ಸಾರ್ವಜನಿಕ ವಾಹನ ಸಂಚಾರ ತಗ್ಗಿಸಲು ಸಂಸದರ ಸೂಚನೆ

Source: so news | Published on 21st March 2020, 11:56 PM | Coastal News | Don't Miss |

 

ಮಂಗಳೂರು:ಕೋರೋನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಸ್ಸುಗಳು ಸೇರಿದಂತೆ ಸಾರ್ವಜನಿಕ ವಾಹನಗಳ ಸಂಚಾರವನ್ನು ಕೆಳದಿನಗಳ ಮಟ್ಟಿಗೆ ಕಡಿಮೆಗೊಳಿಸಬೇಕೆಂದು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ನಡೆದ ಜಿಲ್ಲೆಯಲ್ಲಿ ಕೊರೋನಾ ನಿರ್ವಹಣೆ ಬಗ್ಗೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.       ಕೊರೋನಾ ಬಗ್ಗೆ ಆತಂಕ ಇದ್ದರೂ ಜಿಲ್ಲೆಯಲ್ಲಿ ಜನಸಂಚಾರ ಇನ್ನೂ ತಗ್ಗಿಲ್ಲ. ಜನ ನಿರಂತರವಾಗಿ ಓಡಾಡುತ್ತಿದ್ದಾರೆ, ಇದು ಆತಂಕಕಾರಿಯಾಗಿದೆ.  ಈ ನಿಟ್ಟಿನಲ್ಲಿ ಪ್ರಮುಖ ಮಾರ್ಗಗಳಲ್ಲಿ ಸಂಚರಿಸುವ ಬಸ್ಸುಗಳ ಸಂಖ್ಯೆಯನ್ನು ಕಡಿತಗೊಳಿಸಬೇಕೆಂದು ಅವರು ತಿಳಿಸಿದರು.
ವಿಧಾನಪರಿಷತ್ ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ಮಾತನಾಡಿ, ನಿಗಾವಣೆ ಅವಧಿಯಲ್ಲಿ ವಿದೇಶದಿಂದ ಬಂದ ವ್ಯಕ್ತಿಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇಡಬೇಕು. ಕೆಲವರು ಮುಕ್ತ ಸಂಚಾರ ಮಾಡುತ್ತಿರುವ ಮಾಹಿತಿಗಳಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರೂ ಸಹಕಾರ ನೀಡಬೇಕು ಎಂದು ಹೇಳಿದರು.
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯು ಆದಷ್ಟು ಬಹಿರಂಗ ಓಡಾಟವನ್ನು ನಿಯಂತ್ರಿಸಿ ತಮ್ಮ ಮನೆಯಲ್ಲಿ ಇರುವುದೇ ಇದಕ್ಕೆ ಏಕೈಕ ಪರಿಹಾರವಾಗಿದೆ. ಈ ನಿಟ್ಟಿನಲ್ಲಿ ಜನಸಂಚಾರನ್ನು ನಿರ್ಬಂಧಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.   ಜಿಲ್ಲೆಯಲ್ಲಿ ಕೊರೋನಾ ಪರೀಕ್ಷೆಗೆ ಪ್ರತ್ಯೇಕ ಪ್ರಯೋಗಾಲಯ ಅಗತ್ಯವಿದೆ. ಪ್ರಸಕ್ತ ಹಾಸನದಲ್ಲಿ ಜಿಲ್ಲೆಯ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಂಶಯಿತ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾದರೆ, ಜಿಲ್ಲೆಯಲ್ಲಿಯೇ ಪರೀಕ್ಷೆ ನಡೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ  ಕೂಡಲೇ ಇದನ್ನು ಸ್ಥಾಪಿಸುವಂತೆ ಆಗ್ರಹಿಸಿದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ಇಂದಿನ ಪರಿಸ್ಥಿತಿಯಲ್ಲಿ ಜನರ ಸಹಕಾರ ಮುಖ್ಯವಾಗಿದೆ. ಉತ್ತಮ ನಾಳೆಗಳಿಗಾಗಿ ಇಂದು ನಾವು ಕಷ್ಟಪಡಬೇಕು. ರೋಗ ಒಮ್ಮೆಲೆ ವ್ಯಾಪಿಸಿದರೆ ಮುಂದಿನ ದಿನಗಳಲ್ಲಿ ಇದರ ನಿಯಂತ್ರಣ ಕಷ್ಟವಾಗಲಿದೆ. ಸಾರ್ವಜನಿಕರು ತಮ್ಮ ದೈನಂದಿನ ಓಡಾಟವನ್ನು ನಿಯಂತ್ರಿಸಬೇಕೆಂದು ಅವರು ಹೇಳಿದರು.
ಶಾಸಕ ಯು.ಟಿ ಖಾದರ್ ಮಾತನಾಡಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಯ ರೋಗಿಗಳಿಗೆ ಮಾತ್ರ ಅವಕಾಶ ನೀಡಬೇಕು. ಹೊರರೋಗಿ ಚಿಕಿತ್ಸೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕು. ಜಿಲ್ಲಾಡಳಿತದ ನಿರ್ಬಂಧಗಳಿಗೆ ಸಾರ್ವಜನಿಕರು ಸಹಕಾರ ನೀಡದೇ ಇದ್ದರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸಭೆಯಲ್ಲಿ ಶಾಸಕರಾದ ರಾಜೇಶ್ ನಾಯಕ್, ಐವನ್ ಡಿಸೋಜಾ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೇಯರ್ ದಿವಾಕರ್, ಉಪಮೇಯರ್ ವೇದಾವತಿ,  ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಮತ್ತಿತರರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...