿದ ಸ್ಥಳಗಳಲ್ಲಿ ಸರ್ಕಲ್‌ಗಳನ್ನು,ಡಿವೈಡರ್‌ಗಳನ್ನು ಅಳವಡಿಸದಿರುವುದು ಅಪಘಾತ ಸಂಖ್ಯೆ ಇನ್ನಷ್ಟು ಹೆಚ್ಚಲು ಕಾರಣವಾಗಿದೆ.ಹೀಗಾಗಿ ಸಾರ್ವಜನಿಕರಿಗೆ ಅಗತ್ಯವಾಗಿರುವ ಸರ್ವಿಸ್ ರಸ್ತೆಗಳನ್ನು ಪೂರ್ಣಗೊಳಿಸಿ ಟೋಲ್ ಆರಂಭಿಸಬೇಕು.ಒಂದೊಮ್ಮೆ ಬೇಡಿಕೆ ಈಡೇರಿಸದಿದ್ದಲ್ಲಿ ಹೆಮ್ಮಾಡಿಯಿಂದ ಶಿರೂರಿನವರೆಗೆ ಪಾದಯಾತ್ರೆ ಮಾಡುತ್ತೇವೆ ಎಂದರು.

30 ರೂಪಾಯಿ ಬಿರಿಯಾನಿ ತಿನ್ನಲು 70 ರೂಪಾಯಿ ಟೋಲ್ ನೀಡಬೇಕು: ಶಿರೂರು ಮುಂತಾದ ಜನರು ವ್ಯಾಪಾರ,ಶಾಫಿಂಗ್ ಸೇರಿದಂತೆ ಬಹುತೇಕ ಜನರು ಭಟ್ಕಳಕ್ಕೆ ತೆರಳುತ್ತಾರೆ ಮಾತ್ರವಲ್ಲದೆ ಉತ್ತರ ಕನ್ನಡದ ನಂಟನ್ನು ಹೊಂದಿದ್ದಾರೆ.ಭಟ್ಕಳದ ಹೋಟೆಲ್‌ನಲ್ಲಿ ಕುಟುಂಬದ ಜೊತೆ ಊಟ ಮಾಡಬೇಕೆಂದು ಇಚ್ಚಿಸಿದರೆ 30 ರೂಪಾಯಿ ಬಿರಿಯಾನಿ ತಿನ್ನಲು 70 ರೂಪಾಯಿ ಟೋಲ್ ನೀಡಬೇಕಾಗಿದೆ.ಮನೆಯಿಂದ ತೋಟಕ್ಕೆ ಹೋಗಬೇಕಾದರು ಟೋಲ್ ಕೊಡಬೇಕಾಗುತ್ತದೆ.ಹೀಗಾಗಿ ಸ್ಥಳೀಯ 10 ಕಿ.ಮಿ ವರೆಗೆ ಯಾವುದೇ ಕಾರಣಕ್ಕೂ ಸುಂಕ ವಸೂಲಿ ಮಾಡಬಾರದು ಎನ್ನುವ ಅಭಿಪ್ರಾಯ ಸಾರ್ವಜನಿಕರಿಂದ ಕೇಳಿ ಬಂದಿದೆ.

ಈ ಸಂದರ್ಭದಲ್ಲಿ ಐ.ಆರ್.ಬಿ ಅಧಿಕಾರಿಗಳಿಗೆ ಮನವಿ ನೀಡಲಾಯಿತು.ಟೋಲ್ ಚಲೋ ಅಭಿಯಾನದಲ್ಲಿ ಭಟ್ಕಳ, ಶಿರೂರು ಹಾಗೂ ಬೈಂದೂರಿನ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು

Read These Next

ಕಾರವಾರ: ಕುಡಿಯುವ ನೀರು ಸಮಸ್ಯೆ : ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ...

ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ...