ಕಾರವಾರ: ದಿಶಾ ಸಭೆಯಲ್ಲಿ ಅಧಿಕಾರಿಗಳಿಗೆ ಸಂಸದ ಅನಂತಕುಮಾರ ಹೆಗಡೆ ಸೂಚನೆ ಪರಸ್ಪರ ಸಮನ್ವಯತೆ ಮೂಲಕ ಪ್ರಗತಿ ಸಾಧಿಸಿ

Source: S.O. News service | By S O News | Published on 18th January 2021, 11:40 PM | Coastal News |

ಕಾರವಾರ: ವಿವಿಧ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯ ಮಾಡಿಕೊಂಡು ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲನುಭವಿಗಳಿಗೆ ತಲುಪಿಸಿ ಶೇ. 100ರಷ್ಟು ಪ್ರಗತಿ ಸಾಧಿಸಬೇಕೆಂದು ಸಂಸದ ಅನಂತಕುಮಾರ ಹೆಗಡೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಸೋಮವಾರ ಜರುಗಿದ ಕೇಂದ್ರ ಸರಕಾದ ವಿವಿಧ ಯೋಜನೆಗಳ ದಿಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜನ ಸಾಮಾನ್ಯರ ಸರ್ವತೋಮುಖ ಅಭಿವೃದ್ಧಿಯ ದೃಷ್ಠಿಯಿಂದ ಕೇಂದ್ರ ಸರಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಈ ಮೂಲಕ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಸಮಸ್ಯೆಗಳ ನಿವಾರಣೆಗೆ ಮುಂದಾಗಿದೆ. ಆದರೆ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವಂತಹ ಅಧಿಕಾರಿಗಳ ಸಮನ್ವಯದ ಕೊರತೆ ಹಾಗೂ ವಿಳಂಬ ಧೋರಣೆಯಿಂದ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ. ಅಲ್ಲದೇ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಡಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳು ಸಹ ಪೂರ್ಣವಾಗಿಲ್ಲ. ಹೀಗಾಗಿ ಸಂಬಂಧಪಟ್ಟ ಎಲ್ಲ

ಇಲಾಖೆಗಳ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯ ಮೂಲಕ ಕಾರ್ಯ ನೀರ್ವಹಿಸಬೇಕು. ಜೋತೆಗೆ ಪ್ರತಿ ಇಲಾಖೆಯು ಶೇ. 100ರಷ್ಟು ಪ್ರಗತಿ ಸಾಧಿಸಿದ ಅಂಕಿ ಅಂಶಗಳ ಮಾಹಿತಿಯನ್ನು ಮುಂದಿನ ದಿಶಾ ಸಭೆಯಲ್ಲಿ ನೀಡಬೇಕು ಎಂದು ತಿಳಿಸಿದರು.

ಇದೇ ವೇಳೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಸಂಸದರು, ಕಳೆದ ಸಭೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲ ವಿಕಲಚೇತನರಿಗೆ ಕೇಂದ್ರ ಸರಕಾರದ ಯೋಜನೆಯಡಿ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿಯೂ ಕಾರ್ಡ್ ವಿತರಿಸಲು ಅನುಕೂಲ ಮಾಡಿಕೊಡಲು ಸೂಚಿಸಲಾಗಿತ್ತು. ಆ ಕಾರ್ಯದಲ್ಲಿ ಎಷ್ಟು ಪ್ರಗತಿ ಸಾಧಿಸಿದ್ದೀರಿ ಎಂದು ಮಾಹಿತಿ ಕೇಳಿದರು.

ಜಿಲ್ಲೆಯಲ್ಲಿ ಒಟ್ಟಾರೆಯಾಗಿ 16331 ಜನ ವಿಕಲಚೇತನರಿದ್ದು, ಪ್ರಸ್ತುತ 14742 ಜನರಿಗೆ ವಿಕಲಚೇತನ ಕಾರ್ಡ್ ವಿತರಿಸಲಾಗಿದೆ. ಜನೆವರಿ ಅಂತ್ಯಕ್ಕೆ ಇನ್ನುಳಿದ 2000ಕ್ಕೂ ಅಧಿಕ ವಿಕಲಚೇತನರಿಗೆ ಕಾರ್ಡ್ ವಿತರಿಸಲಾಗುವುದು ಎಂದು ಸಂಸದರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.

ನಂತರ ಕೃಷಿ, ತೋಟಗಾರಿಕೆ, ಗ್ರಾಮೀಣ ಕುಡಿಯುವ ನೀರು ಸರಬರಾಜು, ಶಿಕ್ಷಣ ಹಾಗೂ ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು 2019-20ರ ಅವಧಿಯಲ್ಲಿ ಕೈಗೊಂಡ ಕಾಮಗಾರಿಗಳ ಕುರಿತು ಚರ್ಚಿಸಿದರು. ಜೊತೆಗೆ ಕಾಮಗಾರಿಗಳ ವಿವರ ಹಾಗೂ ಅಂಕಿ-ಸಂಖ್ಯೆಗಳ ಮಾಹಿತಿ ಪಡೆದ ಸಂಸದರು ಅಪೂರ್ಣವಾದ ಪ್ರಗತಿಯನ್ನು ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಅವರು ಮಾತನಾಡಿ, ಪ್ರಗತಿ ಪರಿಶೀಲನಾ ಸಭೆಯಲ್ಲಿ ಜನಪ್ರತಿನಿಧಿಗಳು ಯೋಜನೆಗಳ ಅನುಷ್ಠಾನದ ಕುರಿತು ಕೇಳುವ ಮಾಹಿತಿಯನ್ನು ನೀಡುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಈ ಸಭೆಯಲ್ಲಿ ಮಾಹಿತಿ ನೀಡಲು ಸಾಧ್ಯವಾಗದಿದ್ದಲ್ಲಿ, ಮುಂದಿನ ಸಭೆಯ ವೇಳೆಗೆ ಪ್ರಗತಿ ಪೂರ್ಣಗೊಳಿಸಿ ಸೂಕ್ತ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಿಯಾಂಗಾ ಎಂ., ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಶಿವಪ್ರಕಾಶ ದೇವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ ಹಾಗೂ ಸಿಬ್ಬಂಧಿ ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...