ಕುರಾನ್ ಪ್ರವಚನಕಾರ ಮುಹಮ್ಮದ್ ಕುಂಞ ಗೆ ‘ಸೇವಾರತ್ನ’ ಪ್ರಶಸ್ತಿ

Source: sonews | By Staff Correspondent | Published on 2nd December 2019, 5:45 PM | Coastal News | State News | Don't Miss |

ಬೆಳಗಾವಿಯ ನಾಗನೂರು ಶ್ರೀ ರುದ್ರಾಕ್ಷಿ ಮಠ ವತಿಯಿಂದ ನೀಡಲ್ಪಡುವ ಪ್ರತಿಷ್ಠಿತಸೇವಾರತ್ನಪ್ರಶಸ್ತಿಗೆ ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಯವರು ಭಾಜನರಾಗಿದ್ದಾರೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಪ್ರಶಸ್ತಿಯು ರೂ. 10000/- ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಹೊಂದಿದೆ.
ನಾಡಿನ ಖ್ಯಾತ ವಾಗ್ಮಿಯಾಗಿರುವ ಮುಹಮ್ಮದ್ ಕುಂಞಯವರು ನಾಡಿನ ವಿವಿಧ ಕಡೆಗಳಲ್ಲಿ ಕನ್ನಡ ಭಾಷೆಯಲ್ಲಿ ಸರಳವಾಗಿ ನೂರಾರು ಕುರ್ ಆನ್ ಪ್ರವಚನಗಳನ್ನು ನೀಡಿ ಜನರ ಮನಸ್ಸನ್ನು ಜೋಡಿಸುವ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ರಾಜ್ಯದಾದ್ಯಂತ ಸಂಚಾರ ನಡೆಸಿ ವಿವಿಧ ಧರ್ಮೀಯರ ಮಧ್ಯೆ ಸೌಹಾರ್ದತೆಯನ್ನು ಸ್ಥಾಪಿಸಲು ತನ್ನದೇ ಕೊಡುಗೆಗಳನ್ನು ನೀಡಿದ್ದಾರೆ. ನಾಡಿನ ಖ್ಯಾತ ಪ್ರಕಾಶನ ಸಂಸ್ಥೆ ಶಾಂತಿ ಪ್ರಕಾಶನ ವ್ಯವಸ್ಥಾಪಕರಾದ ಇವರು ವಿವಿಧ ಜಾತಿ-ಸಮುದಾಯಗಳ ಮಧ್ಯೆ ಸ್ನೇಹ ಸೇತುವಾಗಿರುವ ಸದ್ಭಾವನಾ ವೇದಿಕೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನಾಗನೂರು ಸ್ವಾಮಿಗಳು ಎಂದೇ ಕರ್ನಾಟಕದ ಗಡಿಭಾಗದಲ್ಲಿ ಪ್ರಖ್ಯಾತರಾದ ಡಾ. ಶಿವಬಸವ ಮಹಾಸ್ವಾಮಿಗಳವರ 130ನೆಯ ಜಯಂತಿಯ ಸಂದರ್ಭದಲ್ಲಿ ದಿನಾಂಕ 7-12-2019 ರಂದು ಶನಿವಾರ ಸಾಯಂಕಾಲ 5.30ಕ್ಕೆ ಸೇವಾರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ನಾಗನೂರು ಶ್ರೀ ರುದ್ರಾಕ್ಷಿ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ಧರಾಮ ಸ್ವಾಮಿಗಳು ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...