ಮಿಸ್ಟರ್ ದಸರಾ 2019 ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಭಟ್ಕಳದ ಯುವಕ ದ್ವಿತೀಯ

Source: so news | Published on 8th October 2019, 12:44 AM | Coastal News | Don't Miss |

ಭಟ್ಕಳ: ತಾಲೂಕಿನ ಬಂದರ ನಿವಾಸಿಯಾಗಿರು ನಿತೀನ ಚಂದ್ರ ನಾಯ್ಕ ಎನ್ನುವ ಯುವಕ ಮಿಸ್ಟರ್ ದಸರಾ 2019 ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಭಟ್ಕಳ ತಾಲೂಕಿಗೆ ಕೀರ್ತಿ ತಂದಿದ್ದಾನೆ

ಈ ವರ್ಷದ  ದಸರಾ ಕ್ರೀಡಾ ಸಮಿತಿ, ಯುವಜನ ಸೇವಾ ಕ್ರೀಡಾ ಇಲಾಖೆ ಮೈಸೂರು ಹಾಗೂ ಕರ್ನಾಟಕ ಸರ್ಕಾರ ಇದರೊಂದಿಗೆ ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿ ಬಿಲ್ಡಿಂಗ್ ಇವರ ಸಹಯೋಗದೊಂದಿಗೆ ಚಾಮುಂಡಿ ವಿಹಾರ ಸ್ಟೇಡಿಯಂ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ದೇಹದಾರ್ಡ್ಯ ಸ್ಪರ್ಧೆಯಲ್ಲಿ 
ನಿತೀನ ಚಂದ್ರ ನಾಯ್ಕ  ದ್ವಿತೀಯ ಸ್ಥಾನ ಪಡೆದು ರಜತ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.ಇವರು ಭಟ್ಕಳದ ಹೆಸರಾಂತ ಫ್ರೆಂಡ್ಸ್ ಜಿಮ್ ನಲ್ಲಿ ತರಬೇತಿ ಪಡೆಯುತ್ತಿದ್ದಾನೆ.

ವಿಜೇತರನ್ನು ತರಬೇತುದಾರರಾದ ವೆಂಕಟೇಶ್ ನಾಯ್ಕ್ ಹಾಗೂ ಜಿಲ್ಲಾ ದೇಹದಾರ್ಢ್ಯ ಸಂಘದ ಅಧ್ಯಕ್ಷರಾದ ಎಸ್ ಡಿ ನಾಯ್ಕ ಹಾಗೂ ರಾಜ್ಯ ದೇಹದಾಡ್ಯ ಸಂಘದ ಉಪಾಧ್ಯಕ್ಷರು ಹಾಗೂ ರಾಜ್ಯ ದೇಹದಾಡ್ಯ ತೀರ್ಪುಗಾರರ ಸಂಘದ ಅಧ್ಯಕ್ಷರಾದ ಪ್ರೊಫೆಸರ್ ಜಿ ಡಿ ಭಟ್  ಹಾಗೂ ಭಟ್ಕಳದ ಸಮಸ್ತ ನಾಗರಿಕರು ವಿಜೇತರನ್ನು ಅಭಿನಂದನೆ ಸಲ್ಲಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...