ಹೆದ್ದಾರಿ ಯೋಜನೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಂಸದರ ಸೂಚನೆ

Source: SO News | By Laxmi Tanaya | Published on 4th September 2021, 8:56 PM | Coastal News | Don't Miss |

ಮಂಗಳೂರು :ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಯೋಜನೆಗಳನ್ನು ವಿಳಂಬಕ್ಕೆ ಆಸ್ಪದವಿಲ್ಲದಂತೆ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರು ಸೂಚಿಸಿದರು.

ಅವರು  ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅನುಷ್ಠಾನ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.  

ಅಡ್ಡಹೊಳೆ-ಪೆರಿಯಶಾಂತಿ, ಪೆರಿಯಶಾಂತಿ-ಬಂಟ್ವಾಳ ಹಾಗೂ ಸನ್ನೂರು-ಬಿಕರ್ನಕಟ್ಟೆ ವ್ಯಾಪ್ತಿಯ ರಸ್ತೆ ನಿರ್ಮಾಣ ಯೋಜನೆಗಳನ್ನು ಕೈಗೊಳ್ಳಲಾಗಿದ್ದು, ಈ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅರ್ಪಿಸಬೇಕು ಎಂದರು.

ಆಗಾಗ ಸಭೆ ನಡೆಸಿ, ಯೋಜನೆ ಅನುಷ್ಠಾನದಲ್ಲಿ ಆದ ಪ್ರಗತಿಯ ಕುರಿತು ಚರ್ಚಿಸಬೇಕು, ಈ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ತಿರುವು ರಸ್ತೆಗಳನ್ನು ಗುರುತಿಸಿ, ಆ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು ಎಂದರು.

 ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿಶು ಮೋಹನ್, ಯೋಜನಾ ನಿರ್ದೇಶಕ ದೀಪಕ್ ಕುಮಾರ್, ಎಸ್.ಎಂ. ಔತಾಡೆ ನಿರ್ಮಾಣ ಕಂಪನಿಯ ಯೋಜನಾ ನಿರ್ದೇಶಕ ಮಹೇಂದ್ರ ರೆಡ್ಡಿ, ದಿಲೀಪ್ ಬಿಲ್ಡರ್ಸ್ ನ ರತ್ನಾಕರ ಸಭೆಯಲ್ಲಿದ್ದರು

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...